Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 6:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆಗ ಗಿದ್ಯೋನನು ತನ್ನ ಸೇವಕರಲ್ಲಿ ಹತ್ತು ಮಂದಿಯನ್ನು ಕರೆದುಕೊಂಡು ಹೋಗಿ ಯೆಹೋವನು ಹೇಳಿದಂತೆಯೇ ಮಾಡಿದನು. ಆದರೆ ಅವನು ತನ್ನ ಮನೆಯವರಿಗೂ, ಊರಿನವರಿಗೂ ಹೆದರಿಕೊಂಡಿದ್ದರಿಂದ ಅದನ್ನು ಹಗಲಿನಲ್ಲಿ ಮಾಡದೆ ರಾತ್ರಿಯಲ್ಲಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಅಂತೆಯೇ ಗಿದ್ಯೋನನು ತನ್ನ ಸೇವಕರಲ್ಲಿ ಹತ್ತು ಮಂದಿಯನ್ನು ಕರೆದುಕೊಂಡು ಹೋಗಿ, ಸರ್ವೇಶ್ವರನು ಹೇಳಿದ ಹಾಗೆ ಮಾಡಿದನು. ಆದರೆ ಅವನು ತನ್ನ ಮನೆಯವರಿಗೂ ಊರಿನವರಿಗೂ ಹೆದರಿಕೊಂಡದ್ದರಿಂದ ಅದನ್ನು ಹಗಲಿನಲ್ಲಿ ಮಾಡದೆ ರಾತ್ರಿಯಲ್ಲಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆಗ ಗಿದ್ಯೋನನು ತನ್ನ ಸೇವಕರಲ್ಲಿ ಹತ್ತು ಮಂದಿಯನ್ನು ಕರೆದುಕೊಂಡು ಹೋಗಿ ಯೆಹೋವನು ಹೇಳಿದಂತೆಯೇ ಮಾಡಿದನು. ಆದರೆ ಅವನು ತನ್ನ ಮನೆಯವರಿಗೂ ಊರಿನವರಿಗೂ ಹೆದರಿಕೊಂಡದರಿಂದ ಅದನ್ನು ಹಗಲಿನಲ್ಲಿ ಮಾಡದೆ ರಾತ್ರಿಯಲ್ಲಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಗಿದ್ಯೋನನು ತನ್ನ ಸೇವಕರಲ್ಲಿ ಹತ್ತು ಮಂದಿಯನ್ನು ಕರೆದುಕೊಂಡು ಹೋಗಿ ಯೆಹೋವನು ಹೇಳಿದಂತೆಯೇ ಮಾಡಿದನು. ಆದರೆ ಅವನು ತನ್ನ ಕುಟುಂಬದವರಿಗೂ ನಗರ ನಿವಾಸಿಗಳಿಗೂ ಹೆದರಿಕೊಂಡಿದ್ದರಿಂದ ಅವನು ಅದನ್ನು ಹಗಲಿನಲ್ಲಿ ಮಾಡದೆ ರಾತ್ರಿಯಲ್ಲಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಆಗ ಗಿದ್ಯೋನನು ತನ್ನ ಸೇವಕರಲ್ಲಿ ಹತ್ತು ಮಂದಿಯನ್ನು ತೆಗೆದುಕೊಂಡು, ಯೆಹೋವ ದೇವರು ತನಗೆ ಹೇಳಿದ ಹಾಗೆಯೇ ಮಾಡಿದನು. ಆದರೆ ಅವನು ತನ್ನ ತಂದೆಯ ಮನೆಯವರೆಗೂ, ಆ ಊರಿನ ಮನುಷ್ಯರಿಗೂ ಭಯಪಟ್ಟದ್ದರಿಂದ ಹಗಲಲ್ಲಿ ಮಾಡದೆ ರಾತ್ರಿಯಲ್ಲಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 6:27
10 ತಿಳಿವುಗಳ ಹೋಲಿಕೆ  

ದೇವರು ನಮ್ಮನ್ನು ಯೋಗ್ಯರೆಂದೆಣಿಸಿ, ಸುವಾರ್ತೆಯನ್ನು ನಮ್ಮ ವಶಕ್ಕೆ ಒಪ್ಪಿಸಿದನು. ಆದುದರಿಂದ ಮನುಷ್ಯರನ್ನು ಮೆಚ್ಚಿಸುವುದಕ್ಕಾಗಿಯಲ್ಲ ಹೃದಯವನ್ನು ಪರಿಶೋಧಿಸುವ ದೇವರನ್ನೇ ಮೆಚ್ಚಿಸಬೇಕೆಂದು ಮಾತನಾಡುತ್ತಿದ್ದೇವೆ.


ಆತನ ತಾಯಿಯು ಸೇವಕರಿಗೆ “ಆತನು ನಿಮಗೆ ಏನು ಹೇಳುತ್ತಾನೋ ಅದನ್ನು ಮಾಡಿರಿ” ಎಂದಳು.


ಇಸ್ರಾಯೇಲರೇ ಕೇಳಿರಿ, ನೀವು ಜೀವದಿಂದ ಉಳಿದು ನಿಮ್ಮ ಪೂರ್ವಿಕರ ದೇವರಾದ ಯೆಹೋವನು ನಿಮಗೆ ಕೊಡುವ ದೇಶವನ್ನು ಸೇರಿ, ಸ್ವಾಧೀನಮಾಡಿಕೊಳ್ಳುವಂತೆ ಸಾಧ್ಯವಾಗಲು ನಾನು ಈಗ ಬೋಧಿಸುವ ಆಜ್ಞಾವಿಧಿಗಳನ್ನು ಗಮನಿಸಿ ಅನುಸರಿಸಬೇಕು.


ತನ್ನ ಮಗನನ್ನು ನನ್ನೊಳಗೆ ಪ್ರಕಟಪಡಿಸುವುದಕ್ಕೆ ಮತ್ತು ಅನ್ಯಜನರಲ್ಲಿ ಆತನನ್ನು ನಾನು ಪ್ರಸಿದ್ಧಿಪಡಿಸುವವನಾಗಬೇಕೆಂದು ಇಚ್ಛಿಸಿದನು. ನಾನು ಕೂಡಲೇ ಮನುಷ್ಯರ ಆಲೋಚನೆಯನ್ನು ಕೇಳದೆ,


ನಾನು ನಿಮಗೆ ಕೊಟ್ಟ ಆಜ್ಞೆಗಳ ಪ್ರಕಾರ ನೀವು ನಡೆದರೆ, ನೀವು ನನ್ನ ಸ್ನೇಹಿತರು.


ಅವನು ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದು ಆತನಿಗೆ, “ಗುರುವೇ, ನೀನು ದೇವರ ಬಳಿಯಿಂದ ಬಂದ ಬೋಧಕನೆಂದು ನಾವು ಬಲ್ಲೆವು. ನೀನು ಮಾಡುವಂಥ ಈ ಸೂಚಕ ಕಾರ್ಯಗಳನ್ನು ದೇವರ ಸಹಾಯವಿಲ್ಲದೆ ಮಾಡುವುದು ಯಾರಿಂದಲೂ ಆಗದು” ಎಂದು ಹೇಳಿದನು.


ಅನಂತರ ಯೇಸು ತನ್ನ ಶಿಷ್ಯರಿಗೆ ಹೇಳಿದ್ದೇನೆಂದರೆ “ಯಾವನಾದರೂ ನನ್ನನ್ನು ಹಿಂಬಾಲಿಸುವುದಕ್ಕೆ ಬಯಸಿದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.


ದಯಾಳುವಾಗಿ ಧನಸಹಾಯ ಮಾಡುವವನೂ, ತನ್ನ ಕಾರ್ಯಗಳನ್ನು ನೀತಿಯಿಂದ ನಡೆಸುವವನೂ ಭಾಗ್ಯವಂತನು.


ಈ ಗುಡ್ದದ ಶಿಖರದಲ್ಲಿ ಯೆಹೋವನಿಗೋಸ್ಕರ ನೇಮಕವಾದ ರೀತಿಯಲ್ಲಿ ಒಂದು ಯಜ್ಞವೇದಿಯನ್ನು ಕಟ್ಟಿಸು. ನೀನು ಕಡಿದು ಹಾಕಿದ ಅಶೇರ ವಿಗ್ರಹಸ್ತಂಭದಿಂದ ಬೆಂಕಿಮಾಡಿ, ಆ ಎರಡನೆಯ ಹೋರಿಯನ್ನೂ ಸರ್ವಾಂಗಹೋಮವಾಗಿ ಸಮರ್ಪಿಸು” ಎಂದು ಹೇಳಿದನು.


ಊರಿನ ಜನರು ಹೊತ್ತಾರೆಯಲ್ಲೆದ್ದು ಬಾಳನ ಯಜ್ಞವೇದಿಯು ಕೆಡವಲ್ಪಟ್ಟಿರುವುದನ್ನೂ, ಅದರ ಸಮೀಪದಲ್ಲಿದ್ದ ವಿಗ್ರಹಸ್ತಂಭವು ಕಡಿಯಲ್ಪಟ್ಟಿರುವುದನ್ನೂ, ಹೊಸದಾಗಿ ಕಟ್ಟಿದ ಯಜ್ಞವೇದಿಯ ಮೇಲೆ ಎರಡನೆಯ ಹೋರಿಯು ಯಜ್ಞವಾದದ್ದನ್ನೂ ಕಂಡು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು