Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 4:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಒಂಭೈನೂರು ಕಬ್ಬಿಣದ ರಥಗಳುಳ್ಳ ಇವನು ಇಸ್ರಾಯೇಲ್ಯರನ್ನು ಇಪ್ಪತ್ತು ವರ್ಷಗಳ ಕಾಲ ಕಠಿಣವಾಗಿ ಬಾಧಿಸುತ್ತಿರಲು ಅವರು ಯೆಹೋವನಿಗೆ ಮೊರೆಯಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಒಂಬೈನೂರು ಕಬ್ಬಿಣದ ರಥಗಳನ್ನು ಪಡೆದಿದ್ದ ಇವನು ಇಸ್ರಯೇಲರನ್ನು ಇಪ್ಪತ್ತು ವರ್ಷಕಾಲ ದಬ್ಬಾಳಿಕೆಗೆ ಈಡುಪಡಿಸಿದನು. ಆಗ ಅವರು ಸರ್ವೇಶ್ವರನಿಗೆ ಮೊರೆಯಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಒಂಭೈನೂರು ಕಬ್ಬಿಣದ ರಥಗಳುಳ್ಳ ಇವನು ಇಸ್ರಾಯೇಲ್ಯರನ್ನು ಇಪ್ಪತ್ತು ವರುಷಗಳ ತನಕ ಬಲವಾಗಿ ಬಾಧಿಸುತ್ತಿರಲು ಅವರು ಯೆಹೋವನಿಗೆ ಮೊರೆಯಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಸೀಸೆರನ ಹತ್ತಿರ ಒಂಭೈನೂರು ಕಬ್ಬಿಣದ ರಥಗಳಿದ್ದವು. ಅವನು ಇಪ್ಪತ್ತು ವರ್ಷಗಳ ಕಾಲ ಇಸ್ರೇಲರನ್ನು ತುಂಬ ಬಾಧಿಸಿದನು. ಆದ್ದರಿಂದ ಇಸ್ರೇಲರು ಸಹಾಯಕ್ಕಾಗಿ ಯೆಹೋವನಲ್ಲಿ ಮೊರೆಯಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ಇಸ್ರಾಯೇಲರು ಯೆಹೋವ ದೇವರಿಗೆ ಮೊರೆಯಿಟ್ಟರು. ಅವನಿಗೆ ಒಂಬೈನೂರು ಕಬ್ಬಿಣದ ರಥಗಳಿದ್ದವು. ಅವನು ಇಸ್ರಾಯೇಲರನ್ನು ಇಪ್ಪತ್ತು ವರುಷ ಬಲವಾಗಿ ಬಾಧೆಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 4:3
19 ತಿಳಿವುಗಳ ಹೋಲಿಕೆ  

ಯೆಹೋವನು ಯೆಹೂದ್ಯರ ಸಂಗಡ ಇದ್ದುದರಿಂದ ಅವರು ಪರ್ವತಪ್ರದೇಶಗಳನ್ನೆಲ್ಲಾ ಸ್ವಾಧೀನಪಡಿಸಿಕೊಂಡರು. ಆದರೆ ತಗ್ಗಿನ ಪ್ರದೇಶಗಳಲ್ಲಿ ವಾಸಿಸುವವರಿಗೆ ಕಬ್ಬಿಣದ ರಥಗಳಿದ್ದುದರಿಂದ ಅವರನ್ನು ಹೊರಡಿಸುವುದಕ್ಕೆ ಆಗಲಿಲ್ಲ.


ಶತ್ರುಗಳು ಅವರನ್ನು ಕುಗ್ಗಿಸಿದರು; ಅವರ ಕೈಕೆಳಗೆ ತಗ್ಗಿಹೋದರು.


ಇಸ್ರಾಯೇಲರು ಯೆಹೋವನಿಗೆ ಮೊರೆಯಿಟ್ಟಾಗ ಆತನು ಅವರನ್ನು ಬಿಡಿಸುವುದಕ್ಕೋಸ್ಕರ ರಕ್ಷಕನನ್ನು ಎಬ್ಬಿಸಿದನು. ಕಾಲೇಬನ ತಮ್ಮನೂ ಕೆನಜನ ಮಗನೂ ಆದ ಒತ್ನೀಯೇಲನೇ ಆ ರಕ್ಷಕನು.


ಸಂಹಾರವಾಗುವಾಗೆಲ್ಲಾ ಅವರು ದೇವರನ್ನು ನೆನಸಿ, ಪುನಃ ಆತನ ಪ್ರಸನ್ನತೆಯನ್ನು ಬಯಸಿ,


ಕಷ್ಟಕಾಲದಲ್ಲಿ ನನಗೆ ಮೊರೆಯಿಡಿರಿ, ಬಿಡಿಸುವೆನು; ಆಗ ನನ್ನನ್ನು ಕೊಂಡಾಡುವಿರಿ.


“ನಮ್ಮ ದೇವರಾದ ಯೆಹೋವನು ನಮ್ಮನ್ನು ಫಿಲಿಷ್ಟಿಯರ ಕೈಯಿಂದ ತಪ್ಪಿಸಿ ರಕ್ಷಿಸುವ ಹಾಗೆ ನೀನು ನಮಗೋಸ್ಕರ ಆತನಿಗೆ ಮೊರೆಯಿಡು, ಸುಮ್ಮನಿರಬೇಡ” ಅಂದರು.


ಆಗ ಆತನ ಮನಸ್ಸು ಇಸ್ರಾಯೇಲರ ಸಂಕಟದ ನಿಮಿತ್ತ ಬಹಳವಾಗಿ ನೊಂದಿತು.


ಜನರು ಅನ್ಯದೇವತೆಗಳನ್ನು ಆರಿಸಿಕೊಂಡಿದ್ದರು; ಯುದ್ಧವು ಉರುಬಾಗಿಲವರೆಗೂ ಬಂದಿತ್ತು. ಇಸ್ರಾಯೇಲರ ನಲ್ವತ್ತು ಸಾವಿರ ಸೈನಿಕರ ಮಧ್ಯದಲ್ಲಿ ಗುರಾಣಿ ಬರ್ಜಿಗಳು ಇರಲೇ ಇಲ್ಲ.


ಅವರು ಯೆಹೋವನಿಗೆ ಮೊರೆಯಿಡಲು ಆತನು ಅವರನ್ನು ರಕ್ಷಿಸುವುದಕ್ಕೋಸ್ಕರ ಬೆನ್ಯಾಮೀನ್ ಕುಲದ ಗೇರನ ಮಗನಾದ ಏಹೂದನನ್ನು ಎಬ್ಬಿಸಿದನು. ಅವನು ಎಡಚನಾಗಿದ್ದನು. ಇಸ್ರಾಯೇಲರು ಅವನ ಮೂಲಕವಾಗಿ ಮೋವಾಬ್ಯರ ಅರಸನಾದ ಎಗ್ಲೋನನಿಗೆ ಕಪ್ಪ ಕಾಣಿಕೆಯನ್ನು ಕಳುಹಿಸಿದರು.


ಅವರು ತಿರುಗಿ ಯೆಹೋಶುವನಿಗೆ, “ನಮ್ಮ ಪರ್ವತ ಪ್ರದೇಶವು ನಮಗೆ ಸಾಲುವುದಿಲ್ಲ. ಬೇತಷೆಯಾನ್ ಮತ್ತು ಅದಕ್ಕೆ ಸೇರಿದ ಊರುಗಳಿರುವ ಕಣಿವೆಯಲ್ಲೂ ಹಾಗೂ ಇಜ್ರೇಲಿನ ಕಣಿವೆಯಲ್ಲೂ ವಾಸಮಾಡುವ ಕಾನಾನ್ಯರೆಲ್ಲರೂ ಕಬ್ಬಿಣದ ರಥವುಳ್ಳವರು” ಎಂದರು


