ನ್ಯಾಯಸ್ಥಾಪಕರು 6:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆ ಶತ್ರುಗಳು ತಮ್ಮ ಕುರಿದನ ಗುಡಾರಗಳ ಸಹಿತವಾಗಿ ಮಿಡತೆಗಳಂತೆ ಗುಂಪುಗುಂಪಾಗಿ ಬರುತ್ತಿದ್ದರು. ಅವರೂ ಅವರ ಒಂಟೆಗಳೂ ಅಸಂಖ್ಯವಾಗಿದ್ದವು. ಆ ಗುಂಪೆಲ್ಲಾ ಬಂದು ದೇಶವನ್ನು ಹಾಳುಮಾಡುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಆ ಶತ್ರುಗಳು ತಮ್ಮ ಕುರಿದನ ಗುಡಾರಗಳ ಸಮೇತ ಮಿಡತೆಗಳಂತೆ ಗುಂಪು ಗುಂಪಾಗಿ ಬರುತ್ತಿದ್ದರು. ಅವರ ಒಂಟೆಗಳೂ ಅಸಂಖ್ಯವಾಗಿದ್ದವು. ಆ ಗುಂಪುಗಳಿಂದ ನಾಡೆಲ್ಲ ನಾಶವಾಗುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಆ ಶತ್ರುಗಳು ತಮ್ಮ ಕುರಿದನ ಗುಡಾರಗಳ ಸಹಿತವಾಗಿ ವಿುಡಿತೆಗಳಂತೆ ಗುಂಪುಗುಂಪಾಗಿ ಬಂದರು; ಅವರೂ ಅವರ ಒಂಟೆಗಳೂ ಅಸಂಖ್ಯ. ಆ ಗುಂಪೆಲ್ಲಾ ಬಂದು ದೇಶವನ್ನು ಹಾಳುಮಾಡುತ್ತಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಮಿದ್ಯಾನ್ಯರು ಬಂದು ಈ ಪ್ರದೇಶದಲ್ಲಿ ಪಾಳೆಯ ಮಾಡಿಕೊಂಡರು. ಅವರು ತಮ್ಮ ಸಂಗಡ ತಮ್ಮ ಕುಟುಂಬದವರನ್ನೂ ಪಶುಗಳನ್ನೂ ತಂದರು. ಅವರು ಮಿಡತೆಗಳ ಗುಂಪಿನಂತೆ ಅಸಂಖ್ಯರಾಗಿದ್ದರು. ಅವರು ಮತ್ತು ಅವರ ಒಂಟೆಗಳು ಅತಿದೊಡ್ಡ ಪ್ರಮಾಣದಲ್ಲಿದ್ದು ಎಣಿಸಲು ಸಾಧ್ಯವಿರಲಿಲ್ಲ. ಇವರೆಲ್ಲರೂ ಇಸ್ರೇಲರ ಪ್ರದೇಶಕ್ಕೆ ನುಗ್ಗಿ ಹಾಳುಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಅವರು ತಮ್ಮ ಪಶುಗಳ ಡೇರೆಗಳ ಸಹಿತವಾಗಿ ಮಿಡತೆಗಳ ಹಾಗೆ ಗುಂಪಾಗಿ ಬಂದರು. ಅವರಿಗೂ, ಅವರ ಒಂಟೆಗಳಿಗೂ ಎಣಿಕೆ ಇರಲಿಲ್ಲ. ಅವರು ನಾಡನ್ನು ನಾಶಮಾಡುವುದಕ್ಕೆ ಬಂದರು. ಅಧ್ಯಾಯವನ್ನು ನೋಡಿ |