ನ್ಯಾಯಸ್ಥಾಪಕರು 6:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆಗ ಗಿದ್ಯೋನನು ಅವನಿಗೆ “ಸ್ವಾಮೀ, ಯೆಹೋವನು ನಮ್ಮ ಸಂಗಡ ಇದ್ದರೆ ನಮಗೆ ಇದೆಲ್ಲಾ ಯಾಕೆ ಸಂಭವಿಸಿತು? ನಮ್ಮ ಹಿರಿಯರು, ಯೆಹೋವನು ಅದ್ಭುತಗಳನ್ನು ನಡಿಸಿ ತಮ್ಮನ್ನು ಐಗುಪ್ತದಿಂದ ಬಿಡಿಸಿದನೆಂಬುದಾಗಿ ವಿವರಿಸುತ್ತಿದ್ದರು. ಅಂಥ ಅದ್ಭುತಗಳು ಈಗೆಲ್ಲಿವೆ? ಆತನು ನಮ್ಮನ್ನು ತಿರಸ್ಕರಿಸಿ ಮಿದ್ಯಾನ್ಯರ ಕೈಗೆ ಒಪ್ಪಿಸಿಬಿಟ್ಟಿದ್ದಾನಲ್ಲಾ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಆಗ ಗಿದ್ಯೋನನು ಅವನಿಗೆ, “ಸ್ವಾಮೀ, ಸರ್ವೇಶ್ವರ ನನ್ನೊಡನೆ ಇದ್ದರೆ ನಮಗೆ ಇದೆಲ್ಲಾ ಏಕೆ ಸಂಭವಿಸಿತು? ನಮ್ಮ ಹಿರಿಯರು, ಸರ್ವೇಶ್ವರ ಅದ್ಭುತಗಳನ್ನು ನಡಿಸಿ ತಮ್ಮನ್ನು ಈಜಿಪ್ಟಿನಿಂದ ಬಿಡಿಸಿದರೆಂಬುದಾಗಿ ವಿವರಿಸುತ್ತಿದ್ದರು. ಅಂಥ ಅದ್ಭುತಗಳು ಈಗೆಲ್ಲಿವೆ? ಅವರು ನಮ್ಮನ್ನು ತಿರಸ್ಕರಿಸಿ ಮಿದ್ಯಾನ್ಯರ ಕೈಗೆ ಒಪ್ಪಿಸಿಬಿಟ್ಟಿದ್ದಾರಲ್ಲಾ,” ಎನ್ನಲು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಆಗ ಗಿದ್ಯೋನನು ಅವನಿಗೆ - ಸ್ವಾಮೀ, ಯೆಹೋವನು ನಮ್ಮ ಸಂಗಡ ಇದ್ದರೆ ನಮಗೆ ಇದೆಲ್ಲಾ ಯಾಕೆ ಸಂಭವಿಸಿತು? ನಮ್ಮ ಹಿರಿಯರು, ಯೆಹೋವನು ಅದ್ಭುತಗಳನ್ನು ನಡಿಸಿ ತಮ್ಮನ್ನು ಐಗುಪ್ತದಿಂದ ಬಿಡಿಸಿದನೆಂಬದಾಗಿ ವಿವರಿಸುತ್ತಿದ್ದರು. ಅಂಥ ಅದ್ಭುತಗಳು ಈಗೆಲ್ಲಿವೆ? ಆತನು ನಮ್ಮನ್ನು ತಿರಸ್ಕರಿಸಿ ವಿುದ್ಯಾನ್ಯರ ಕೈಗೆ ಒಪ್ಪಿಸಿಬಿಟ್ಟಿದ್ದಾನಲ್ಲಾ ಅನ್ನಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಆಗ ಗಿದ್ಯೋನನು, “ಸ್ವಾಮೀ, ಯೆಹೋವನು ನಮ್ಮ ಸಂಗಡವಿದ್ದರೆ ನಮಗೆ ಇಷ್ಟೊಂದು ಕಷ್ಟಗಳೇಕೆ ಬರುತ್ತವೆ? ನಮ್ಮ ಪೂರ್ವಿಕರಿಗಾಗಿ ಆತನು ಬಹಳಷ್ಟು ಅದ್ಭುತಕಾರ್ಯಗಳನ್ನು ಮಾಡಿದ್ದನೆಂದು ನಾವು ಕೇಳಿದ್ದೇವೆ. ಆತನು ಅವರನ್ನು ಈಜಿಪ್ಟಿನಿಂದ ಹೊರಗೆ ಕರೆತಂದನೆಂದು ನಮ್ಮ ಪೂರ್ವಿಕರು ನಮಗೆ ಹೇಳಿದರು. ಆದರೆ ಈಗ ಯೆಹೋವನು ನಮ್ಮನ್ನು ಕೈಬಿಟ್ಟಿದ್ದಾನೆ; ಮಿದ್ಯಾನ್ಯರು ನಮ್ಮನ್ನು ಸೋಲಿಸುವಂತೆ ಮಾಡಿದ್ದಾನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಆಗ ಗಿದ್ಯೋನನು ಅವನಿಗೆ, “ಒಡೆಯನೇ, ಕ್ಷಮಿಸಿರಿ, ಯೆಹೋವ ದೇವರು ನಮ್ಮ ಸಂಗಡ ಇದ್ದರೆ, ಇದೆಲ್ಲಾ ನಮಗೆ ಏಕೆ ಸಂಭವಿಸಿತು? ಯೆಹೋವ ದೇವರು ನಮ್ಮನ್ನು ಈಜಿಪ್ಟಿನಿಂದ ಬರಮಾಡಲಿಲ್ಲವೋ? ಎಂದು ನಮ್ಮ ಪಿತೃಗಳು ನಮಗೆ ವಿವರಿಸಿ ಹೇಳಿದಂಥ ಅದ್ಭುತಗಳು ಎಲ್ಲಿ? ಈಗ ಯೆಹೋವ ದೇವರು ನಮ್ಮನ್ನು ಕೈಬಿಟ್ಟು, ಮಿದ್ಯಾನ್ಯರ ಕೈಗೆ ನಮ್ಮನ್ನು ಒಪ್ಪಿಸಿದ್ದಾರೆ,” ಎಂದನು. ಅಧ್ಯಾಯವನ್ನು ನೋಡಿ |