ನಿಮಗೆ ಗುರುತೇ ಇಲ್ಲದ ಜನಾಂಗದವರು ಬಂದು ನಿಮ್ಮ ದೇಶದ ಬೆಳೆಯನ್ನೂ ಮತ್ತು ನಿಮ್ಮ ಕಷ್ಟಾರ್ಜಿತವನ್ನೂ ತಿಂದುಬಿಡುವರು. ನೀವಾದರೋ ಯಾವಾಗಲೂ ಹಿಂಸೆಗೂ ಬಲಾತ್ಕಾರಕ್ಕೂ ಗುರಿಯಾಗಿ,


ನೀವು ಕುರುಡರಂತೆ ಮಧ್ಯಾಹ್ನದಲ್ಲಿಯೂ ಕತ್ತಲಾಯಿತೆಂದು ತಡವರಿಸುತ್ತಾ ಇರುವಿರಿ; ನೀವು ಮಾಡುವ ಯಾವ ಕೆಲಸವೂ ಕೈಗೂಡುವುದಿಲ್ಲ. ಅನ್ಯರು ಯಾವಾಗಲೂ ನಿಮ್ಮನ್ನು ಪೀಡಿಸುತ್ತಾ ನಿಮ್ಮ ಸೊತ್ತನ್ನು ಸೂರೆಮಾಡುತ್ತಾ ಇರುವರು; ತಪ್ಪಿಸುವವರು ಯಾರೂ ಇರುವುದಿಲ್ಲ.


ಆ ಕಾಲದಲ್ಲಿ ಲಪ್ಪೀದೋತನ ಹೆಂಡತಿ, ದೆಬೋರಳೆಂಬ ಪ್ರವಾದಿನಿಯು ಇಸ್ರಾಯೇಲರಲ್ಲಿ ನ್ಯಾಯತೀರ್ಪನ್ನು ಮಾಡುತ್ತಿದ್ದಳು.


ಅವನು ತನ್ನ ಒಂಭೈನೂರು ಕಬ್ಬಿಣದ ರಥಗಳನ್ನೂ, ಎಲ್ಲಾ ಸೈನ್ಯವನ್ನೂ ತೆಗೆದುಕೊಂಡು ಅನ್ಯಜನರ ಹರೋಷೆತಿನಿಂದ ಕೀಷೋನ್ ಹಳ್ಳಕ್ಕೆ ಬಂದನು.


ಹೀಗೆ ಬಹಳ ದಿನಗಳು ಕಳೆದ ನಂತರ ಐಗುಪ್ತ ದೇಶದ ಅರಸನು ಸತ್ತನು. ಇಸ್ರಾಯೇಲರು ತಾವು ಮಾಡಬೇಕಾದ ಬಿಟ್ಟೀ ಕೆಲಸಕ್ಕಾಗಿ ನಿಟ್ಟುಸಿರು ಬಿಟ್ಟು ಗೋಳಾಡುತ್ತಾ ಇದ್ದರು. ಆ ಗೋಳು ದೇವರಿಗೆ ಮುಟ್ಟಿತು.


ಇಸ್ರಾಯೇಲರು ಮಿದ್ಯಾನ್ಯರ ದೆಸೆಯಿಂದ ಬಹಳವಾಗಿ ಕುಗ್ಗಿಹೋಗಿ ಯೆಹೋವನಿಗೆ ಮೊರೆಯಿಟ್ಟರು.


ಆಗ ಅವರು ಯೆಹೋವನಿಗೆ, “ನಾವು ನಮ್ಮ ದೇವರಾದ ನಿನ್ನನ್ನು ಬಿಟ್ಟು, ಬಾಳನ ಪ್ರತಿಮೆಗಳನ್ನು ಪೂಜಿಸಿ, ನಿನಗೆ ವಿರುದ್ಧವಾಗಿ ಪಾಪಮಾಡಿದ್ದೇವೆ” ಎಂದು ಮೊರೆಯಿಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು