Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 5:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಗಿಲ್ಯಾದ್ಯರು ಯೊರ್ದನಿನ ಆಚೆಯಲ್ಲೇ ಉಳಿದರು. ದಾನ್ ಕುಲದವರು ಹಡಗುಗಳಲ್ಲಿಯೇ ಉಳಿದದ್ದೇಕೆ? ಆಶೇರ್ ಕುಲದವರು ತಮ್ಮ ರೇವುಗಳನ್ನು ಬಿಡದೆ ಸಮುದ್ರ ತೀರದಲ್ಲಿ ಸುಮ್ಮನೆ ಕುಳಿತುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಗಿಲ್ಯಾದರು ಉಳಿದರು ಜೋರ್ಡನಿನ ಆಚೆಯಲ್ಲೇ ದಾನ್ ಕುಲದವರು ಉಳಿಯರೇಕೆ, ಹಡಗುಗಳಲ್ಲೇ? ಅಶೇರ್ ಕುಲದವರೋ ಅಂಟುಕೊಂಡರು ತಮ್ಮ ರೇವುಗಳಿಗೇ ನೆಮ್ಮದಿಯಾಗಿ ಕೂತುಬಿಟ್ಟರು ಸಮುದ್ರತೀರದಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಗಿಲ್ಯಾದ್ಯರು ಯೊರ್ದನಿನ ಆಚೆಯಲ್ಲೇ ಉಳಿದರು; ದಾನ್ ಕುಲದವರು ಹಡಗುಗಳಲ್ಲಿಯೇ ಉಳಿದದ್ದೇಕೆ? ಆಶೇರ್ ಕುಲದವರು ತಮ್ಮ ರೇವುಗಳನ್ನು ಬಿಡದೆ ಸಮುದ್ರತೀರದಲ್ಲಿ ಸುಮ್ಮನೆ ಕೂತುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಗಿಲ್ಯಾದಿನ ಜನರು ಜೋರ್ಡನ್ ನದಿಯ ಆಚೆಯ ದಡದಲ್ಲಿದ್ದ ತಮ್ಮ ಶಿಬಿರಗಳಲ್ಲಿ ಇದ್ದುಬಿಟ್ಟರು. ದಾನ್ ಕುಲದವರೇ, ನೀವೇಕೆ ನಿಮ್ಮ ಹಡಗುಗಳಲ್ಲಿಯೇ ಉಳಿದುಬಿಟ್ಟಿರಿ? ಆಶೇರ್ ಕುಲದವರು ಸಮುದ್ರತೀರದಲ್ಲಿರುವ ತಮ್ಮ ಸುರಕ್ಷಿತವಾದ ಬಂದರುಗಳಲ್ಲಿ ಉಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಗಿಲ್ಯಾದನು ಯೊರ್ದನ್ ನದಿಯ ಆಚೆ ವಾಸಿಸಿದನು. ದಾನನು ಹಡಗುಗಳಲ್ಲಿ ನಿಂತದ್ದೇನು? ಆಶೇರನು ಸಮುದ್ರದ ದಡದಲ್ಲಿದ್ದು, ತನ್ನ ರೇವುಗಳ ಬಳಿಯಲ್ಲಿ ವಾಸಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 5:17
6 ತಿಳಿವುಗಳ ಹೋಲಿಕೆ  

ಹೆಷ್ಬೋನಿನ ಅರಸನಾದ ಸೀಹೋನಿನ ರಾಜ್ಯದ ಉಳಿದ ಭಾಗವಾಗಿರುವ ಯಗ್ಜೇರ್, ಮೊದಲಾದ ಗಿಲ್ಯಾದಿನ ಎಲ್ಲಾ ಪಟ್ಟಣಗಳು, ರಬ್ಬಾ ಊರಿನ ಪೂರ್ವದಲ್ಲಿರುವ ಅರೋಯೇರ್ ಪಟ್ಟಣದ ವರೆಗೆ ವಿಸ್ತರಿಸಿಕೊಂಡಿರುವ ಅಮ್ಮೋನಿಯರ ಅರ್ಧ ರಾಜ್ಯ,


ಗಿಲ್ಯಾದಿನಲ್ಲಿ ಅರ್ಧ ಭಾಗವು ಓಗನ ರಾಜಧಾನಿಯಾಗಿದ್ದ, ಬಾಷಾನಿನ ಅಷ್ಟರೋತ್ ಹಾಗೂ ಎದ್ರೈ ಎಂಬ ಪಟ್ಟಣಗಳೂ ಮನಸ್ಸೆಯ ಮಗನಾದ ಮಾಕೀರನ ಗೋತ್ರದ ಅರ್ಧ ಜನರಿಗೆ ಸಿಕ್ಕಿದವು.


ಆಗ ರೂಬೇನ್ಯರೂ ಗಾದ್ಯರೂ ಮನಸ್ಸೆ ಕುಲದ ಅರ್ಧ ಜನರೂ ಕಾನಾನ್ ದೇಶದ ಶೀಲೋವಿನಲ್ಲಿದ್ದ ಇಸ್ರಾಯೇಲರನ್ನು ಬಿಟ್ಟು ಯೆಹೋವನ ಆಜ್ಞೆಗನುಸಾರವಾಗಿ ಮೋಶೆಯಿಂದ ತಮಗೆ ಸಿಕ್ಕಿದ ಸ್ವತ್ತಾದ ಗಿಲ್ಯಾದ್ ದೇಶಕ್ಕೆ ಹೊರಟು ಹೋದರು.


ಗೋಡೆಯಲ್ಲಿಯ ಬಿರುಕುಗಳ ಮೂಲಕ, ಪ್ರತಿಯೊಬ್ಬ ಸ್ತ್ರೀಯೂ ನೇರವಾಗಿ ತನ್ನ ಮುಂದೆಯೇ ಹೊರಟು ಹೋಗುವಳು, ಹರ್ಮೋನಿನ ದಿಕ್ಕಿನ ಕಡೆಗೆ ತಳ್ಳಲ್ಪಡುವಿರಿ” ಇದು ಯೆಹೋವನ ನುಡಿ.


ರಾಹೇಲಳ ದಾಸಿಯಾದ ಬಿಲ್ಹಳಲ್ಲಿ ಹುಟ್ಟಿದವರು: ದಾನ್, ನಫ್ತಾಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು