Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 6:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅವನು ಆತನಿಗೆ, “ಕರ್ತನೇ, ದಯವಿರಲಿ; ನನ್ನೊಂದಿಗೆ ಮಾತನಾಡುತ್ತಿರುವವರು ತಾವೇ ಆಗಿದ್ದೀರೆಂಬುದಕ್ಕೆ ನನಗೊಂದು ಗುರುತನ್ನು ಅನುಗ್ರಹಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಗಿದ್ಯೋನನು: “ಸ್ವಾಮೀ, ದಯವಿರಲಿ; ನನ್ನೊಂದಿಗೆ ಮಾತಾಡುತ್ತಿರುವ ತಾವು ಸ್ವಾಮಿಯವರೇ ಆಗಿದ್ದೀರೆಂಬುದಕ್ಕೆ ನನಗೊಂದು ಗುರುತನ್ನು ಅನುಗ್ರಹಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅವನು ಆತನಿಗೆ - ಸ್ವಾಮೀ, ದಯವಿರಲಿ; ನನ್ನೊಂದಿಗೆ ಮಾತಾಡುತ್ತಿರುವ ತಾವು ಸ್ವಾವಿುಯವರೇ ಆಗಿದ್ದೀರೆಂಬದಕ್ಕೆ ನನಗೊಂದು ಗುರುತನ್ನು ಅನುಗ್ರಹಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆಗ ಗಿದ್ಯೋನನು ಯೆಹೋವನಿಗೆ, “ನೀನು ನನಗೆ ಕೃಪೆ ತೋರಿದರೆ, ನೀನು ನಿಜವಾಗಿಯೂ ಯೆಹೋವನು ಎಂಬುದಕ್ಕೆ ನನಗೆ ಒಂದು ಗುರುತನ್ನು ಕೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅದಕ್ಕವನು, “ಈಗ ನಿಮ್ಮ ಸಮ್ಮುಖದಲ್ಲಿ ನನಗೆ ದಯೆ ದೊರಕಿದ್ದರೆ, ನನ್ನ ಸಂಗಡ ಮಾತನಾಡುವವರು ನೀವು ಎಂಬುದಕ್ಕೆ ನನಗೆ ಒಂದು ಗುರುತನ್ನು ತೋರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 6:17
11 ತಿಳಿವುಗಳ ಹೋಲಿಕೆ  

“ನಿನ್ನ ದೇವರಾದ ಯೆಹೋವನಿಂದ ಒಂದು ಗುರುತನ್ನು ಕೇಳು. ಅದು ಪಾತಾಳದಷ್ಟು ಆಳದಲ್ಲಿದ್ದರೂ, ಮೇಲೆ ಎತ್ತರದಲ್ಲಿದ್ದರೂ ಅದನ್ನು ಕೇಳಿಕೋ” ಎಂದು ಹೇಳಿದನು.


ನನಗಾಗಿ ಒಂದು ಶುಭಸೂಚನೆಯನ್ನು ತೋರಿಸು; ನನ್ನ ಶತ್ರುಗಳು ನೋಡಿ, “ಯೆಹೋವನು ಸಹಾಯಕನಾಗಿ ಇವನನ್ನು ಸಂತೈಸಿದ್ದಾನೆ” ಎಂದು ನಾಚಿಕೆಪಡಲಿ.


ನನ್ನ ಮೇಲೆ ದಯೆಯಿರುವುದಾದರೆ ನಿನ್ನ ಮಾರ್ಗವನ್ನು ನನಗೆ ತೋರಿಸು ನಾನು ನಿನ್ನನ್ನು ಅರಿತುಕೊಳ್ಳುವಂತೆ ನಿನ್ನ ಕೃಪೆಯನ್ನು ನನಗೆ ದಯಪಾಲಿಸು ಆಗ ನಿನ್ನ ದಯೆ ನನಗೆ ದೊರೆಯಿತೆಂದು ನನಗೆ ತಿಳಿಯುವುದು. ಈ ಜನಾಂಗವು ನಿನ್ನ ಪ್ರಜೆಯೆಂಬುದನ್ನು ನೆನಪುಮಾಡಿಕೋ” ಎಂದು ಅರಿಕೆಮಾಡಿದನು.


ನನಗೂ ನಿನ್ನ ಪ್ರಜೆಗಳಾದ ಇವರಿಗೂ ನಿನ್ನ ದಯೆಯು ದೊರಕಿತೆಂಬುದು ನೀನು ನಮ್ಮ ಸಂಗಡ ಬರುವುದರಿಂದಲೇ ಹೊರತು ಬೇರೆ ಯಾವುದರಿಂದ ತಿಳಿದುಬರುವುದು? ಇದರಿಂದ ನಾನೂ ಮತ್ತು ನಿನ್ನ ಪ್ರಜೆಗಳಾದ ಇವರೂ ಭೂಮಿಯಲ್ಲಿರುವ ಬೇರೆ ಎಲ್ಲಾ ಜನಗಳಿಗಿಂತಲೂ ವಿಶೇಷತೆಯುಳ್ಳವರೆಂಬುದು ಗೊತ್ತಾಗುವುದು” ಅಂದನು.


ನಾನು ಹೋಗಿ ತಮಗೆ ಕಾಣಿಕೆಯನ್ನು ತೆಗೆದುಕೊಂಡು ಬರುವ ವರೆಗೆ ತಾವು ಈ ಸ್ಥಳವನ್ನು ಬಿಡಬಾರದು” ಎಂದು ಬಿನ್ನವಿಸಲು ಆತನು, “ನೀನು ತಿರುಗಿ ಬರುವ ವರೆಗೆ ನಾನು ಇಲ್ಲೇ ಇರುವೆನು” ಅಂದನು.


ಇದಲ್ಲದೆ ಅವನು, “ನನ್ನ ಮಾತು ಯೆಹೋವನದು ಎಂಬುವುದಕ್ಕೆ ಯಜ್ಞವೇದಿಯು ಸೀಳಿ ಅದರ ಮೇಲಣ ಬೂದಿಯು ಬಿದ್ದುಹೋಗುವುದೇ ಗುರುತಾಗಿರುವುದು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು