ನ್ಯಾಯಸ್ಥಾಪಕರು 6:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಗಿದ್ಯೋನನು ಮನೆಗೆ ಹೋಗಿ ಒಂದು ಆಡಿನ ಮರಿಯನ್ನು ತೆಗೆದುಕೊಂಡು, ಒಂದು ಏಫಾ ಅಂದರೆ ಸುಮಾರು ಮೂವ್ವತ್ತು ಸೇರು ಹಿಟ್ಟಿನಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಸುಟ್ಟು, ಮಾಂಸವನ್ನು ಸಿದ್ಧಮಾಡಿ, ಪುಟ್ಟಿಯಲ್ಲಿಟ್ಟು ಅದರ ರಸವನ್ನು ಬಟ್ಟಲಿನಲ್ಲಿ ಹೊಯ್ದು, ಎಲ್ಲವನ್ನೂ ಏಲಾ ಮರದ ಕೆಳಗೆ ಆತನ ಮುಂದೆ ತಂದಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಗಿದ್ಯೋನನು ಮನೆಗೆ ಹೋಗಿ ಒಂದು ಆಡಿನ ಮರಿಯನ್ನು ಪಕ್ವಮಾಡಿ ಹತ್ತು ಕಿಲೋಗ್ರಾಂ ಹಿಟ್ಟಿನಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಸುಟ್ಟು ಮಾಂಸವನ್ನು ಪುಟ್ಟಿಯಲ್ಲಿಟ್ಟು ಅದರ ರಸವನ್ನು ಬಟ್ಟಲಿನಲ್ಲಿ ಹೊಯ್ದು ಎಲ್ಲವನ್ನೂ ಓಕ್ ಮರದ ಕೆಳಗೆ ಅವರ ಮುಂದೆ ತಂದಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಗಿದ್ಯೋನನು ಮನೆಗೆ ಹೋಗಿ ಒಂದು ಆಡಿನ ಮರಿಯನ್ನು ಪಕ್ವಮಾಡಿ ಒಂದು ಏಫಾ ಹಿಟ್ಟಿನಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಸುಟ್ಟು ಮಾಂಸವನ್ನು ಪುಟ್ಟಿಯಲ್ಲಿಟ್ಟು ಅದರ ರಸವನ್ನು ಬಟ್ಟಲಿನಲ್ಲಿ ಹೊಯ್ದು ಎಲ್ಲವನ್ನೂ ಏಲಾ ಮರದ ಕೆಳಗೆ ಆತನ ಮುಂದೆ ತಂದಿಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಗಿದ್ಯೋನನು ಒಳಗೆ ಹೋಗಿ ಒಂದು ಆಡಿನ ಮರಿಯನ್ನು ಬೇಯಿಸಿದನು. ಅವನು ಸುಮಾರು ಇಪ್ಪತ್ತು ಸೇರಿನಷ್ಟು ಹಿಟ್ಟನ್ನು ತೆಗೆದುಕೊಂಡು ಹುಳಿಯಿಲ್ಲದ ರೊಟ್ಟಿಯನ್ನು ಮಾಡಿದನು. ತರುವಾಯ ಗಿದ್ಯೋನನು ಆ ಮಾಂಸವನ್ನು ಒಂದು ಬುಟ್ಟಿಯಲ್ಲಿಟ್ಟನು, ಮಾಂಸ ಬೇಯಿಸಿದ ನೀರನ್ನು ಒಂದು ಪಾತ್ರೆಯಲ್ಲಿ ಹಾಕಿದನು. ಗಿದ್ಯೋನನು ಆ ಮಾಂಸವನ್ನೂ ಮಾಂಸ ಬೇಯಿಸಿದ ನೀರನ್ನೂ ಹುಳಿಯಿಲ್ಲದ ರೊಟ್ಟಿಯನ್ನೂ ತೆಗೆದುಕೊಂಡು ಬಂದನು. ಗಿದ್ಯೋನನು ಏಲಾ ಮರದ ಕೆಳಗೆ ಯೆಹೋವನಿಗೆ ಆಹಾರವನ್ನು ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಆಗ ಗಿದ್ಯೋನನು ಒಳಗೆ ಹೋಗಿ, ಒಂದು ಮೇಕೆಯ ಮರಿಯನ್ನೂ, ಹದಿನಾರು ಕಿಲೋಗ್ರಾಂ ಹಿಟ್ಟಿನಲ್ಲಿ ಹುಳಿಯಿಲ್ಲದ ರೊಟ್ಟಿಗಳನ್ನು ಸಿದ್ಧಮಾಡಿ, ಮಾಂಸವನ್ನು ಪುಟ್ಟಿಯಲ್ಲಿ ಇಟ್ಟು, ರಸವನ್ನು ಪಾತ್ರೆಯಲ್ಲಿ ಹೊಯ್ದು, ಅದನ್ನು ಹೊರಗೆ ಏಲಾ ಮರದ ಕೆಳಗೆ ಇದ್ದ ಅವರ ಬಳಿಯಲ್ಲಿ ತಂದಿಟ್ಟನು. ಅಧ್ಯಾಯವನ್ನು ನೋಡಿ |