ನ್ಯಾಯಸ್ಥಾಪಕರು 6:39 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 ಅವನು ತಿರುಗಿ ದೇವರಿಗೆ, “ಸ್ವಾಮೀ, ಸಿಟ್ಟಾಗಬಾರದು; ಇನ್ನೊಂದು ಸಾರಿ ಮಾತನಾಡುತ್ತೇನೆ. ಇನ್ನು ಒಂದೇ ಸಾರಿ ಈ ಉಣ್ಣೆಯಿಂದ ನಿನ್ನನ್ನು ಪರೀಕ್ಷಿಸುವುದಕ್ಕೆ ಅಪ್ಪಣೆಯಾಗಲಿ; ಈ ಉಣ್ಣೆ ಮಾತ್ರವೇ ಒಣಗಿದ್ದು ನೆಲದ ಮೇಲೆಲ್ಲಾ ಹನಿ ಬಿದ್ದಿರಲಿ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)39 ಅವನು ಪುನಃ ದೇವರಿಗೆ, “ಸ್ವಾಮೀ, ಸಿಟ್ಟಾಗಬೇಡಿ; ಇನ್ನೊಂದು ಸಾರಿ ಮಾತಾಡುತ್ತೇನೆ. ಇನ್ನು ಒಂದೇ ಸಾರಿ ಈ ತುಪ್ಪಟದಿಂದ ನಿಮ್ಮನ್ನು ಪರೀಕ್ಷಿಸುವುದಕ್ಕೆ ಅಪ್ಪಣೆಯಾಗಲಿ; ಈ ತುಪ್ಪಟ ಮಾತ್ರವೇ ಒಣಗಿದ್ದು ನೆಲದ ಮೇಲೆಲ್ಲಾ ಹನಿಬಿದ್ದಿರಲಿ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)39 ಅವನು ತಿರಿಗಿ ದೇವರಿಗೆ - ಸ್ವಾಮೀ, ಸಿಟ್ಟಾಗಬಾರದು; ಇನ್ನೊಂದು ಸಾರಿ ಮಾತಾಡುತ್ತೇನೆ. ಇನ್ನು ಒಂದೇ ಸಾರಿ ಈ ತುಪ್ಪಟದಿಂದ ನಿನ್ನನ್ನು ಪರೀಕ್ಷಿಸುವದಕ್ಕೆ ಅಪ್ಪಣೆಯಾಗಲಿ; ಈ ತುಪ್ಪಟವು ಮಾತ್ರವೇ ಒಣಗಿದ್ದು ನೆಲದ ಮೇಲೆಲ್ಲಾ ಹನಿಬಿದ್ದಿರಲಿ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್39 ಆಗ ಗಿದ್ಯೋನನು ದೇವರಿಗೆ, “ನನ್ನ ಮೇಲೆ ಕೋಪಿಸಿಕೊಳ್ಳಬೇಡ. ನಾನು ಇನ್ನೊಂದು ಸಾಕ್ಷ್ಯವನ್ನು ಕೇಳುತ್ತೇನೆ. ಇನ್ನೊಂದು ಸಲ ಕುರಿಯ ತುಪ್ಪಟದಿಂದ ನಿನ್ನನ್ನು ಪರೀಕ್ಷಿಸುತ್ತೇನೆ. ಈ ಸಲ, ಸುತ್ತಮುತ್ತಲಿನ ಭೂಮಿಯ ಮಂಜಿನಿಂದ ಹಸಿಯಾಗಿ, ಕುರಿಯ ತುಪ್ಪಟ ಮಾತ್ರ ಒಣಗಿರಲಿ” ಎಂದು ಪ್ರಾರ್ಥಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ39 ಗಿದ್ಯೋನನು ದೇವರಿಗೆ, “ನಾನು ಇನ್ನೊಂದು ಸಾರಿ ಮಾತನಾಡುವುದರಿಂದ ನಿಮ್ಮ ಕೋಪವು ನನ್ನ ಮೇಲೆ ಉರಿಯಬಾರದು. ಉಣ್ಣೆಯ ತುಪ್ಪಟದಿಂದ ಇನ್ನೊಂದು ಸಾರಿ ನಾನು ನಿಮ್ಮನ್ನು ಶೋಧಿಸುವೆನು. ತುಪ್ಪಟ ಮಾತ್ರವೇ ಒಣಗುವ ಹಾಗೆಯೂ ಭೂಮಿಯಲ್ಲೆಲ್ಲಾ ಮಂಜು ಇರುವ ಹಾಗೆಯೂ ಅಪ್ಪಣೆ ಆಗಲಿ,” ಎಂದನು. ಅಧ್ಯಾಯವನ್ನು ನೋಡಿ |