Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 7:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ರಾತ್ರಿಯ ಎರಡನೆಯ ಜಾವದಲ್ಲಿ ಕಾವಲುಗಾರರು ಬದಲಾದ ಕೂಡಲೆ ಗಿದ್ಯೋನನೂ ಅವನ ಸಂಗಡ ಇದ್ದ ನೂರು ಮಂದಿಯೂ (ಶತ್ರುಗಳ) ಪಾಳೆಯದ ಅಂಚಿಗೆ ಬಂದು, ಕೊಂಬುಗಳನ್ನು ಊದಿ, ತಮ್ಮ ಕೈಯಲ್ಲಿದ್ದ ಕೊಡಗಳನ್ನು ಒಡೆದುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಮಧ್ಯರಾತ್ರಿ ಪ್ರಾರಂಭವಾಗುತ್ತಿದ್ದಂತೆ ಮೊದಲ ಕಾವಲುಗಾರರು ಬದಲಾದ ಕೂಡಲೆ ಗಿದ್ಯೋನನು ಮತ್ತು ಅವನ ಸಂಗಡ ಇದ್ದ ನೂರುಮಂದಿ (ಶತ್ರುಗಳ) ಪಾಳೆಯದ ಅಂಚಿಗೆ ಬಂದು ಕೊಂಬುಗಳನ್ನು ಊದಿ, ಕೈಯಲ್ಲಿದ್ದ ಕೊಡಗಳನ್ನು ಒಡೆದುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ರಾತ್ರಿಯ ಮಧ್ಯಯಾಮವು ಪ್ರಾರಂಭಿಸಿ ಕಾವಲುಗಾರರು ಬದಲಾದ ಕೂಡಲೆ ಗಿದ್ಯೋನನೂ ಅವನ ಸಂಗಡ ಇದ್ದ ನೂರು ಮಂದಿಯೂ [ಶತ್ರುಗಳ] ಪಾಳೆಯದ ಅಂಚಿಗೆ ಬಂದು ಕೊಂಬುಗಳನ್ನು ಊದಿ ಕೈಯಲ್ಲಿದ್ದ ಕೊಡಗಳನ್ನು ಒಡೆದುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಗಿದ್ಯೋನನು ಮತ್ತು ಅವನ ಜೊತೆಯಲ್ಲಿದ್ದ ನೂರು ಜನರು ಶತ್ರುಗಳ ಪಾಳೆಯದ ಬಳಿಗೆ ಹೋದರು. ಶತ್ರುಗಳ ಪಾಳೆಯದ ಕಾವಲುಗಾರರು ಬದಲಾದ ಕೂಡಲೆ ಅವರು ಅಲ್ಲಿಗೆ ಹೋಗಿದ್ದರು. ಆಗ ಮಧ್ಯರಾತ್ರಿಯಾಗಿತ್ತು. ಗಿದ್ಯೋನ ಮತ್ತು ಅವನ ಜನರು ತಮ್ಮ ತುತ್ತೂರಿಗಳನ್ನು ಊದಿದರು ಮತ್ತು ಮಡಕೆಗಳನ್ನು ಒಡೆದುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಮಧ್ಯರಾತ್ರಿ ಆರಂಭದ ಜಾವದಲ್ಲಿ ಕಾವಲುಗಾರರನ್ನು ಬದಲಾಯಿಸಿದಾಗ, ಗಿದ್ಯೋನನೂ, ಅವನ ಸಂಗಡ ಇದ್ದ ನೂರು ಮಂದಿಯೂ ಪಾಳೆಯ ಹೊರಗೆ ಬಂದು, ತುತೂರಿಗಳನ್ನು ಊದಿ, ತಮ್ಮ ಕೈಯಲ್ಲಿದ್ದ ಕೊಡಗಳನ್ನು ಒಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 7:19
11 ತಿಳಿವುಗಳ ಹೋಲಿಕೆ  

“ಇಗೋ ಕಳ್ಳನು ಬರುವಂತೆ ಬರುತ್ತೇನೆ. ತಾನು ಬೆತ್ತಲೆಯಾಗಿ ತಿರುಗಾಡಿ ಜನರಿಂದ ಅವಮಾನಕ್ಕೆ ಗುರಿಯಾಗದಂತೆ ಎಚ್ಚರವಾಗಿದ್ದು ತನ್ನ ವಸ್ತ್ರಗಳನ್ನು ಜಾಗರೂಕತೆಯಿಂದ ಕಾಪಾಡಿಕೊಳ್ಳುವವನು ಧನ್ಯನು.”


ರಾತ್ರಿ ಕಳ್ಳನು ಹೇಗೆ ಬರುತ್ತಾನೋ ಹಾಗೆಯೇ ಕರ್ತನ ದಿನವು ಬರುವುದೆಂದು ನೀವೇ ಚೆನ್ನಾಗಿ ತಿಳಿದಿದ್ದೀರಲ್ಲಾ.


ಆದರೆ ಅರ್ಧರಾತ್ರಿಯಲ್ಲಿ, ‘ಇಗೋ, ಮದಲಿಂಗನು ಬರುತ್ತಿದ್ದಾನೆ ಅವನನ್ನು ಎದುರುಗೊಳ್ಳಲು ಹೊರಡಿರಿ’ ಎಂಬ ಕೂಗು ಕೇಳಿಸಿತು.


ನೀನು ಕಬ್ಬಿಣದ ಗದೆಯಿಂದ ಅವರನ್ನು ನಾಶಮಾಡುವಿ; ಮಣ್ಣಿನ ಮಡಿಕೆಗಳನ್ನೋ ಎಂಬಂತೆ ಅವರನ್ನು ಒಡೆದುಹಾಕುವಿ” ಎಂದು ಹೇಳಿದನು.


ಮತ್ತು ಅವನು ಆ ಮುನ್ನೂರು ಮಂದಿಯನ್ನು ಮೂರು ಗುಂಪು ಮಾಡಿ ಪ್ರತಿಯೊಬ್ಬನ ಕೈಯಲ್ಲಿ ಕೊಂಬನ್ನೂ, ಉರಿಯುವ ಪಂಜು ಇರುವ ಬರಿಕೊಡವನ್ನೂ ಕೊಟ್ಟು ಅವರಿಗೆ,


ಬೆಳಗಿನ ಜಾವದಲ್ಲಿ ಯೆಹೋವನು ಆ ಅಗ್ನಿ ಸ್ತಂಭ ಮತ್ತು ಮೇಘ ಸ್ತಂಭದೊಳಗಿನಿಂದ ಐಗುಪ್ತ್ಯರ ದಂಡಿನ ಕಡೆಗೆ ನೋಡಿ ಅವರಲ್ಲಿ ಗಲಿಬಿಲಿಯನ್ನು ಉಂಟುಮಾಡಿದನು.


ನಾನೂ ನನ್ನ ಸಂಗಡ ಇದ್ದವರೂ ಕೊಂಬುಗಳನ್ನು ಊದಲು ನೀವೂ ಪಾಳೆಯದ ಸುತ್ತಲೂ ಕೊಂಬನ್ನು ಊದಿ, ‘ಯೆಹೋವನಿಗೆ ಜಯ, ಗಿದ್ಯೋನನಿಗೆ ಜಯ ಎಂದು ಕೂಗಿರಿ’” ಎಂದು ಹೇಳಿದನು.


ಕೂಡಲೆ ಮೂರು ಗುಂಪಿನವರೂ ಕೊಂಬುಗಳನ್ನು ಊದಿ, ಕೊಡಗಳನ್ನು ಒಡೆದುಬಿಟ್ಟು, ಎಡಗೈಯಲ್ಲಿ ಪಂಜುಗಳನ್ನೂ ಬಲಗೈಯಲ್ಲಿ ಊದುವ ಕೊಂಬುಗಳನ್ನೂ ಹಿಡಿದು, “ಯೆಹೋವನ ಕತ್ತಿ, ಗಿದ್ಯೋನನ ಕತ್ತಿ ಆಗಿದೆ” ಎಂದು ಕೂಗಿ


ಸಾವಿರ ವರ್ಷಗಳು ನಿನ್ನ ದೃಷ್ಟಿಯಲ್ಲಿ ಗತಿಸಿಹೋದ ನಿನ್ನೆಯ ದಿನದಂತೆಯೂ, ರಾತ್ರಿಯ ಜಾವದಂತೆಯೂ ಇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು