Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 4:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅವನು ಆಕೆಗೆ, “ದಯವಿಟ್ಟು ಸ್ವಲ್ಪ ನೀರನ್ನು ಕೊಡು, ನನಗೆ ಬಹಳ ಬಾಯಾರಿಕೆಯಾಗಿದೆ” ಅಂದನು. ಆಕೆಯು ಬುದ್ದಲಿಯನ್ನು ಬಿಚ್ಚಿ ಹಾಲನ್ನು ಕುಡಿಯಲು ಕೊಟ್ಟು ಅವನನ್ನು ಪುನಃ ಮುಚ್ಚಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅವನು ಆಕೆಗೆ, “ದಯವಿಟ್ಟು ಸ್ವಲ್ಪ ನೀರನ್ನು ಕೊಡು, ನನಗೆ ಬಹಳ ದಾಹವಾಗಿದೆ,” ಎಂದನು. ಆಕೆ ಬುದ್ದಲಿಯನ್ನು ಬಿಚ್ಚಿ ಹಾಲನ್ನು ಕುಡಿಯಕೊಟ್ಟು ಅವನನ್ನು ಮತ್ತೆ ಮುಚ್ಚಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅವನು ಆಕೆಗೆ - ದಯವಿಟ್ಟು ಸ್ವಲ್ಪ ನೀರನ್ನು ಕೊಡು, ನನಗೆ ಬಹಳ ದಾಹವಾಗಿದೆ ಅಂದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಸೀಸೆರನು ಯಾಯೇಲಳಿಗೆ, “ನನಗೆ ಬಾಯಾರಿಕೆಯಾಗಿದೆ. ದಯವಿಟ್ಟು ಕುಡಿಯಲು ಸ್ವಲ್ಪ ನೀರನ್ನು ಕೊಡು” ಎಂದು ಕೇಳಿದನು. ಯಾಯೇಲಳ ಬಳಿ ಪ್ರಾಣಿಗಳ ಚರ್ಮದಿಂದ ಮಾಡಿದ ಒಂದು ಚೀಲವಿತ್ತು. ಆಕೆಯು ಅದರಲ್ಲಿ ಹಾಲಿಟ್ಟಿದ್ದಳು. ಯಾಯೇಲಳು ಸೀಸೆರನಿಗೆ ಒಂದು ಗುಟುಕು ಹಾಲನ್ನೇ ಕೊಟ್ಟಳು. ನಂತರ ಅವಳು ಸೀಸೆರನನ್ನು ಮುಚ್ಚಿಬಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಸೀಸೆರನು ಅವಳಿಗೆ, “ದಯಮಾಡಿ, ನನಗೆ ಕುಡಿಯುವುದಕ್ಕೆ ಸ್ವಲ್ಪ ನೀರು ಕೊಡು, ನನಗೆ ದಾಹವಾಗಿದೆ,” ಎಂದನು. ಅವಳು ಹಾಲಿನ ಬುದ್ದಲಿಯನ್ನು ತೆರೆದು, ಅವನಿಗೆ ಕುಡಿಯುವುದಕ್ಕೆ ಕೊಟ್ಟು, ಅವನನ್ನು ಮುಚ್ಚಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 4:19
8 ತಿಳಿವುಗಳ ಹೋಲಿಕೆ  

ಸಮಾರ್ಯದವಳಾದ ಒಬ್ಬ ಸ್ತ್ರೀ ನೀರು ಸೇದುವುದಕ್ಕೆ ಬಂದಳು. ಯೇಸು ಆಕೆಯನ್ನು “ನನಗೆ ಕುಡಿಯುವುದಕ್ಕೆ ನೀರನ್ನು ಕೊಡು,” ಎಂದು ಕೇಳಿದನು.


ಬಾಯಾರಿ ನಾಲಿಗೆ ಒಣಗಿ ನೀರನ್ನು ಹುಡುಕಿ ಹೊಂದದ ದೀನದರಿದ್ರರಿಗೆ ಯೆಹೋವನೆಂಬ ನಾನು ಪ್ರಸನ್ನನಾಗುವೆನು, ಇಸ್ರಾಯೇಲಿನ ದೇವರಾದ ನಾನು ಅವರನ್ನು ಕೈಬಿಡೆನು.


ಅವನು ಅಲ್ಲಿಂದ ಹೊರಟು ಚಾರೆಪ್ತಾದ ಊರುಬಾಗಿಲಿನ ಸಮೀಪಕ್ಕೆ ಬಂದಾಗ ಸೌದೆಯನ್ನು ಕೂಡಿಸುತ್ತಿರುವ ಒಬ್ಬ ವಿಧವೆಯನ್ನು ಕಂಡನು. ಅವನು ಆಕೆಯನ್ನು ಕೂಗಿ, “ದಯವಿಟ್ಟು ಕುಡಿಯುವುದಕ್ಕೆ ಒಂದು ತಂಬಿಗೆಯಲ್ಲಿ ನೀರು ತೆಗೆದುಕೊಂಡು ಬಾ” ಎಂದು ಹೇಳಿದನು.


ನೀರಿಗೆ ಬರುವ ಯಾವ ಸ್ತ್ರೀಗೆ, ‘ನೀನು ದಯವಿಟ್ಟು, ನಿನ್ನ ಕೊಡದಿಂದ ನನಗೆ ಸ್ವಲ್ಪ ನೀರನ್ನು ಕುಡಿಯುವುದಕ್ಕೆ ಕೊಡಮ್ಮಾ’ ಎಂದು ನಾನು ಕೇಳುವಾಗ, ಅವಳು,


ಯಾಯೇಲಳು ಹೊರಗೆ ಹೋಗಿ ಸೀಸೆರನನ್ನು ಎದುರುಗೊಂಡು ಅವನಿಗೆ, “ಸ್ವಾಮೀ, ಒಳಗೆ ಬನ್ನಿರಿ; ಹೆದರಬೇಡಿರಿ, ನಮ್ಮಲ್ಲಿಗೆ ಬನ್ನಿರಿ” ಅನ್ನಲು ಅವನು ಗುಡಾರದೊಳಗೆ ಹೋದನು. ಆಗ ಆಕೆಯು ಅವನನ್ನು ಕಂಬಳಿಯಿಂದ ಮುಚ್ಚಿದಳು.


ಅವನು ಆಕೆಗೆ, “ನೀನು ಗುಡಾರದ ಬಾಗಿಲಲ್ಲೇ ನಿಂತಿರು; ಯಾರಾದರೂ ಬಂದು ‘ಇಲ್ಲಿ ಒಬ್ಬ ಮನುಷ್ಯನಿದ್ದಾನೆಯೇ ಎಂದು ವಿಚಾರಿಸಿದರೆ’ ಇಲ್ಲ ಎಂದು ಹೇಳು” ಎಂದು ಹೇಳಿದನು.


“ಎಲ್ಲಾ ಸ್ತ್ರೀಯರಲ್ಲಿ ಕೇನ್ಯನಾದ ಹೆಬೆರನ ಹೆಂಡತಿ ಯಾಯೇಲಳೆ ಭಾಗ್ಯವಂತಳು. ಗುಡಾರಗಳಲ್ಲಿ ವಾಸಿಸುವ ಸ್ತ್ರೀಯರಲ್ಲಿ ಆಕೆಯೇ ಆಶೀರ್ವದಿಸಲ್ಪಟ್ಟವಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು