Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 6:37 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಇಗೋ, ನಾನು ಕಣದಲ್ಲಿ ಕುರಿಯ ಉಣ್ಣೆಯನ್ನು ಇಡುತ್ತೇನೆ; ಅದರಲ್ಲಿ ಮಾತ್ರ ಮಂಜುಬಿದ್ದು ನೆಲವೆಲ್ಲಾ ಒಣಗಿದ್ದರೆ ನೀನು ಹೇಳಿದಂತೆಯೇ ಇಸ್ರಾಯೇಲರನ್ನು ನನ್ನ ಮೂಲಕವಾಗಿ ರಕ್ಷಿಸುವಿಯೆಂದು ತಿಳಿಯುವೆನು” ಎಂಬುದಾಗಿ ವಿಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ಇಗೋ, ಕಣದಲ್ಲಿ ಕುರಿಯ ತುಪ್ಪಟವನ್ನು ಇಡುತ್ತೇನೆ; ಅದರಲ್ಲಿ ಮಾತ್ರ ಮಂಜು ಬಿದ್ದು ನೆಲವೆಲ್ಲಾ ಒಣಗಿದ್ದರೆ ನೀವು ಹೇಳಿದಂತೆಯೇ ಇಸ್ರಯೇಲರನ್ನು ನನ್ನ ಮುಖಾಂತರ ರಕ್ಷಿಸುವಿರೆಂದು ತಿಳಿಯುವೆನು,” ಎಂದು ವಿಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಇಗೋ, ನಾನು ಕಣದಲ್ಲಿ ಕುರಿಯ ತುಪ್ಪಟವನ್ನು ಇಡುತ್ತೇನೆ, ಅದರಲ್ಲಿ ಮಾತ್ರ ಮಂಜುಬಿದ್ದು ನೆಲವೆಲ್ಲಾ ಒಣಗಿದ್ದರೆ ನೀನು ಹೇಳಿದಂತೆಯೇ ಇಸ್ರಾಯೇಲ್ಯರನ್ನು ನನ್ನ ಮೂಲಕವಾಗಿ ರಕ್ಷಿಸುವಿಯೆಂದು ತಿಳಿಯುವೆನು ಎಂಬದಾಗಿ ವಿಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ನಾನು ಕಣದಲ್ಲಿ ಕುರಿಯ ತುಪ್ಪಟವನ್ನು ಹಾಸುತ್ತೇನೆ. ನೆಲವೆಲ್ಲ ಒಣಗಿದ್ದು ಕೇವಲ ಕುರಿಯ ತುಪ್ಪಟದ ಮೇಲೆ ಇಬ್ಬನಿ ಬಿದ್ದರೆ, ನೀನು ಹೇಳಿದಂತೆಯೇ ಇಸ್ರೇಲನ್ನು ರಕ್ಷಿಸಲು ನನ್ನನ್ನು ಬಳಸುವೆ ಎಂದು ಅರಿತುಕೊಳ್ಳುವೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ಇಗೋ, ಉಣ್ಣೆಯ ತುಪ್ಪಟವನ್ನು ಕಣದಲ್ಲಿ ಹಾಕುವೆನು. ಮಂಜು ಉಣ್ಣೆಯ ಮೇಲೆ ಮಾತ್ರವೇ ಇದ್ದು ಭೂಮಿಯೆಲ್ಲಾ ಒಣಗಿದ್ದರೆ, ಆಗ ನೀವು ಹೇಳಿದ ಹಾಗೆ ಇಸ್ರಾಯೇಲನ್ನು ನನ್ನ ಕೈಯಿಂದ ನೀವು ರಕ್ಷಿಸುವಿರಿ ಎಂಬುದನ್ನು ನಾನು ತಿಳಿಯುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 6:37
11 ತಿಳಿವುಗಳ ಹೋಲಿಕೆ  

ನಾನು ಇಸ್ರಾಯೇಲಿಗೆ ಇಬ್ಬನಿಯಂತಾಗುವೆನು; ಅದು ತಾವರೆಯಂತೆ ಅರಳುವುದು; ಲೆಬನೋನಿನ ದೇವದಾರು ಮರಗಳ ಹಾಗೆ ಬೇರು ಬಿಟ್ಟುಕೊಳ್ಳುವುದು.


