ನ್ಯಾಯಸ್ಥಾಪಕರು 6:32 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಆ ದಿನದಲ್ಲಿ ಅವನು, “ಬಾಳನು ತನ್ನ ಯಜ್ಞವೇದಿಯನ್ನು ಕೆಡವಿಬಿಟ್ಟವನೊಡನೆ ತಾನೇ ವ್ಯಾಜ್ಯಮಾಡಲಿ” ಎಂದು ಹೇಳಿದ್ದರಿಂದ ಗಿದ್ಯೋನನಿಗೆ ಯೆರುಬ್ಬಾಳ ಎಂಬ ಹೆಸರಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಆ ದಿವಸದಲ್ಲಿ ಅವನು, “ಬಾಳನು ತನ್ನ ಬಲಿಪೀಠವನ್ನು ಕೆಡವಿದವನೊಡನೆ ತಾನೇ ವ್ಯಾಜ್ಯ ಮಾಡಲಿ” ಎಂದು ಹೇಳಿದ್ದರಿಂದ ಗಿದ್ಯೋನನಿಗೆ ‘ಯೆರುಬ್ಬಾಳ’ ಎಂದು ಹೆಸರಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಆ ದಿವಸದಲ್ಲಿ ಅವನು - ಬಾಳನು ತನ್ನ ಯಜ್ಞವೇದಿಯನ್ನು ಕೆಡವಿದವನೊಡನೆ ತಾನೇ ವ್ಯಾಜ್ಯವಾಡಲಿ ಎಂದು ಹೇಳಿದ್ದರಿಂದ ಗಿದ್ಯೋನನಿಗೆ ಯೆರುಬ್ಬಾಳನೆಂಬ ಹೆಸರಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ಯೋವಾಷನು, “ಗಿದ್ಯೋನನು ಬಾಳನ ಯಜ್ಞವೇದಿಕೆಯನ್ನು ಕೆಡವಿದ ಪಕ್ಷದಲ್ಲಿ ಬಾಳನು ಅವನೊಡನೆ ವಾದಿಸಲಿ” ಎಂದು ಹೇಳಿದನು. ಅಂದು ಯೋವಾಷನು ಗಿದ್ಯೋನನಿಗೆ ಯೆರುಬ್ಬಾಳ ಎಂಬ ಹೊಸ ಹೆಸರನ್ನು ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಗಿದ್ಯೋನನು ಬಾಳನ ಬಲಿಪೀಠವನ್ನು ಕೆಡವಿದ ಕಾರಣ ಅವರು ಆ ದಿವಸದಲ್ಲಿ, “ಬಾಳನೇ ವ್ಯಾಜ್ಯವಾಡಲಿ” ಎಂದು ಹೇಳಿದ್ದರಿಂದ ಗಿದ್ಯೋನನಿಗೆ ಯೆರುಬ್ಬಾಳ ಎಂಬ ಹೆಸರಾಯಿತು. ಅಧ್ಯಾಯವನ್ನು ನೋಡಿ |
ಯೆರುಬ್ಬೇಷೆತನ ಮಗನಾದ ಅಬೀಮೆಲೇಕನನ್ನು ಕೊಂದವರು ಯಾರು ಎಂದು ನಿಮಗೆ ಗೊತ್ತಿಲ್ಲವೋ? ತೇಬೇಚಿನಲ್ಲಿ ಒಬ್ಬ ಹೆಂಗಸು ಗೋಡೆಯ ಮೇಲಿನಿಂದ ಒಂದು ಬೀಸುವ ಕಲ್ಲನ್ನು ಅವನ ಮೇಲೆ ಎತ್ತಿ ಹಾಕಿ ಅವನನ್ನು ಕೊಂದಳಲ್ಲವೇ. ಹೀಗಿರುವುದರಿಂದ ನೀವು ಗೋಡೆಯ ಸಮೀಪಕ್ಕೆ ಹೋದದ್ದೇಕೆ?’ ಎಂದು ಕೇಳಿದರೆ ನೀನು, ಹಿತ್ತಿಯನಾದ ನಿನ್ನ ಸೇವಕ ಊರೀಯನು ಮೃತನಾದನೆಂದು ಹೇಳು” ಎಂಬುದಾಗಿ ಆಜ್ಞಾಪಿಸಿ ಅವನನ್ನು ಕಳುಹಿಸಿದನು.