Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 5:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನಕ್ಷತ್ರಗಳೂ ಆಕಾಶಪಥದಲ್ಲಿದ್ದು ಸೀಸೆರನೊಡನೆ ಯುದ್ಧಮಾಡಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಕದನವಾಡಿದವು ತಾರೆಗಳು ಆಗಸದಿಂದಲೆ ಯುದ್ಧಮಾಡಿದವು ಸೀಸೆರನ ವಿರುದ್ಧ ತಮ್ಮಾ ಪಥದಿಂದಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ನಕ್ಷತ್ರಗಳೂ ಆಕಾಶಪಥದಲ್ಲಿದ್ದು ಸೀಸೆರನೊಡನೆ ಯುದ್ಧಮಾಡಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಪರಲೋಕದಿಂದ ನಕ್ಷತ್ರಗಳು ಯುದ್ಧ ಮಾಡಿದವು. ನಕ್ಷತ್ರಗಳು ಆಕಾಶಪಥದಿಂದ ಸೀಸೆರನೊಡನೆ ಯುದ್ಧ ಮಾಡಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆಕಾಶದಲ್ಲಿ ಇರುವವುಗಳು ಯುದ್ಧ ಮಾಡಿದವು. ನಕ್ಷತ್ರಗಳು ತಮ್ಮ ಓಟಗಳಲ್ಲಿ ಸೀಸೆರನಿಗೆ ವಿರೋಧವಾಗಿ ಯುದ್ಧ ಮಾಡಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 5:20
8 ತಿಳಿವುಗಳ ಹೋಲಿಕೆ  

ಅವರು ಇಸ್ರಾಯೇಲ್ಯರಿಗೆ ಬೆಂಗೊಟ್ಟು ಬೇತ್‍ಹೋರೋನಿನ ಇಳಿಜಾರಿನಲ್ಲಿ ಓಡುತ್ತಾ ಅಜೇಕವನ್ನು ತಲುಪುವವರೆಗೂ ಯೆಹೋವನು ಅವರ ಮೇಲೆ ಆಕಾಶದಿಂದ ದೊಡ್ಡ ಆಲಿಕಲ್ಲಿನ ಮಳೆಯನ್ನು ಸುರಿಸಿದನು. ಈ ಕಾರಣದಿಂದ ಅನೇಕರು ಸತ್ತರು ಇಸ್ರಾಯೇಲ್ಯರ ಕತ್ತಿಯಿಂದ ಸಂಹಾರವಾದವರಿಗಿಂತ ಆಲಿಕಲ್ಲಿನ ಮಳೆಯಿಂದ ನಾಶವಾದವರೇ ಹೆಚ್ಚು ಮಂದಿಯಾಗಿದ್ದರು.


ಹೇಗೆಂದರೆ, ಸಮುವೇಲನು ಯಜ್ಞವನ್ನು ಅರ್ಪಿಸುವ ವೇಳೆಯಲ್ಲಿ ಫಿಲಿಷ್ಟಿಯರು ಇಸ್ರಾಯೇಲರ ವಿರುದ್ಧ ಯುದ್ಧಕ್ಕೋಸ್ಕರ ಸಮೀಪಿಸಲಾಗಿ, ಯೆಹೋವನು ದೊಡ್ಡ ಗುಡುಗಿನಿಂದ ಅವರನ್ನು ಕಳವಳಗೊಳಿಸಿ ಇಸ್ರಾಯೇಲರಿಗೆ ಸೋತು ಓಡಿ ಹೋಗುವಂತೆ ಮಾಡಿದನು.


ಯೆಹೋವನು ಸೀಸೆರನನ್ನು ಅವನ ಎಲ್ಲಾ ಸೈನ್ಯರಥಗಳನ್ನೂ ಬಾರಾಕನ ಮುಂದೆ ಗಲಿಬಿಲಿಗೊಳಿಸಿ, ಕತ್ತಿಗೆ ತುತ್ತಾಗಿಸಿದನು. ಸೀಸೆರನು ರಥದಿಂದ ಇಳಿದು ಓಡಿಹೋದನು.


ಯೆಹೋವನು ಅಮೋರಿಯರನ್ನು ಇಸ್ರಾಯೇಲ್ಯರಿಗೆ ಒಪ್ಪಿಸಿದ ದಿನದಲ್ಲಿ ಯೆಹೋಶುವನು ಯೆಹೋವನಲ್ಲಿ ಒಂದು ವಿಜ್ಞಾಪನೆ ಮಾಡಿಕೊಂಡನು. “ಸೂರ್ಯನೇ, ನೀನು ಗಿಬ್ಯೋನಿನಲ್ಲೇ ನಿಲ್ಲು; ಚಂದ್ರನೇ, ನೀನು ಅಯ್ಯಾಲೋನ್ ಕಣಿವೆಯಲ್ಲೇ ನಿಲ್ಲು” ಎಂದು ಇಸ್ರಾಯೇಲ್ಯರ ಸಮಕ್ಷಮದಲ್ಲಿ ಆಜ್ಞಾಪಿಸಿದನು.


ಪೂರ್ವಪ್ರಸಿದ್ಧವಾದ ಕೀಷೋನ್ ಹೊಳೆಯು ಶತ್ರುಗಳನ್ನು ಕೊಚ್ಚಿಕೊಂಡು ಹೋಯಿತು. ನನ್ನ ಮನವೇ ನೀನು ಧೈರ್ಯದಿಂದ ಮುಂದಕ್ಕೆ ಹೊರಡು.


ಆ ಅಮೋರಿಯರಲ್ಲಿ ಯೆಹೋವನು ಇಸ್ರಾಯೇಲರ ಕುರಿತಾಗಿ ಅವರನ್ನು ಕಳವಳಗೊಳಿಸಿದ್ದರಿಂದ ಯೆಹೋಶುವನು ಅವರನ್ನು ಗಿಬ್ಯೋನಿನ ಹತ್ತಿರ ಸಂಪೂರ್ಣವಾಗಿ ಸೋಲಿಸಿ ಬೇತ್‌ಹೋರೋನ್ ಎಂಬ ಬೆಟ್ಟದ ದಾರಿಯಲ್ಲಿ ಅಜೇಕ, ಮಕ್ಕೇದ ಎಂಬ ಊರುಗಳವರೆಗೂ ಅವರನ್ನು ಹಿಂದಟ್ಟಿ ಸಂಹರಿಸಿದನು.


ಯುದ್ಧವು ಸುತ್ತಣ ಪ್ರದೇಶಗಳಲ್ಲಿ ಹಬ್ಬಿಕೊಂಡಿತು. ಆ ದಿನ ಕತ್ತಿಯಿಂದ ಹತರಾದವರಿಗಿಂತ ಕಾಡಿನಲ್ಲಿ ಹತರಾದವರೇ ಹೆಚ್ಚಾಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು