Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 6:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಯೋವಾಷನು ತನಗೆ ವಿರೋಧವಾಗಿ ನಿಂತವರೆಲ್ಲರಿಗೆ, “ಬಾಳನಿಗೋಸ್ಕರ ನೀವು ವ್ಯಾಜ್ಯಮಾಡಬೇಕೋ? ನೀವು ಅವನನ್ನು ರಕ್ಷಿಸಬೇಕೋ? ಅವನಿಗಾಗಿ ವ್ಯಾಜ್ಯಮಾಡುವವರು ಈ ಹೊತ್ತೇ ಕೊಲ್ಲಲ್ಪಡಲಿ. ಬಾಳನು ದೇವನಾಗಿದ್ದರೆ ತನ್ನ ಯಜ್ಞವೇದಿಯನ್ನು ಕೆಡವಿಬಿಟ್ಟದ್ದಕ್ಕಾಗಿ ತಾನೇ ವ್ಯಾಜ್ಯಮಾಡಲಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಯೋವಾಷನು ತನಗೆ ವಿರುದ್ಧವಾಗಿ ನಿಂತವರೆಲ್ಲರಿಗೆ, “ಬಾಳನ ಪರ ನೀವು ವ್ಯಾಜ್ಯಮಾಡಬೇಕೆ? ನೀವು ಅವನನ್ನು ರಕ್ಷಿಸಬೇಕೇ? ಅವನಿಗಾಗಿ ವ್ಯಾಜ್ಯಮಾಡುವವರು ಬೆಳಗಾಗುವಷ್ಟರಲ್ಲಿ ಕೊಲ್ಲಲ್ಪಡಲಿ. ಅವನು ದೇವನಾಗಿದ್ದರೆ ತನ್ನ ಬಲಿಪೀಠವನ್ನು ಕೆಡವಿಬಿಟ್ಟದ್ದಕ್ಕಾಗಿ ತಾನೇ ವ್ಯಾಜ್ಯವಾಡಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಯೋವಾಷನು ತನಗೆ ವಿರೋಧವಾಗಿ ನಿಂತವರೆಲ್ಲರಿಗೆ - ಬಾಳನಿಗೋಸ್ಕರ ನೀವು ವ್ಯಾಜ್ಯವಾಡಬೇಕೋ? ನೀವು ಅವನನ್ನು ರಕ್ಷಿಸಬೇಕೋ? ಅವನಿಗಾಗಿ ವ್ಯಾಜ್ಯವಾಡುವವರು ಈ ಹೊತ್ತೇ ಕೊಲ್ಲಲ್ಪಡಲಿ. ಅವನು ದೇವನಾಗಿದ್ದರೆ ತನ್ನ ಯಜ್ಞವೇದಿಯನ್ನು ಕೆಡವಿ ಬಿಟ್ಟದ್ದಕ್ಕಾಗಿ ತಾನೇ ವ್ಯಾಜ್ಯವಾಡಲಿ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ತನ್ನ ಸುತ್ತಲೂ ನಿಂತಿದ್ದ ಜನರಿಗೆ ಯೋವಾಷನು, “ನೀವು ಬಾಳನ ಪಕ್ಷವನ್ನು ವಹಿಸುವಿರಾ? ನೀವು ಬಾಳನನ್ನು ರಕ್ಷಿಸುವಿರಾ? ಬಾಳನ ಪಕ್ಷದವರನ್ನು ಬೆಳಗಾಗುವುದರೊಳಗೆ ಕೊಂದು ಬಿಡಲಾಗುವುದು. ಬಾಳನು ನಿಜವಾಗಿಯೂ ದೇವರಾಗಿದ್ದರೆ ಅವನ ಯಜ್ಞವೇದಿಕೆಯನ್ನು ಬೀಳಿಸುವಾಗ ಅವನು ತನ್ನ ರಕ್ಷಣೆಯನ್ನು ಏಕೆ ಮಾಡಿಕೊಳ್ಳಲಿಲ್ಲ?” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಆದರೆ ಯೋವಾಷನು ತನಗೆ ವಿರೋಧವಾಗಿ ನಿಂತಿದ್ದ ಸಮಸ್ತರಿಗೂ, “ನೀವು ಬಾಳನಿಗಾಗಿ ವ್ಯಾಜ್ಯವಾಡುವಿರೋ? ನೀವು ಅವನನ್ನು ರಕ್ಷಿಸುವಿರೋ? ಅವನಿಗಾಗಿ ವ್ಯಾಜ್ಯ ಮಾಡುವವನು ಈ ಉದಯಕಾಲದಲ್ಲೇ ಹತನಾಗಲಿ. ಅವನು ದೇವರಾದರೆ ತನ್ನ ಬಲಿಪೀಠವನ್ನು ಕೆಡವಿದ್ದರಿಂದ, ಅವನು ತನ್ನನ್ನು ರಕ್ಷಿಸಿಕೊಳ್ಳಲಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 6:31
18 ತಿಳಿವುಗಳ ಹೋಲಿಕೆ  

ನಿಷ್ಪ್ರಯೋಜಕವಾದ ಕತ್ತಲೆಯ ಕೃತ್ಯಗಳಲ್ಲಿ ಪಾಲುಗಾರರಾಗಿರದೆ ಅವುಗಳನ್ನು ಬಯಲಿಗೆಳೆದು ಖಂಡಿಸಿರಿ.


ಆದ್ದರಿಂದ ವಿಗ್ರಹಗಳಿಗೆ ಅರ್ಪಿಸಿದ ಆಹಾರಪದಾರ್ಥಗಳನ್ನು ತಿನ್ನುವುದರ ವಿಷಯದಲ್ಲಿ, “ಜಗತ್ತಿನಲ್ಲಿ ವಿಗ್ರಹವು ಏನೂ ಅಲ್ಲವೆಂದು” ನಮಗೆ ತಿಳಿದಿದೆ ಮತ್ತು “ಒಬ್ಬ ದೇವರಿದ್ದಾನೆ ಹೊರತು ಬೇರೆ ದೇವರಿಲ್ಲವೆಂದೂ” ಬಲ್ಲೆವು.


ನೀವು ಅವುಗಳಿಗೆ, “ಭೂಮ್ಯಾಕಾಶಗಳನ್ನು ಸೃಷ್ಟಿಸದಿರುವ ದೇವರುಗಳು ಭೂಮಿಯ ಮೇಲಿನಿಂದ, ಆಕಾಶದ ಕೆಳಗಿನಿಂದ, ಅಳಿದುಹೋಗುವವು” ಎಂದು ಹೇಳಿರಿ.


ಇಂಥಾ ಬೊಂಬೆಗಳು ಸೌತೆಕಾಯಿ ತೋಟದ ಬೆದರುಗಂಬದಂತಿವೆ, ಮಾತನಾಡಲಾರವು; ಹೊತ್ತುಕೊಂಡು ಹೋಗಬೇಕು, ನಡೆಯಲಾರವು. ಅವುಗಳಿಗೆ ಹೆದರಬೇಡಿರಿ, ಕೇಡುಮಾಡಲಾರವು; ಒಳ್ಳೆಯದನ್ನು ಮಾಡಲಿಕ್ಕೂ ಅವುಗಳಿಗೆ ಸಾಮರ್ಥ್ಯವಿಲ್ಲ” ಎಂದು ಹೇಳುತ್ತಾನೆ


ಅವರು ಅದನ್ನು ಹೆಗಲ ಮೇಲೆ ಹೊತ್ತುಕೊಂಡು ಮೆರವಣಿಗೆ ಮಾಡಿ, ಪೀಠದ ಮೇಲೆ ಇಳಿಸಿ ನಿಲ್ಲಿಸುವರು. ಅದು ಅಲ್ಲಿಂದ ಜರುಗದು. ಒಬ್ಬನು ಕೂಗಿಕೊಂಡರೂ ಅದು ಅವನಿಗೆ ಉತ್ತರಕೊಡಲಾರದು. ಇಲ್ಲವೆ ಅವನನ್ನು ಕಷ್ಟದಿಂದ ಬಿಡಿಸಲಾರದು.


ಬೇಲ್ ದೇವತೆಯು ಬಾಗಿದೆ, ನೆಬೋ ದೇವತೆಯು ಕುಗ್ಗಿದೆ, ಅವುಗಳ ವಿಗ್ರಹಗಳು ಪಶುಗಳ ಮೇಲೆ ಹೊರಿಸಲ್ಪಟ್ಟಿವೆ, ನೀವು ಮೆರವಣಿಗೆಯಾಗಿ ಹೊರುತ್ತಿದ್ದವುಗಳು ಪಶುಗಳಿಗೆ ಭಾರವಾದ ಹೊರೆಯಾಗಿ ಅವುಗಳು ಬಳಲಿದವು.


ನೀವು ದೇವರುಗಳೆಂದು ನಮಗೆ ಅರಿವು ಹುಟ್ಟುವಂತೆ ಮುಂದೆ ಆಗುವವುಗಳನ್ನು ತಿಳಿಸಿರಿ. ನಾವು ಒಟ್ಟಿಗೆ ಗಾಬರಿಯಿಂದ ಭಯಪಡುವ ಹಾಗೆ ಒಳ್ಳೆಯದನ್ನಾಗಲಿ, ಕೆಟ್ಟದ್ದನ್ನಾಗಲಿ ಮಾಡಿರಿ.


ಆಗ ಎಲೀಯನು ಅವರಿಗೆ, “ಬಾಳನ ಪ್ರವಾದಿಗಳೆಲ್ಲರನ್ನು ಹಿಡಿಯಿರಿ. ಅವರಲ್ಲಿ ಒಬ್ಬನೂ ತಪ್ಪಿಸಿಕೊಳ್ಳಬಾರದು” ಎಂದು ಆಜ್ಞಾಪಿಸಲು ಅವರು ಹಿಡಿದರು. ಅವನು ಅವರನ್ನು ಕೀಷೋನ್ ಹಳ್ಳಕ್ಕೆ ಒಯ್ದು ಅಲ್ಲಿ ಕೊಲ್ಲಿಸಿದನು.


ಮಧ್ಯಾಹ್ನದಿಂದ ನೈವೇದ್ಯ ಸಮರ್ಪಣೆಯ ಹೊತ್ತಿನವರೆಗೂ ಪರವಶರಾಗಿ ಕೂಗುತ್ತಾ ಇದ್ದರು. ಆದರೂ ಆಕಾಶವಾಣಿಯಾಗಲಿಲ್ಲ. ಯಾರೂ ಅವರಿಗೆ ಉತ್ತರಕೊಡಲಿಲ್ಲ ಅವರನ್ನು ಲಕ್ಷಿಸಲಿಲ್ಲ.


ಮಧ್ಯಾಹ್ನವಾದನಂತರ ಎಲೀಯನು ಅವರನ್ನು ಪರಿಹಾಸ್ಯ ಮಾಡಿ, “ಗಟ್ಟಿಯಾಗಿ ಕೂಗಿರಿ, ಅವನು ದೇವರಾಗಿರುತ್ತಾನಲ್ಲಾ. ಈಗ ಒಂದು ವೇಳೆ ಅವನು ಧ್ಯಾನದಲ್ಲಿರಬಹುದು, ಇಲ್ಲವೇ ಯಾವುದೋ ಕೆಲಸದಲ್ಲಿ ಅಥವಾ ಪ್ರಯಾಣದಲ್ಲಿ ಇರಬೇಕು. ಅದೂ ಇಲ್ಲದಿದ್ದರೆ ನಿದ್ರೆಮಾಡುತ್ತಿದ್ದಾನು, ಎಚ್ಚರವಾಗಬೇಕು” ಎಂದು ಹೇಳಿದನು.


ಕಾನಾನ್ ದೇಶವನ್ನು ಸಂಚರಿಸಿ ನೋಡಿದವರಲ್ಲಿ ನೂನನ ಮಗನಾದ ಯೆಹೋಶುವನು ಮತ್ತು ಯೆಫುನ್ನೆಯ ಮಗನಾದ ಕಾಲೇಬನೂ ತಮ್ಮ ಬಟ್ಟೆಗಳನ್ನು ಹರಿದುಕೊಂಡರು.


ದುಷ್ಟ ಕಾರ್ಯವನ್ನು ಮಾಡುವವರು ಬಹಳಮಂದಿ ಇದ್ದಾರೆ, ಆದಾಗ್ಯೂ ನೀವು ಅವರ ಜೊತೆಯಲ್ಲಿ ಸೇರಬಾರದು. ಬಹು ಮಂದಿಯ ಮಾತಿಗೆ ಒಪ್ಪಿ ನ್ಯಾಯವನ್ನು ಕೆಡಿಸುವ ಸಾಕ್ಷಿಯನ್ನು ಹೇಳಬಾರದು.


ಆ ಜನರು ಯೋವಾಷನಿಗೆ, “ನಿನ್ನ ಮಗನನ್ನು ಹೊರಗೆ ಕರೆದುಕೊಂಡು ಬಾ; ಅವನು ಸಾಯಬೇಕು; ಯಾಕೆಂದರೆ ಬಾಳನ ಯಜ್ಞವೇದಿಯನ್ನು ಕೆಡವಿ ಅದರ ಬಳಿಯಲ್ಲಿದ್ದ ಅಶೇರ ವಿಗ್ರಹಸ್ತಂಭವನ್ನು ಕಡಿದುಹಾಕಿದ್ದಾನೆ” ಅಂದರು.


ಆ ದಿನದಲ್ಲಿ ಅವನು, “ಬಾಳನು ತನ್ನ ಯಜ್ಞವೇದಿಯನ್ನು ಕೆಡವಿಬಿಟ್ಟವನೊಡನೆ ತಾನೇ ವ್ಯಾಜ್ಯಮಾಡಲಿ” ಎಂದು ಹೇಳಿದ್ದರಿಂದ ಗಿದ್ಯೋನನಿಗೆ ಯೆರುಬ್ಬಾಳ ಎಂಬ ಹೆಸರಾಯಿತು.


ಯೆಹೋವನು ಯೆರುಬ್ಬಾಳ್, ಬಾರಾಕ್, ಯೆಫ್ತಾಹ, ಸಮುವೇಲ್ ಇವರನ್ನು ಕಳುಹಿಸಿ ನಿಮ್ಮನ್ನು ಎಲ್ಲಾ ಶತ್ರುಗಳ ಕೈಯಿಂದ ಬಿಡಿಸಿ ಸುರಕ್ಷಿತವಾಗಿ ಜೀವಿಸುವಂತೆ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು