Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 4:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಯಾಯೇಲಳು ಹೊರಗೆ ಹೋಗಿ ಸೀಸೆರನನ್ನು ಎದುರುಗೊಂಡು ಅವನಿಗೆ, “ಸ್ವಾಮೀ, ಒಳಗೆ ಬನ್ನಿರಿ; ಹೆದರಬೇಡಿರಿ, ನಮ್ಮಲ್ಲಿಗೆ ಬನ್ನಿರಿ” ಅನ್ನಲು ಅವನು ಗುಡಾರದೊಳಗೆ ಹೋದನು. ಆಗ ಆಕೆಯು ಅವನನ್ನು ಕಂಬಳಿಯಿಂದ ಮುಚ್ಚಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಯಾಯೇಲಳು ಹೊರಗೆಹೋಗಿ ಸೀಸೆರನನ್ನು ಎದುರುಗೊಂಡು ಅವನಿಗೆ, “ಒಡೆಯಾ, ಒಳಗೆ ಬನ್ನಿ; ಹೆದರಬೇಡಿ, ನಮ್ಮಲ್ಲಿಗೆ ಬನ್ನಿ,” ಎನ್ನಲು ಅವನು ಗುಡಾರದೊಳಗೆ ಹೋದನು. ಆಗ ಆಕೆ ಅವನನ್ನು ಕಂಬಳಿಯಿಂದ ಮುಚ್ಚಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಯಾಯೇಲಳು ಹೊರಗೆ ಹೋಗಿ ಸೀಸೆರನನ್ನು ಎದುರುಗೊಂಡು ಅವನಿಗೆ - ಸ್ವಾಮೀ, ಒಳಗೆ ಬನ್ನಿರಿ; ಹೆದರಬೇಡಿರಿ, ನಮ್ಮಲ್ಲಿ ಬನ್ನಿರಿ ಅನ್ನಲು ಅವನು ಗುಡಾರದೊಳಗೆ ಹೋದನು. ಆಗ ಆಕೆಯು ಅವನನ್ನು ಕಂಬಳಿಯಿಂದ ಮುಚ್ಚಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಸೀಸೆರನು ಬರುವುದನ್ನು ಯಾಯೇಲಳು ಕಂಡಳು. ಆದ್ದರಿಂದ ಅವನನ್ನು ಬರಮಾಡಿಕೊಳ್ಳಲು ಹೊರಗೆ ಬಂದಳು. ಯಾಯೇಲಳು ಸೀಸೆರನಿಗೆ, “ಸ್ವಾಮೀ, ನನ್ನ ಗುಡಾರದೊಳಗೆ ಬನ್ನಿ, ಭಯಪಡಬೇಡಿ” ಎಂದು ಕರೆದಳು. ಆದ್ದರಿಂದ ಸೀಸೆರನು ಗುಡಾರದೊಳಗೆ ಹೋದನು. ಅವಳು ಸೀಸೆರನ ಮೇಲೆ ಕಂಬಳಿಯನ್ನು ಹೊದಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆಗ ಯಾಯೇಲಳು ಸೀಸೆರನನ್ನು ಎದುರುಗೊಳ್ಳುವುದಕ್ಕೆ ಹೋಗಿ ಅವನಿಗೆ, “ಒಳಗೆ ಬಾ, ನನ್ನ ಪ್ರಭುವೇ, ನಮ್ಮ ಬಳಿಗೆ ಬಾ, ಭಯಪಡಬೇಡ,” ಎಂದು ಹೇಳಿದಳು. ಅವನನ್ನು ಒಂದು ಕಂಬಳಿಯಿಂದ ಮುಚ್ಚಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 4:18
3 ತಿಳಿವುಗಳ ಹೋಲಿಕೆ  

ಆಗ ಎಲೀಷನು ಅವರಿಗೆ, “ನೀವು ಹೋಗಬೇಕೆಂದಿದ್ದ ಪಟ್ಟಣವೂ, ದಾರಿಯೂ ಇದಲ್ಲ, ನನ್ನ ಜೊತೆಯಲ್ಲಿ ಬನ್ನಿರಿ, ನೀವು ಹುಡುಕುತ್ತಿರುವ ಮನುಷ್ಯನ ಬಳಿಗೆ ನಿಮ್ಮನ್ನು ಕರೆದುಕೊಂಡು ಹೋಗುತ್ತೇನೆ” ಎಂದು ಹೇಳಿ ಅವರನ್ನು ಸಮಾರ್ಯಕ್ಕೆ ಕರೆದುಕೊಂಡು ಹೋದನು.


ಹಾಚೋರಿನ ಅರಸನಾದ ಯಾಬೀನನಿಗೂ ಕೇನ್ಯನಾದ ಹೆಬೆರನ ಮನೆಯವರಿಗೂ ಸಮಾಧಾನವಿದ್ದುದರಿಂದ ಸೀಸೆರನು ಕಾಲುನಡಿಗೆಯಿಂದ ಕೇನ್ಯನಾದ ಹೆಬೆರನ ಹೆಂಡತಿ ಯಾಯೇಲಳ ಗುಡಾರದ ಕಡೆಗೆ ಹೋದನು.


ಅವನು ಆಕೆಗೆ, “ದಯವಿಟ್ಟು ಸ್ವಲ್ಪ ನೀರನ್ನು ಕೊಡು, ನನಗೆ ಬಹಳ ಬಾಯಾರಿಕೆಯಾಗಿದೆ” ಅಂದನು. ಆಕೆಯು ಬುದ್ದಲಿಯನ್ನು ಬಿಚ್ಚಿ ಹಾಲನ್ನು ಕುಡಿಯಲು ಕೊಟ್ಟು ಅವನನ್ನು ಪುನಃ ಮುಚ್ಚಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು