ನ್ಯಾಯಸ್ಥಾಪಕರು 7:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಆನಂತರ ಯೆರುಬ್ಬಾಳನೆನಿಸಿಕೊಳ್ಳುವ ಗಿದ್ಯೋನನೂ, ಅವನ ಸಂಗಡ ಇದ್ದ ಜನರೂ ಬೆಳಿಗ್ಗೆ ಎದ್ದು ಹೊರಟು ಹೋಗಿ ಹರೋದಿನ ಬುಗ್ಗೆಯ ಬಳಿಯಲ್ಲಿ ಬಿಡಾರ ಹಾಕಿಕೊಂಡರು. ಇವರ ಉತ್ತರದಿಕ್ಕಿನಲ್ಲಿ ಮೋರೆಗುಡ್ಡದ ಹಿಂದಿನ ತಗ್ಗಿನಲ್ಲಿ ಮಿದ್ಯಾನ್ಯರ ದಂಡಿಳಿದಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ‘ಯೆರುಬ್ಬಾಳ’ ಎನಿಸಿಕೊಂಡ ಗಿದ್ಯೋನನೂ ಅವನ ಸಂಗಡ ಇದ್ದ ಜನರೂ ಬೆಳಿಗ್ಗೆ ಎದ್ದು ಹೊರಟುಹೋಗಿ ಹರೋದಿನ ಬುಗ್ಗೆಯ ಬಳಿಯಲ್ಲಿ ಇಳಿದುಕೊಂಡರು. ಇವರಿಗೆ ಉತ್ತರದಿಕ್ಕಿನಲ್ಲಿ ಮೋರೆ ಗುಡ್ಡದ ಹಿಂದಿನ ತಗ್ಗಿನಲ್ಲಿ ಮಿದ್ಯಾನ್ಯರ ದಂಡಿಳಿದಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯೆರುಬ್ಬಾಳನೆನಿಸಿಕೊಳ್ಳುವ ಗಿದ್ಯೋನನೂ ಅವನ ಸಂಗಡ ಇದ್ದ ಜನರೂ ಬೆಳಿಗ್ಗೆ ಎದ್ದು ಹೊರಟುಹೋಗಿ ಹರೋದಿನ ಬುಗ್ಗೆಯ ಬಳಿಯಲ್ಲಿ ಇಳುಕೊಂಡರು. ಇವರಿಗೆ ಉತ್ತರದಿಕ್ಕಿನಲ್ಲಿ ಮೋರೆ ಗುಡ್ಡದ ಹಿಂದಿನ ತಗ್ಗಿನಲ್ಲಿ ವಿುದ್ಯಾನ್ಯರ ದಂಡಿಳಿದಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಬೆಳಗಿನ ಜಾವ ಯೆರುಬ್ಬಾಳನು (ಗಿದ್ಯೋನನು) ಮತ್ತು ಅವನ ಎಲ್ಲಾ ಜನರು ಹೋಗಿ ಹರೋದಿನ ಬುಗ್ಗೆಯ ಬಳಿಯಲ್ಲಿ ಪಾಳೆಯ ಮಾಡಿಕೊಂಡರು. ಮಿದ್ಯಾನ್ಯರು ಮೋರೆ ಎಂಬ ಬೆಟ್ಟದ ತಗ್ಗಿನಲ್ಲಿ ಪಾಳೆಯ ಮಾಡಿಕೊಂಡರು. ಇದು ಗಿದ್ಯೋನ ಮತ್ತು ಅವನ ಜನರ ಉತ್ತರಕ್ಕಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಗಿದ್ಯೋನನೆಂಬ ಯೆರುಬ್ಬಾಳನೂ, ಅವನ ಸಂಗಡ ಇದ್ದ ಜನರೆಲ್ಲರೂ ಉದಯದಲ್ಲಿ ಎದ್ದು, ಹೆರೋದಿನ ಬಾವಿಯ ಬಳಿಯಲ್ಲಿ ದಂಡಿಳಿಸಿದರು. ಮಿದ್ಯಾನ್ಯರ ದಂಡು ಅವರಿಗೆ ಉತ್ತರಕ್ಕೆ ಮೋರೆ ಬೆಟ್ಟದ ತಗ್ಗಿನಲ್ಲಿ ಇಳಿದಿತ್ತು. ಅಧ್ಯಾಯವನ್ನು ನೋಡಿ |