Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 6:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಮಿದ್ಯಾನ್ಯರ ಹಸ್ತವು ಬಲಗೊಂಡಿದ್ದರಿಂದ ಇಸ್ರಾಯೇಲರು ಅವರಿಗೆ ಹೆದರಿ ಪರ್ವತಗಳಲ್ಲಿ ಗುಹೆಗಳನ್ನು, ಕಂದರಗಳನ್ನು ಮಾಡಿಕೊಂಡು ಅದರಲ್ಲಿ ವಾಸಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಮಿದ್ಯಾನ್ಯರ ಶಕ್ತಿ ಹೆಚ್ಚಿತು. ಇಸ್ರಯೇಲರು ಅವರಿಗೆ ಹೆದರಿ ಬೆಟ್ಟಗುಡ್ಡಗಳಲ್ಲಿ ಕಂದರಗಳನ್ನೂ ಗುಹೆಗಳನ್ನೂ ಮಾಡಿ ಅವುಗಳಲ್ಲಿ ವಾಸಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ವಿುದ್ಯಾನ್ಯರ ಹಸ್ತವು ಬಲಗೊಂಡದರಿಂದ ಇಸ್ರಾಯೇಲ್ಯರು ಅವರಿಗೆ ಹೆದರಿ ಪರ್ವತಗಳಲ್ಲಿ ಕಂದರಗುಹೆದುರ್ಗಗಳನ್ನು ಮಾಡಿ ಸೇರಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಮಿದ್ಯಾನ್ಯರು ಬಹಳ ಬಲಶಾಲಿಗಳಾಗಿದ್ದು ಇಸ್ರೇಲರಿಗೆ ಕ್ರೂರಿಗಳಾಗಿದ್ದರು. ಆದ್ದರಿಂದ ಇಸ್ರೇಲರು ಅಡಗಿಕೊಳ್ಳುವುದಕ್ಕಾಗಿ ಬೆಟ್ಟಗಳಲ್ಲಿ ಸ್ಥಳಗಳನ್ನು ಮಾಡಿಕೊಂಡರು. ಕಂಡುಹಿಡಿಯಲಾಗದ ಸ್ಥಳಗಳಲ್ಲಿ ಅವರು ತಮ್ಮ ಆಹಾರವನ್ನು ಬಚ್ಚಿಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಮಿದ್ಯಾನ್ಯರ ಕೈ ಇಸ್ರಾಯೇಲಿಗೆ ವಿರೋಧವಾಗಿ ಬಲವಾದ್ದರಿಂದ ಇಸ್ರಾಯೇಲರು ಮಿದ್ಯಾನ್ಯರ ನಿಮಿತ್ತ ತಮಗೆ ಪರ್ವತಗಳಲ್ಲಿ ಇರುವ ಬಂಡೆಯ ಬಿರುಕುಗಳನ್ನೂ, ಗವಿಗಳನ್ನೂ, ಬಲವಾದ ಸ್ಥಾನಗಳನ್ನೂ ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 6:2
12 ತಿಳಿವುಗಳ ಹೋಲಿಕೆ  

ಇಂಥವರಿಗೆ ಈ ಲೋಕವು ಯೋಗ್ಯಸ್ಥಳವಾಗಿರಲಿಲ್ಲ. ಅವರು ತಮ್ಮ ದೇಶದ ಮರುಭೂಮಿ, ಬೆಟ್ಟ, ಗವಿ, ಕುಣಿಗಳಲ್ಲಿ ಅಲೆಯುವವರಾಗಿದ್ದರು.


ಇಸ್ರಾಯೇಲರಿಗೆ ಕೇಡು ಬಂದಿತು. ತಾವು ಇಕ್ಕಟ್ಟಿನಲ್ಲಿದ್ದೇವೆಂದು ಅವರು ತಿಳಿದು ಗವಿ, ಕಾಡು, ಬಂಡೆ, ನೆಲಮನೆ, ಗುಂಡಿ ಇವುಗಳಲ್ಲಿ ಅಡಗಿಕೊಂಡರು.


ಆಗ ಭೂರಾಜರುಗಳೂ, ಮಹಾಪುರುಷರೂ, ಸಹಸ್ರಾಧಿಪತಿಗಳೂ, ಐಶ್ವರ್ಯವಂತರೂ, ಪರಾಕ್ರಮಶಾಲಿಗಳೂ, ಎಲ್ಲಾ ದಾಸರೂ ಮತ್ತು ಸ್ವತಂತ್ರರೂ ಬೆಟ್ಟಗಳ ಗವಿಗಳಿಗೂ ಮತ್ತು ಬಂಡೆಗಳ ಸಂದುಗಳಿಗೂ ಓಡಿಹೋಗಿ ತಮ್ಮನ್ನು ಮರೆಮಾಡಿಕೊಂಡರು.


ಇವರಿಬ್ಬರೂ ಫಿಲಿಷ್ಟಿಯರ ಕಾವಲು ದಂಡಿನವರಿಗೆ ಕಾಣಿಸಿಕೊಂಡಾಗ ಅವರು, “ಇಗೋ, ಇಬ್ರಿಯರು ತಾವು ಅಡಗಿಕೊಂಡಿದ್ದ ಗುಹೆಗಳಿಂದ ಹೊರಗೆ ಬರುತ್ತಲಿದ್ದಾರೆ” ಎಂದು ತಮ್ಮೊಳಗೆ ಮಾತನಾಡಿಕೊಂಡರು.


ನಾನು ನಿಮ್ಮ ಮೇಲೆ ಉಗ್ರಕೋಪಗೊಳ್ಳುವುದರಿಂದ ನೀವು ನಿಮ್ಮ ಶತ್ರುಗಳ ಮುಂದೆ ಸೋತು ಹೋಗುವಿರಿ; ನಿಮ್ಮ ವೈರಿಗಳು ನಿಮ್ಮನ್ನು ಆಳುವರು; ಯಾರೂ ಬೆನ್ನಟ್ಟಿ ಬರದಿದ್ದರು ನೀವು ಹೆದರಿ ಓಡುವಿರಿ.


ಇವರು ಬಿತ್ತನೆಮಾಡಿದಾಗಲೆಲ್ಲಾ ಮಿದ್ಯಾನ್ಯರೂ ಅಮಾಲೇಕ್ಯರೂ ಮೂಡಣ ದೇಶದವರೂ ಇವರಿಗೆ ವಿರೋಧವಾಗಿ ದಂಡೆತ್ತಿ ಬಂದು ಇಳಿದುಕೊಳ್ಳುತ್ತಿದ್ದರು.


ಇಷ್ಮಾಯೇಲನು ತಾನು ಗೆದಲ್ಯನ ಸಂಗಡ ಕೊಂದ ಇತರರ ಶವಗಳನ್ನು ಹಾಕಿದ ಬಾವಿಯು, ಇಸ್ರಾಯೇಲಿನ ಅರಸನಾದ ಬಾಷನ ಭಯದಿಂದ ಅರಸನಾದ ಆಸನು ತೋಡಿಸಿದ್ದ ಬಾವಿಯೇ. ಆ ಬಾವಿಯನ್ನು ನೆತನ್ಯನ ಮಗನಾದ ಇಷ್ಮಾಯೇಲನು ಹತರಾದವರ ಶವಗಳಿಂದ ತುಂಬಿಸಿಬಿಟ್ಟನು.


ಮೋವಾಬ್ಯರೇ, ಪಟ್ಟಣಗಳನ್ನು ಬಿಟ್ಟು ಬಂಡೆಯ ಗುಹೆಗಳಲ್ಲಿ ವಾಸಿಸಿರಿ; ಹಳ್ಳಕೊಳ್ಳದ ಆಚೆಯ ಪಕ್ಕದಲ್ಲಿ ಗೂಡನ್ನು ಕಟ್ಟಿಕೊಳ್ಳುವ ಪಾರಿವಾಳದಂತಿರಿ;


ಇವರು ಅಂದಿನಿಂದ ಹದಿನೆಂಟು ವರ್ಷಗಳ ವರೆಗೆ ಯೊರ್ದನಿನ ಆಚೆ ಗಿಲ್ಯಾದಿನಲ್ಲಿದ್ದ ಇಸ್ರಾಯೇಲರನ್ನು ಬಹಳವಾಗಿ ಪೀಡಿಸುತ್ತಾ, ಕುಗ್ಗಿಸುತ್ತಾ ಇದ್ದರು. ಈ ದೇಶವು ಮೊದಲು ಅಮೋರಿಯರದಾಗಿತ್ತು.


ಇದಲ್ಲದೆ ಅಮ್ಮೋನಿಯರು ಯೊರ್ದನ್ ಹೊಳೆಯನ್ನು ದಾಟಿ, ಯೆಹೂದ, ಬೆನ್ಯಾಮೀನ್, ಎಫ್ರಾಯೀಮ್ ಕುಲಗಳೊಡನೆ ಯುದ್ಧಮಾಡಿದ್ದರಿಂದ ಇಸ್ರಾಯೇಲರಿಗೆ ಬಹಳ ಕಷ್ಟವಾಯಿತು.


ಅವರು ಭಯಂಕರವಾದ ತಗ್ಗುಗಳ ಸಂದುಗಳಲ್ಲಿ ವಾಸಿಸತಕ್ಕವರು, ಭೂಮಿಯಲ್ಲಿಯೂ, ಬಂಡೆಗಳಲ್ಲಿಯೂ ಇರುವ ಗುಹೆಗಳೇ ಅವರ ಮನೆಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು