Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 5:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 “ಯೆಹೋವನೇ, ನೀನು ಹೊರಟು ಎದೋಮ್ಯರ ಪ್ರಾಂತ್ಯವಾದ ಸೇಯೀರಿನ ಮಾರ್ಗವಾಗಿ ಪಯಣಮಾಡುತ್ತಾ ಬರುವಾಗ ಭೂಲೋಕವು ಕಂಪಿಸಿತು, ಆಕಾಶವು ನಡುಗಿತು; ಮೇಘಮಂಡಲವು ಮಳೆಗರೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಎದೋಮ್ಯರ ಪ್ರಾಂತ್ಯದಿಂದ, ಸೇಯೀರ ಗುಡ್ಡದಿಂದ ಹೇ ಸರ್ವೇಶ್ವರಾ, ನೀ ಹೊರಟು ಬರುವಾಗ ಕಂಪಿಸಿತು ಭೂಮಿ, ಹನಿಗರೆಯಿತು ಆಗಸ ಮಳೆಸುರಿಸಿತು ಮೇಘಮಂಡಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯೆಹೋವನೇ, ನೀನು ಹೊರಟು ಎದೋಮ್ಯರ ಪ್ರಾಂತವಾದ ಸೇಯೀರಿನ ಮಾರ್ಗವಾಗಿ ಪಯಣಮಾಡುತ್ತಾ ಬರುವಾಗ ಭೂಲೋಕವು ಕಂಪಿಸಿತು, ಆಕಾಶದಿಂದ ಹನಿ ಬಿದ್ದಿತು; ಮೇಘಮಂಡಲವು ಮಳೆಗರೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 “ಯೆಹೋವನೇ, ನೀನು ಹಿಂದೆ ಸೆಯೀರಿನ ಪ್ರದೇಶದಿಂದ ಬಂದೆ. ನೀನು ಎದೋಮ್ಯರ ಪ್ರದೇಶದಿಂದ ನಡೆದುಕೊಂಡು ಹೋದೆ. ನೀನು ನಡೆಯುವಾಗ ಭೂಮಿ ನಡುಗಿತು; ಆಕಾಶ ಹನಿಗರೆಯಿತು. ಮೇಘಮಂಡಲವು ಮಳೆಗರೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 “ಯೆಹೋವ ದೇವರೇ, ನೀವು ಸೇಯೀರಿನಿಂದ ಹೊರಟು, ಎದೋಮಿನ ಹೊಲದಿಂದ ಮುನ್ನಡೆಯುವಾಗ, ಭೂಮಿ ನಡುಗಿತು. ಆಕಾಶವು ಸಹ ಸುರಿಸಿತು. ಮೇಘಗಳು ಸಹ ನೀರು ಸುರಿಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 5:4
13 ತಿಳಿವುಗಳ ಹೋಲಿಕೆ  

“ಯೆಹೋವನು ಸೀನಾಯಿಬೆಟ್ಟದಿಂದ ಬಂದು ಸೇಯೀರ್ ಎಂಬ ಬೆಟ್ಟದ ಸೀಮೆಯೊಳಗಿಂದ ಪ್ರಕಾಶಿಸಿ ಪಾರಾನ್ ಪರ್ವತದಿಂದ ಪ್ರಜ್ವಲಿಸಿ, ಲಕ್ಷಾಂತರ ಪರಿಶುದ್ಧದೂತರ ಮಧ್ಯದಿಂದ ಅವರಿಗೋಸ್ಕರ ದಯಮಾಡಿದನು; ಆತನ ಬಲಪಾರ್ಶ್ವದಲ್ಲಿ ಅಗ್ನಿಸದೃಶವಾದ ಧರ್ಮಶಾಸ್ತ್ರವಿತ್ತು.


ಆಗ ಆತನ ಕೋಪದಿಂದ ಭೂಮಿಯು ಕಂಪಿಸಿತು. ಆಕಾಶದ ಆಧಾರಗಳು ನಡುಗಿ ಕದಲಿದವು.


ಮೇಘಮಂಡಲವು ಮಳೆಗರೆಯಿತು; ಆಕಾಶವು ಗರ್ಜಿಸಿತು; ನಿನ್ನ ಬಾಣಗಳು ಎಲ್ಲಾ ಕಡೆಯೂ ಹಾರಿದವು.


ಭೂಲೋಕವನ್ನು ಕದಲಿಸಿ ಅದರ ಸ್ತಂಭಗಳನ್ನು ನಡುಗಿಸುತ್ತಾನೆ.


ಆತನ ಧ್ವನಿಯು ಆಗ ಭೂಮಿಯನ್ನು ಕದಲಿಸಿತು. ಈಗಲಾದರೋ ಆತನು, “ಇನ್ನೊಂದೇ ಸಾರಿ ನಾನು ಭೂಮಿಯನ್ನು ಮಾತ್ರವಲ್ಲದೆ ಪರಲೋಕವನ್ನೂ ಕದಲಿಸುತ್ತೇನೆ” ಎಂದು ವಾಗ್ದಾನಮಾಡಿ ಹೇಳಿದ್ದಾನೆ.


ದೇವರೇ, ನೀನು ಹೇರಳವಾಗಿ ಮಳೆಸುರಿಸಿ, ಬಾಯ್ದೆರೆದಿದ್ದ ನಿನ್ನ ಸ್ವತ್ತನ್ನು ಶಾಂತಪಡಿಸಿದಿ.


ಬಿರುಗಾಳಿಯಲ್ಲಿ ನಿನ್ನ ಗುಡುಗು ಕೇಳಿಸಿತು; ಮಿಂಚುಗಳು ಭೂಮಂಡಲವನ್ನು ಬೆಳಗಿಸಿದವು; ಭೂಮಿಯು ಅಲ್ಲಾಡಿ ಕಂಪಿಸಿತು.


ಕಳುಹಿಸುವಾಗ ಅವರಿಗೆ “ನೀವು ನನ್ನ ಪ್ರಭುವಾದ ಏಸಾವನ ಬಳಿಗೆ ಹೋಗಿ ಅವನಿಗೆ, ‘ನಿನ್ನ ಸೇವಕನಾದ ಯಾಕೋಬನು ಇಷ್ಟು ದಿನ ಲಾಬಾನನ ಬಳಿಯಲ್ಲಿ ವಾಸವಾಗಿದ್ದನು


ನಿನ್ನ ದೊರೆತನಕ್ಕೆ ಎಂದಿಗೂ ಒಳಪಡದೆ, ನಿನ್ನ ನಾಮವನ್ನು ಧರಿಸದೆ ಇರುವ ಜನರ ಹಾಗಿದ್ದೇವೆ.


ಬೆಂಕಿಗೆ ಎದುರು ಕರಗುವ ಮೇಣದಂತೆಯೂ ಮತ್ತು ಇಳಿಜಾರು ಪ್ರದೇಶದಲ್ಲಿ ರಭಸವಾಗಿ ಹರಿಯುವ ನೀರಿನಂತೆ ಕಣಿವೆಗಳು, ಪರ್ವತಗಳು ಆತನ ಮುಂದೆ ಸೀಳಿ ಕರಗಿ ಕೊಚ್ಚಿಹೊಗುತ್ತಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು