Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 6:35 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಅವನು ಉಳಿದ ಮನಸ್ಸೆಯವರ ಬಳಿಗೆ ದೂತರನ್ನು ಕಳುಹಿಸಲಾಗಿ ಅವರೂ ಕೂಡಿಬಂದರು. ಆಶೇರ್, ಜೆಬುಲೂನ್, ನಫ್ತಾಲಿ ಕುಲಗಳವರ ಬಳಿಗೆ ದೂತರನ್ನು ಕಳುಹಿಸಲು ಅವರೂ ಬಂದು ಯುದ್ಧಪ್ರಯಾಣಕ್ಕೋಸ್ಕರ ಸೇರಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಅವನು ಉಳಿದ ಮನಸ್ಸೆಯವರ ಬಳಿಗೆ ದೂತರನ್ನು ಕಳುಹಿಸಿದ್ದನು. ಅವರೂ ಕೂಡಿಬಂದರು. ಅಶೇರ್, ಜೆಬುಲೂನ್, ನಫ್ತಾಲಿ ಕುಲಗಳವರ ಬಳಿಗೆ ದೂತರನ್ನು ಕಳುಹಿಸಲು ಅವರೂ ಬಂದು ದಂಡೆಯಾತ್ರೆಗಾಗಿ ಸೇರಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಅವನು ಉಳಿದ ಮನಸ್ಸೆಯವರ ಬಳಿಗೆ ದೂತರನ್ನು ಕಳುಹಿಸಲಾಗಿ ಅವರೂ ಕೂಡಿಬಂದರು. ಆಶೇರ್ ಜೆಬುಲೂನ್ ನಫ್ತಾಲಿ ಕುಲಗಳವರ ಬಳಿಗೆ ದೂತರನ್ನು ಕಳುಹಿಸಲು ಅವರೂ ಬಂದು ಯುದ್ಧಪ್ರಯಾಣಕ್ಕೋಸ್ಕರ ಸೇರಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಮನಸ್ಸೆ ಕುಲದ ಜನರೆಲ್ಲರನ್ನು ಕರೆಯುವುದಕ್ಕಾಗಿ ಗಿದ್ಯೋನನು ದೂತರನ್ನು ಕಳುಹಿಸಿದನು. ಆ ದೂತರು ಮನಸ್ಸೆ ಕುಲದ ಜನರಿಗೆ ತಮ್ಮ ಆಯುಧಗಳನ್ನು ತೆಗೆದುಕೊಂಡು ಯುದ್ಧಕ್ಕೆ ಸಿದ್ಧರಾಗಬೇಕೆಂದು ತಿಳಿಸಿದರು. ಗಿದ್ಯೋನನು ಆಶೇರ್, ಜೆಬುಲೂನ್ ಮತ್ತು ನಫ್ತಾಲಿ ಕುಲದವರ ಹತ್ತಿರವೂ ಸಹ ದೂತರನ್ನು ಕಳುಹಿಸಿದನು. ಆ ದೂತರು ಸಹ ಅದೇ ಸಂದೇಶವನ್ನು ತಿಳಿಸಿದರು. ಆದ್ದರಿಂದ ಆ ಕುಲಗಳವರು ಸಹ ಗಿದ್ಯೋನನನ್ನು ಮತ್ತು ಅವನ ಜನರನ್ನು ಸೇರಿಕೊಳ್ಳಲು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಮನಸ್ಸೆಯವರ ಬಳಿ ದೂತರನ್ನು ಕಳುಹಿಸಿದಾಗ, ಅವರು ಅವನ ಹಿಂದೆ ಕೂಡಿಬಂದರು. ಆಶೇರ್, ಜೆಬುಲೂನಿನಲ್ಲಿಯೂ, ನಫ್ತಾಲಿನಲ್ಲಿಯೂ ದೂತರನ್ನು ಕಳುಹಿಸಲು, ಅವರು ಇವರಿಗೆ ಭೇಟಿಯಾಗಲು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 6:35
6 ತಿಳಿವುಗಳ ಹೋಲಿಕೆ  

ಆಕೆ ನಫ್ತಾಲಿ ದೇಶದ ಕೆದೆಷ್ ಊರಿನಲ್ಲಿದ್ದ ಅಬೀನೋವಮನ ಮಗನಾದ ಬಾರಾಕನನ್ನು ಬರಲು ಹೇಳಿ ಅವನಿಗೆ, “ನಿಶ್ಚಯವಾಗಿ ಇಸ್ರಾಯೇಲರ ದೇವರಾದ ಯೆಹೋವನು ನಿನಗೆ, ‘ಎದ್ದು ನಫ್ತಾಲಿ, ಜೆಬುಲೂನ್ ಕುಲಗಳಿಂದ ಹತ್ತು ಸಾವಿರ ಜನರನ್ನು ಕೂಡಿಸಿಕೊಂಡು ತಾಬೋರ್ ಬೆಟ್ಟಕ್ಕೆ ಹೋಗು.


ಬಾರಾಕನು ಜೆಬುಲೂನ್ಯರನ್ನೂ, ನಫ್ತಾಲ್ಯರನ್ನೂ ಕೆದೆಷಿಗೆ ಕರೆಯಿಸಿದನು. ಅವರಲ್ಲಿ ಹತ್ತು ಸಾವಿರ ಮಂದಿ ಅವನ ಹೆಜ್ಜೆ ಹಿಡಿದು ಯುದ್ಧಕ್ಕೆ ಹೋದರು, ದೆಬೋರಳೂ ಅವರೊಂದಿಗೆ ಹೋದಳು.


ಜೆಬುಲೂನ್ಯರು ತಮ್ಮ ಜೀವವನ್ನು ಮರಣದ ಆಪತ್ತಿಗೆ ಒಪ್ಪಿಸಲು ಸಿದ್ಧರಿದರು, ನಫ್ತಾಲ್ಯರು ಸಹ ರಣರಂಗದಲ್ಲಿಯೇ ಇದ್ದರು.


ಆದುದರಿಂದ ಎಲ್ಲಾ ಜನರಿಗೆ ಕೇಳಿಸುವಂತೆ, ‘ಧೈರ್ಯವಿಲ್ಲದವರೂ, ಅಂಜುವವರೂ ಈ ಗಿಲ್ಯಾದ್ ಪರ್ವತವನ್ನು ಬಿಟ್ಟು ಮನೆಗೆ ಹೋಗಲಿ ಎಂದು ಪ್ರಕಟಿಸು’” ಅಂದನು. ಹಾಗೆ ಮಾಡಲು ಇಪ್ಪತ್ತೆರಡು ಸಾವಿರ ಮಂದಿ ಹಿಂದಿರುಗಿ ಹೋದರು; ಹತ್ತು ಸಾವಿರ ಮಂದಿ ಉಳಿದರು.


ಇಸ್ರಾಯೇಲ್ಯರಾದ ನಫ್ತಾಲಿ, ಆಶೇರ್ ಕುಲಗಳವರೂ, ಮನಸ್ಸೆ ಕುಲದ ಎಲ್ಲಾ ಜನರೂ ಕೂಡಿ ಬಂದು ಮಿದ್ಯಾನ್ಯರನ್ನು ಹಿಂದಟ್ಟಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು