ನ್ಯಾಯಸ್ಥಾಪಕರು 4:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆಕೆ ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿ ರಾಮಕ್ಕೂ ಬೇತೇಲಿಗೂ ಮಧ್ಯದಲ್ಲಿರುವ ದೆಬೋರಳ ಖರ್ಜೂರ ವೃಕ್ಷವೆಂದು ಹೆಸರುಗೊಂಡ ಮರದ ಕೆಳಗೆ ಕುಳಿತುಕೊಂಡಿರುತ್ತಿದ್ದಳು. ಇಸ್ರಾಯೇಲರು ನ್ಯಾಯತೀರ್ಪಿಗಾಗಿ ಆಕೆಯ ಬಳಿಗೆ ಬರುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಆಕೆ ಎಫ್ರಯಿಮ್ ಬೆಟ್ಟದ ಸೀಮೆಯಲ್ಲಿ ರಾಮಕ್ಕೂ ಬೇತೇಲಿಗೂ ಮಧ್ಯದಲ್ಲಿರುವ ‘ದೆಬೋರಳ ಖರ್ಜೂರ ವೃಕ್ಷ’ವೆಂದು ಹೆಸರುಗೊಂಡ ಮರದ ಕೆಳಗೆ ಆಸೀನಳಾಗಿರುತ್ತಿದ್ದಳು. ಇಸ್ರಯೇಲರು ನ್ಯಾಯತೀರ್ಪಿಗಾಗಿ ಆಕೆಯ ಬಳಿಗೆ ಬರುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಆಕೆಯು ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿ ರಾಮಕ್ಕೂ ಬೇತೇಲಿಗೂ ಮಧ್ಯದಲ್ಲಿರುವ ದೆಬೋರಳ ಖರ್ಜೂರವೃಕ್ಷವೆಂದು ಹೆಸರುಗೊಂಡ ಮರದ ಕೆಳಗೆ ಆಸೀನಳಾಗಿರುವಲ್ಲಿ ಇಸ್ರಾಯೇಲ್ಯರು ನ್ಯಾಯ ನಿರ್ಣಯಕ್ಕೋಸ್ಕರ ಆಕೆಯ ಬಳಿಗೆ ಬರುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಒಂದು ದಿನ, ಆಕೆ ದೆಬೋರಳ ಖರ್ಜೂರದ ಮರವೆಂದು ಪ್ರಸಿದ್ಧವಾದ ಮರದ ಕೆಳಗೆ ಕುಳಿತಿದ್ದಳು. ಆಗ ಇಸ್ರೇಲಿನ ಜನರು ಆಕೆಯ ಹತ್ತಿರ ಬಂದು, “ಸೀಸೆರನ ಬಗ್ಗೆ ಏನು ಮಾಡಬೇಕು?” ಎಂದು ಕೇಳಿದರು. ದೆಬೋರಳ ಖರ್ಜೂರಮರವು ಎಫ್ರಾಯೀಮ್ ಬೆಟ್ಟಪ್ರದೇಶದ ರಾಮಕ್ಕೂ ಬೇತೇಲಿಗೂ ಮಧ್ಯದಲ್ಲಿ ಇದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ದೆಬೋರಳು ರಾಮಕ್ಕೂ ಬೇತೇಲಿಗೂ ಮಧ್ಯದಲ್ಲಿ ಎಫ್ರಾಯೀಮ್ ಬೆಟ್ಟದಲ್ಲಿ ಖರ್ಜೂರದ ಮರದ ಕೆಳಗೆ ವಾಸಿಸುತ್ತಿದ್ದಳು. ಇಸ್ರಾಯೇಲರು ಅವಳ ಬಳಿಗೆ ನ್ಯಾಯಕ್ಕಾಗಿ ಬರುತ್ತಿದ್ದರು. ಅಧ್ಯಾಯವನ್ನು ನೋಡಿ |