ಆದರೆ ಯೇಸು ಹೇಳಿದ್ದೇನೆಂದರೆ “ಕಳೆದುಹೋದ ಕುರಿಗಳಂತಿರುವ ಇಸ್ರಾಯೇಲ್ ಮನೆತನದವರ ಬಳಿಗೇ ಹೊರತು ಮತ್ತಾರ ಬಳಿಗೂ ನಾನು ಕಳುಹಿಸಲ್ಪಟ್ಟವನಲ್ಲ” ಅಂದನು.


ಹುಲ್ಲುಕೊಯ್ದ ಮೇಹುಗಾಡಿನ ಮೇಲೆ ಸುರಿಯುವ ವೃಷ್ಟಿಯಂತೆಯೂ, ಭೂಮಿಯನ್ನು ನೆನಸುವ ಹದಮಳೆಯಂತೆಯೂ ಅವನು ಇರಲಿ.


ನನ್ನ ಉಪದೇಶವು ಹಸಿಹುಲ್ಲಿನ ಮೇಲೆ ಮೆಲ್ಲಗೆ ಸುರಿಯುವ ಮಳೆಯ ತುಂತುರುಗಳಂತೆ ತಣ್ಣಗಿರುವುದು; ನನ್ನ ಬೋಧನೆಯು ಮಂಜಿನಂತೆಯೂ ಮತ್ತು ಕಾಯಿಪಲ್ಯಗಳ ಮೇಲೆ ಬೀಳುವ ಹದಮಳೆಯಂತೆಯೂ ಹಿತವಾಗಿರುವುದು.


ಅವನು ಆತನಿಗೆ, “ಕರ್ತನೇ, ದಯವಿರಲಿ; ನನ್ನೊಂದಿಗೆ ಮಾತನಾಡುತ್ತಿರುವವರು ತಾವೇ ಆಗಿದ್ದೀರೆಂಬುದಕ್ಕೆ ನನಗೊಂದು ಗುರುತನ್ನು ಅನುಗ್ರಹಿಸಬೇಕು.


ಮತ್ತು ಗಿದ್ಯೋನನು ದೇವರಿಗೆ, “ನೀನು ಹೇಳಿದಂತೆ ಇಸ್ರಾಯೇಲ್ಯರನ್ನು ನನ್ನ ಮೂಲಕವಾಗಿ ರಕ್ಷಿಸುವಿಯೋ ಇಲ್ಲವೋ ಎಂಬುದನ್ನು ತಿಳಿಯಪಡಿಸು.


ಹಾಗೆಯೇ ಆಯಿತು; ಅವನು ಮರುದಿನ ಹೊತ್ತಾರೆಯಲ್ಲಿ ಎದ್ದು ಉಣ್ಣೆಯನ್ನು ಒತ್ತಿ ಹಿಂಡಲು ಮಂಜಿನ ನೀರು ಒಂದು ಬಟ್ಟಲು ತುಂಬಾ ಆಯಿತು.


ನಾನು ಯಾವ ಹುಡುಗಿಗೆ, ‘ನೀನು ದಯವಿಟ್ಟು ನಿನ್ನ ಕೊಡವನ್ನು ಇಳಿಸಿ ನನಗೆ ಕುಡಿಯುವುದಕ್ಕೆ ನೀರನ್ನು ಕೊಡು’ ಎಂದು ಹೇಳುವಾಗ, ‘ನೀನು ಕುಡಿಯಬಹುದು ಮತ್ತು ನಿನ್ನ ಒಂಟೆಗಳಿಗೂ ನೀರು ಕೊಡುತ್ತೇನೆ’ ಎನ್ನುವಳೋ, ಅವಳೇ ನಿನ್ನ ದಾಸನಾದ ಇಸಾಕನಿಗೆ ನೀನು ನೇಮಿಸಿರುವ ಕನ್ಯೆಯಾಗಲಿ. ನನ್ನ ದಣಿಯ ಮೇಲೆ ನಿನ್ನ ದಯೆಯಿದೆ ಎಂದು ಇದರಿಂದ ನನಗೆ ಗೊತ್ತಾಗುವುದು” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು