Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 5:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ದೆಬೋರಳಾದ ನಾನು ಇಸ್ರಾಯೇಲರಲ್ಲಿ ತಾಯಿಯಂತೆ ಎದ್ದುಬರುವವರೆಗೆ ಇಸ್ರಾಯೇಲ್ ಗ್ರಾಮಗಳು ಹಾಳುಬಿದ್ದಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ದೆಬೋರಾ, ಇಸ್ರಯೇಲರ ತಾಯಿಯಂತೆ ನೀ ಬರುವ ಮುನ್ನ ಪಾಳುಬಿದ್ದಿದ್ದವು ಇಸ್ರಯೇಲ ಗ್ರಾಮಗಳೆಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ದೆಬೋರಳಾದ ನಾನು ಇಸ್ರಾಯೇಲ್ಯರಲ್ಲಿ ತಾಯಿಯಂತೆ ಎದ್ದು ಬರುವವರೆಗೆ ಇಸ್ರಾಯೇಲ್‍ಗ್ರಾಮಗಳು ಹಾಳು ಬಿದ್ದಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 “ದೆಬೋರಳೇ, ನೀನು ಬರುವವರೆಗೆ, ನೀನು ಇಸ್ರೇಲರಿಗೆ ತಾಯಿಯಾಗಿ ಬರುವವರೆಗೆ, ಶೂರರೇ ಇರಲಿಲ್ಲ. ಇಸ್ರೇಲಿನಲ್ಲಿ ವೀರರೇ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ದೆಬೋರಳಾದ ನಾನು ಏಳುವವರೆಗೂ, ಇಸ್ರಾಯೇಲಿನಲ್ಲಿ ತಾಯಿಯಾಗಿ ನಾನು ಏಳುವವರೆಗೂ ಇಸ್ರಾಯೇಲಿನ ಹಳ್ಳಿಗಳ ನಿವಾಸಿಗಳು ಯುದ್ಧಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 5:7
7 ತಿಳಿವುಗಳ ಹೋಲಿಕೆ  

ರಾಜರು ನಿನಗೆ ಸಾಕುತಂದೆಗಳು, ಅವರ ರಾಣಿಯರು ನಿನಗೆ ಸಾಕುತಾಯಿಯರು ಆಗುವರು. ನಿನಗೆ ಸಾಷ್ಟಾಂಗವಾಗಿ ಅಡ್ಡಬಿದ್ದು ನಿನ್ನ ಪಾದಧೂಳನ್ನು ನೆಕ್ಕುವರು. ನಾನೇ ಯೆಹೋವನು. ನನ್ನನ್ನು ನಿರೀಕ್ಷಿಸಿಕೊಂಡವರು ಆಶಾಭಂಗಪಡುವುದಿಲ್ಲ” ಎಂದು ನಿನಗೆ ಗೊತ್ತಾಗುವುದು.


ನಮ್ಮ ಪಟ್ಟಣವು ಇಸ್ರಾಯೇಲರಲ್ಲಿ ಸಮಾಧಾನವುಳ್ಳದ್ದೂ, ರಾಜನಿಷ್ಠೆಯುಳ್ಳದ್ದೂ ಆಗಿದೆ. ನೀನು ಇಸ್ರಾಯೇಲರ ಪಟ್ಟಣಗಳಲ್ಲಿ ತಾಯಿಯೆಂದು ಹೆಸರುಗೊಂಡ ಈ ಪಟ್ಟಣವನ್ನು ಹಾಳುಮಾಡಬೇಕೆಂದಿರುವೆ. ನೀನು ಯೆಹೋವನ ಸ್ವತ್ತನ್ನು ನುಂಗಿಬಿಡುವುದೇಕೆ?” ಎಂದಳು.


ಕರ್ತನಲ್ಲಿ ಆರಿಸಿಕೊಳ್ಳಲ್ಪಟ್ಟವನಾದ ರೂಫನಿಗೂ, ನನಗೆ ತಾಯಿಯಂತಿರುವ ಅವನ ತಾಯಿಗೂ ವಂದನೆಗಳು.


ಆದುದರಿಂದ ಪೌಳಿಗೋಡೆ ಇಲ್ಲದ ಹಳ್ಳಿಪಳ್ಳಿಯ ಯೆಹೂದ್ಯರು ಫಾಲ್ಗುಣಮಾಸದ ಹದಿನಾಲ್ಕನೆಯ ದಿನವನ್ನೂ ನಗರಗಳ ಯೆಹೂದ್ಯರು ಹದಿನೈದನೆಯ ದಿನವನ್ನೂ ಶುಭದಿನವೆಂದು ಆಚರಿಸಿ, ಉತ್ಸವಭೋಜನಮಾಡಿ ಒಬ್ಬರಿಗೊಬ್ಬರು ಭೋಜನ ಪದಾರ್ಥಗಳನ್ನು ವಿನಿಮಯ ಮಾಡಿಕೊಳ್ಳುತ್ತಾರೆ.


“ಅನಾತನ ಮಗನಾದ ಶಮ್ಗರನ ಕಾಲದಲ್ಲಿಯೂ, ಯಾಯೇಲಳ ದಿನಗಳಲ್ಲಿಯೂ ರಾಜಮಾರ್ಗಗಳಲ್ಲಿ ಸಂಚಾರವು ನಿಂತುಹೋಯಿತು. ಪ್ರಯಾಣಿಕರು ಅಂಕುಡೊಂಕಾದ ದಾರಿಹಿಡಿದು ಹೋದರು.


ಜನರು ಅನ್ಯದೇವತೆಗಳನ್ನು ಆರಿಸಿಕೊಂಡಿದ್ದರು; ಯುದ್ಧವು ಉರುಬಾಗಿಲವರೆಗೂ ಬಂದಿತ್ತು. ಇಸ್ರಾಯೇಲರ ನಲ್ವತ್ತು ಸಾವಿರ ಸೈನಿಕರ ಮಧ್ಯದಲ್ಲಿ ಗುರಾಣಿ ಬರ್ಜಿಗಳು ಇರಲೇ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು