Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 6:34 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಆಗ ಗಿದ್ಯೋನನ ಮೇಲೆ ಯೆಹೋವನ ಆತ್ಮವು ಬಂದಿತ್ತು. ಅವನು ಕೊಂಬನ್ನು ಊದಲು ಅಬೀಯೆಜೆರನ ಗೋತ್ರದವರು ಬಂದು ಅವನನ್ನು ಹಿಂಬಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಆಗ ಗಿದ್ಯೋನನು ಸರ್ವೇಶ್ವರಾತ್ಮಭರಿತನಾಗಿ ಕೊಂಬನ್ನು ಊದಲು ಅಬೀಯೆಜೆರನ ಗೋತ್ರದವರು ಬಂದು ಅವನನ್ನು ಹಿಂಬಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಆಗ ಗಿದ್ಯೋನನು ಯೆಹೋವನ ಆತ್ಮನ ಆವೇಶವುಳ್ಳವನಾಗಿ ಕೊಂಬನ್ನು ಊದಲು ಅಬೀಯೆಜೆರನ ಗೋತ್ರದವರು ಬಂದು ಅವನನ್ನು ಹಿಂಬಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಗಿದ್ಯೋನನ ಮೇಲೆ ಯೆಹೋವನ ಆತ್ಮವು ಬಂದಿತು; ಅವನಿಗೆ ಹೆಚ್ಚಿನ ಶಕ್ತಿಯನ್ನು ಕೊಟ್ಟಿತು. ಅಬೀಯೇಜೆರನ ಗೋತ್ರದವರನ್ನು ತನ್ನನ್ನು ಹಿಂಬಾಲಿಸಲು ಕರೆಯುವುದಕ್ಕಾಗಿ ಗಿದ್ಯೋನನು ತುತ್ತೂರಿಯನ್ನು ಊದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಆದರೆ ಯೆಹೋವ ದೇವರ ಆತ್ಮರು ಗಿದ್ಯೋನನ ಮೇಲೆ ಬಂದರು. ಅವನು ತುತೂರಿಯನ್ನು ಊದಿದಾಗ, ಅಬೀಯೆಜೆರಿನವರು ಅವನ ಹಿಂದೆ ಕೂಡಿಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 6:34
20 ತಿಳಿವುಗಳ ಹೋಲಿಕೆ  

ಆಗ ಯಾಜಕನಾದ ಯೆಹೋಯಾದನ ಮಗ ಜೆಕರ್ಯನು ದೇವರ ಆತ್ಮನಿಂದ ತುಂಬಿದವನಾಗಿ ಆವೇಶ ಉಳ್ಳವನಾದನು. ಆಗ ಅವನು ಜನರ ಎದುರಿನಲ್ಲಿ ಉನ್ನತ ಸ್ಥಾನದಲ್ಲಿ ನಿಂತುಕೊಂಡು ಅವರಿಗೆ, “ದೇವರ ಮಾತನ್ನು ಕೇಳಿರಿ; ನೀವು ಯೆಹೋವನ ಆಜ್ಞೆಗಳನ್ನು ಮೀರಿ, ನಿಮ್ಮನ್ನೆ ಏಕೆ ನಾಶಮಾಡಿಕೊಳ್ಳುತ್ತಿದ್ದೀರಿ? ನೀವು ಯೆಹೋವನನ್ನು ಕಡೆಗಣಿಸಿರುವುದರಿಂದ; ಆತನೂ ನಿಮ್ಮನ್ನು ಕಡೆಗಣಿಸಿದ್ದಾನೆ” ಎಂದನು.


ಆಗ ಮೂವತ್ತು ಜನರಲ್ಲಿ ಮುಖ್ಯಸ್ಥನಾದ ಅಮಾಸೈಯು ಆತ್ಮಾವೇಶವುಳ್ಳವನಾಗಿ, “ದಾವೀದನೇ, ನಾವು ನಿನ್ನವರು; ಶುಭವಾಗಲಿ! ಇಷಯನ ಮಗನೇ, ನಾವು ನಿನ್ನ ಪಕ್ಷದವರು; ಶುಭವಾಗಲಿ! ನಿನಗೂ ನಿನ್ನ ಸಹಾಯಕರಿಗೂ ಶುಭವಾಗಲಿ! ನಿನ್ನ ದೇವರು ನಿನಗೆ ಜಯವನ್ನು ಕೊಡುವವನಾಗಿದ್ದಾನೆ” ಎಂದು ಹೇಳಿದನು. ಆಗ ದಾವೀದನು ಅವರನ್ನು ತನ್ನ ಜೊತೆಯಲ್ಲಿ ಸೇರಿಸಿಕೊಂಡು ಸೈನ್ಯಾಧಿಪತಿಗಳನ್ನಾಗಿ ನೇಮಿಸಿದನು.


ಎಫ್ರಾಯೀಮ್ ಪರ್ವತಪ್ರದೇಶದಲ್ಲಿ ಕೊಂಬನ್ನು ಊದಿದನು. ಆಗ ಇಸ್ರಾಯೇಲರು ಅವನ ಬಳಿಗೆ ಬಂದು, ಗಟ್ಟಾ ಇಳಿದು ಅವನ ಸಂಗಡ ಹೊರಟರು.


ಯೆಹೋವನ ಆತ್ಮವು ಅವನ ಮೇಲೆ ಬಂದುದರಿಂದ ಅವನು ಇಸ್ರಾಯೇಲರ ನ್ಯಾಯಸ್ಥಾಪನೆಗೋಸ್ಕರ ಯುದ್ಧಕ್ಕೆ ಹೊರಟನು. ಯೆಹೋವನು ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ರಾಜ್ಯದ ಅರಸನಾದ ಕೂಷನ್ ರಿಷಾತಯಿಮನನ್ನು ಅವನ ಕೈಗೆ ಒಪ್ಪಿಸಿಕೊಟ್ಟದ್ದರಿಂದ ಅವನು ಅವನನ್ನು ಸಂಪೂರ್ಣವಾಗಿ ಸೋಲಿಸಿಬಿಟ್ಟನು.


ದೇಹದ ಆಸೆಗಳನ್ನು ಪೂರೈಸುವುದಕ್ಕಾಗಿ ಚಿಂತಿಸದೇ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ.


ಹೇಗೆಂದರೆ ಕ್ರಿಸ್ತನಲ್ಲಿ ಸೇರುವುದಕ್ಕೆ ದೀಕ್ಷಾಸ್ನಾನ ಮಾಡಿಸಿಕೊಂಡಿರುವ ನೀವೆಲ್ಲರೂ ಕ್ರಿಸ್ತನನ್ನು ಧರಿಸಿಕೊಂಡಿದ್ದೀರಿ.


ನಿನ್ನ ಸನ್ನಿಧಿಯಿಂದ ನನ್ನನ್ನು ತಳ್ಳಬೇಡ; ನಿನ್ನ ಪರಿಶುದ್ಧಾತ್ಮವನ್ನು ನನ್ನಿಂದ ತೆಗೆಯಬೇಡ.


ಯೆಹೋವನ ಆತ್ಮವು ಸೌಲನನ್ನು ಬಿಟ್ಟು ಹೋಯಿತು; ಯೆಹೋವನು ಕಳುಹಿಸಿದ ದುರಾತ್ಮವು ಬಂದು ಅವನನ್ನು ಪೀಡಿಸುತ್ತಿದ್ದರಿಂದ


ಆಗ ಯೆಹೋವನ ಆತ್ಮವು ಅವನ ಮೇಲೆ ಬಂದಿತು. ಅವನು ಬಹಳ ಕೋಪಗೊಂಡು, ಒಂದು ಜೋಡಿ ಎತ್ತುಗಳನ್ನು ತೆಗೆದುಕೊಂಡು ತುಂಡು ತುಂಡು ಮಾಡಿದನು.


ಆಗ ಯೆಹೋವನ ಆತ್ಮವು ನಿನ್ನ ಮೇಲೆಯೂ ಬರುವುದರಿಂದ ನೀನೂ ಅವರೊಂದಿಗೆ ಪ್ರವಾದಿಸುವಿ. ನೀನು ಮಾರ್ಪಟ್ಟ ಮನುಷ್ಯನಾಗುವಿ.


ಸಂಸೋನನು ಲೆಹೀಯ ಸಮೀಪಕ್ಕೆ ಬರಲು ಫಿಲಿಷ್ಟಿಯರು ಅವನನ್ನು ಕಂಡು ಆರ್ಭಟಿಸಿದರು. ಯೆಹೋವನ ಆತ್ಮವು ಅವನ ಮೇಲೆ ಬಂದದ್ದರಿಂದ ಅವನ ರಟ್ಟೆಗಳಿಗೆ ಸುತ್ತಲೂ ಕಟ್ಟಿದ್ದ ಹಗ್ಗಗಳು ಸುಟ್ಟ ಸೆಣಬಿನ ಹಾಗಾದವು; ಕೈಗೆ ಹಾಕಿದ ಬೇಡಿಗಳು ಕಳಚಿ ಬಿದ್ದವು.


ಯೆಹೋವನ ಆತ್ಮವು ಫಕ್ಕನೆ ಅವನ ಮೇಲೆ ಬಂದಿತು; ಅವನು ಅಷ್ಕೆಲೋನಿಗೆ ಹೋಗಿ ಅಲ್ಲಿನ ಮೂವತ್ತು ಮಂದಿಯನ್ನು ಹೊಡೆದು, ಅವರ ವಸ್ತ್ರಗಳನ್ನು ಸುಲುಕೊಂಡು ಒಗಟನ್ನು ಬಿಚ್ಚಿದವರಿಗೆ ತಂದುಕೊಟ್ಟನು. ಮತ್ತು ಕೋಪಗೊಂಡವನಾಗಿ ತನ್ನ ತಂದೆಯ ಮನೆಗೆ ಹೋದನು.


ಇದಲ್ಲದೆ ಅವನು ಚೊರ್ಗಕ್ಕೂ, ಎಷ್ಟಾವೋಲಿಗೂ ಮಧ್ಯದಲ್ಲಿರುವ ದಾನ್ ಕುಲದ ಪಾಳೆಯದಲ್ಲಿದ್ದಾಗ ಯೆಹೋವನ ಆತ್ಮವು ಅವನನ್ನು ಪ್ರೇರೇಪಿಸುವುದಕ್ಕೆ ಪ್ರಾರಂಭಿಸಿತು.


ಆಗ ಅವನು ಅವರಿಗೆ, “ನೀವು ಮಾಡಿದ ಕಾರ್ಯಕ್ಕೆ ಸಮಾನವಾಗುವಂತದ್ದು ನಾನೇನು ಮಾಡಿದೆ? ಅಬೀಯೆಜೆರನವರು ಸುಗ್ಗಿಯಲ್ಲಿ ಕೂಡಿಸಿದ್ದಕ್ಕಿಂತಲೂ, ಎಫ್ರಾಯೀಮ್ಯರು ಹಕ್ಕಲಾಯ್ದು ಕೂಡಿಸಿದ್ದು ಹೆಚ್ಚಾಗಿದೆಯಲ್ಲವೇ?


ಆ ಮೇಲೆ ಯೆಹೋವನ ದೂತನು ಬಂದು ಒಫ್ರದಲ್ಲಿದ್ದ ಏಲಾ ವೃಕ್ಷದ ಕೆಳಗೆ ಕುಳಿತುಕೊಂಡನು. ಅದು ಅಬೀಯೆಜೆರನ ಗೋತ್ರದವನಾದ ಯೋವಾಷನದಾಗಿತ್ತು. ಅವನ ಮಗನಾದ ಗಿದ್ಯೋನನು ಮಿದ್ಯಾನ್ಯರಿಗೆ ಗೊತ್ತಾಗದ ಹಾಗೆ ಅಲ್ಲಿನ ದ್ರಾಕ್ಷಿಯ ಆಲೆಯ ಮರೆಯಲ್ಲಿ ಗೋದಿಯನ್ನು ಬಡಿಯುತ್ತಿದ್ದನು.


ಯೋಸೇಫನ ಮಗನಾಗಿರುವ ಮನಸ್ಸೆಯ ಉಳಿದ ಗಂಡು ಮಕ್ಕಳಾದ ಅಬೀಯೆಜೆರ್, ಹೇಲೆಕ್, ಅಸ್ರೀಯೇಲ್, ಶೆಕೆಮ್, ಹೇಫೆರ್, ಶೆಮೀದಾ ಎಂಬುವವರ ವಂಶದವರಿಗೆ ಯೊರ್ದನಿನ ಈಚೆಯಲ್ಲಿ ಸ್ವತ್ತು ಸಿಕ್ಕಿತು.


ನೀನು ತುತ್ತೂರಿಗಳನ್ನು ಊದಿಸುವಾಗ ಜನಸಮೂಹದವರೆಲ್ಲರೂ ನಿನ್ನ ಹತ್ತಿರ ದೇವದರ್ಶನದ ಗುಡಾರದ ಬಾಗಿಲಿಗೆ ಕೂಡಿಬರಬೇಕು.


ಯೋನಾತಾನನು ಗೆಬದಲ್ಲಿದ್ದ ಫಿಲಿಷ್ಟಿಯರ ಕಾವಲುಪಡೆಯ ಪಾಳೆಯವನ್ನು ನಾಶಮಾಡಿದನು. ಈ ವರ್ತಮಾನವು ಫಿಲಿಷ್ಟಿಯರಿಗೆ ಮುಟ್ಟಿತು. ಸೌಲನು “ಎಲ್ಲಾ ಇಬ್ರಿಯರು ಕೇಳಲಿ” ಎಂದು ದೇಶದಲ್ಲೆಲ್ಲಾ ತುತ್ತೂರಿ ಊದಿಸಿದನು.


ಸೌಲನಿಗೆ ವಿರುದ್ಧವಾಗಿ ಯುದ್ಧಕ್ಕೆ ಹೋಗುವ ಫಿಲಿಷ್ಟಿಯರ ಜೊತೆಯಲ್ಲಿ ದಾವೀದನೂ ಹೋಗುತ್ತಿರುವಾಗ ಕೆಲವು ಜನ ಮನಸ್ಸೆಯವರು ಬಂದು ಅವನೊಡನೆ ಸೇರಿಕೊಂಡರು. ದಾವೀದನು ನಿಜವಾಗಿ ಫಿಲಿಷ್ಟಿಯರಿಗೆ ಸಹಾಯಕನು ಆಗಿರಲಾರನೆಂದು, ಅವರ ಪ್ರಭುಗಳು, “ಇವನು ನಮ್ಮ ತಲೆಗಳನ್ನು ಕಡಿದು ತಿರುಗಿ ತನ್ನ ಯಜಮಾನನಾದ ಸೌಲನೊಂದಿಗೆ ಸೇರಿಕೊಂಡಾನು” ಎಂಬುದಾಗಿ ಆಲೋಚಿಸಿ ಅವನನ್ನು ಹಿಂದಕ್ಕೆ ಕಳುಹಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು