Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 5:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 “ಸೀಸೆರನ ತಾಯಿಯು ಕಿಟಿಕಿಯಿಂದ ನೋಡಿದಳು; ಸೀಸೆರನ ತಾಯಿಯು ಕಿಟಿಕಿಯ ಜಾಲರಿಗಳಿಂದ ಕೂಗಿದಳು. ‘ಅವನ ರಥವು ಬರುವುದಕ್ಕೆ ಏಕೆ ಇಷ್ಟುಹೊತ್ತಾಯಿತು! ಅವನ ಕುದುರೆಗಳ ಗೊರಸುಗಳಿಗೆ ಇಷ್ಟು ಸಾವಕಾಶವೇಕೆ’ ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಸೀಸೆರನ ತಾಯಿ ಇಣುಕಿ ನೋಡಿದಳು ಕಿಟಕಿಯಿಂದ ಕೂಗಿದಳು ಆ ಕಿಟಕಿಯ ಜಾಲರಿಗಳಿಂದ; ‘ಇಷ್ಟು ಹೊತ್ತಾಗಬೇಕೆ ರಥ ಬರುವುದಕ್ಕೆ? ಕುದುರೆಗಳ ಕಾಲುಗಳಿಗೆ ಇಷ್ಟು ಸಾವಕಾಶವೇಕೆ?’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಸೀಸೆರನ ತಾಯಿಯು ಕಿಟಿಕಿಯಿಂದ ನೋಡಿದಳು; ಸೀಸೆರನ ತಾಯಿಯು ಕಿಟಿಕಿಯ ಜಾಲರಿಗಳಿಂದ ಕೂಗಿದಳು. ಅವನ ರಥವು ಬರುವದಕ್ಕೆ ಇಷ್ಟು ಹೊತ್ತೇಕಾಯಿತು! ಅವನ ಕುದುರೆಗಳ ಕಾಲುಗಳಿಗೆ ಇಷ್ಟು ಸಾವಕಾಶವೇಕೆ ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 “ಸೀಸೆರನ ತಾಯಿ ಕಿಟಿಕಿಯ ಮೂಲಕ ನೋಡಿದಳು; ಆಕೆಯು ತೆರೆಯ ಮೂಲಕ ನೋಡಿ ಕೂಗಿದಳು. ‘ಸೀಸೆರನ ರಥಾಗಮನಕ್ಕೆ ಇಷ್ಟು ತಡವೇಕೆ? ಅವನ ರಥದ ಕುದುರೆಗಳ ಧ್ವನಿ ಬರಲು ಇಷ್ಟು ತಡವೇಕೆ?’ ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 “ಸೀಸೆರನ ತಾಯಿ ಕಿಟಿಕಿಯಿಂದ ನೋಡಿದಳು, ಕಿಂಡಿಯಿಂದ ಕೂಗಿದಳು, ‘ಅವನ ರಥವು ಬರುವುದಕ್ಕೆ ಇಷ್ಟು ತಡವಾದದ್ದೇನು? ಅವನ ರಥಗಳ ಗಾಲಿಗಳು ಹಿಂದುಳಿದಿರುವುದೇನು?’

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 5:28
8 ತಿಳಿವುಗಳ ಹೋಲಿಕೆ  

ಸಹೋದರರೇ, ಕರ್ತನು ಬರುವ ತನಕ ತಾಳ್ಮೆಯಿಂದಿರಿ. ವ್ಯವಸಾಯಮಾಡುವವರನ್ನು ನೋಡಿರಿ, ಅವನು ಭೂಮಿಯ ಬೆಲೆಬಾಳುವ ಫಲಕ್ಕಾಗಿ ಕಾದಿದ್ದು ಮುಂಗಾರು, ಹಿಂಗಾರು ಮಳೆಗಳು ಬರುವ ತನಕ ತಾಳ್ಮೆಯಿಂದಿರುವನು.


ಸುಗಂಧಸಸ್ಯದ ಪರ್ವತಗಳಲ್ಲಿ ಜಿಂಕೆಯಂತೆಯೂ, ಪ್ರಾಯದ ಹರಿಣದಂತೆಯೂ ತ್ವರೆಮಾಡಿ ಬಾ ನನ್ನಿನಿಯನೇ.


ನನ್ನ ಪ್ರಿಯನು ಜಿಂಕೆಯಂತೆಯೂ ಪ್ರಾಯದ ಹರಿಣದಂತೆಯೂ ಇದ್ದಾನೆ. ಆಹಾ, ಇಗೋ ನಮ್ಮ ಗೋಡೆಯ ಆಚೆ ನಿಂತು, ಕಿಟಕಿಗಳ ಮೂಲಕ ನೋಡುತ್ತಾನೆ, ಜಾಲಾಂದ್ರಗಳ ಮೂಲಕ ಇಣಿಕುಹಾಕುತ್ತಾನೆ!


ನಾನು ನನ್ನ ಮನೆಯ ಕಿಟಕಿಯ ಜಾಲರಿಯಿಂದ ಇಣಿಕಿ ನೋಡಲು


ಅಹಜ್ಯನು ಸಮಾರ್ಯದಲ್ಲಿ ತನ್ನ ಮೇಲುಪ್ಪರಿಗೆಯ ಕಿಟಿಕಿಯಿಂದ ಬಿದ್ದು ಅಸ್ವಸ್ಥನಾದಾಗ ತನ್ನ ಸೇವಕರನ್ನು ಕರೆದು ಅವರಿಗೆ, “ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನ ಸನ್ನಿಧಿಗೆ ಹೋಗಿ ನಾನು ಈ ಅಸ್ವಸ್ಥತೆಯಿಂದ ವಾಸಿಯಾಗುವೆನೋ ಇಲ್ಲವೋ ಎಂಬುದನ್ನು ವಿಚಾರಿಸಿರಿ” ಎಂದು ಹೇಳಿಕಳುಹಿಸಿದನು.


ಯೆಹೋವನು ಸೀಸೆರನನ್ನು ಅವನ ಎಲ್ಲಾ ಸೈನ್ಯರಥಗಳನ್ನೂ ಬಾರಾಕನ ಮುಂದೆ ಗಲಿಬಿಲಿಗೊಳಿಸಿ, ಕತ್ತಿಗೆ ತುತ್ತಾಗಿಸಿದನು. ಸೀಸೆರನು ರಥದಿಂದ ಇಳಿದು ಓಡಿಹೋದನು.


ಅವನು ಆಕೆಯ ಕಾಲುಗಳ ಬಳಿಯಲ್ಲಿ ಉರುಳಿ ಬಿದ್ದನು; ಅವನು ಆಕೆಯ ಕಾಲುಗಳ ಬಳಿಯಲ್ಲಿ ಮುದುರಿಕೊಂಡು ಉರುಳಿದನು. ಅವನು ಬಿದ್ದಲ್ಲೇ ಸತ್ತನು.


ಬುದ್ಧಿವಂತೆಯರಾದ ಸ್ತ್ರೀಯರು ಕೊಟ್ಟ ಉತ್ತರವನ್ನೇ ಈಕೆಯು ತನ್ನಲ್ಲಿ ತಾನೇ ಅಂದುಕೊಳ್ಳುತ್ತಿದ್ದದ್ದು ಏನೆಂದರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು