Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 7:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಇದಲ್ಲದೆ ಗಿದ್ಯೋನನು ಎಫ್ರಾಯೀಮ್ ಪರ್ವತಪ್ರದೇಶಗಳಿಗೆ ದೂತರನ್ನು ಕಳುಹಿಸಿ ಅಲ್ಲಿನವರಿಗೆ, “ನೀವು ಮಿದ್ಯಾನ್ಯರಿಗೆ ವಿರೋಧವಾಗಿ ಹೊರಟು ಬೇತ್‌ಬಾರದವರೆಗಿರುವ ಪ್ರವಾಹಗಳನ್ನೂ ಯೊರ್ದನ್ ಹೊಳೆಯನ್ನೂ ವಶಪಡಿಸಿಕೊಳ್ಳಿರಿ” ಎಂದು ಹೇಳಿಕಳುಹಿಸಿದನು. ಆಗ ಎಫ್ರಾಯೀಮ್ಯರೆಲ್ಲರೂ ಒಟ್ಟಾಗಿ ಬೇತ್‌ಬಾರದವರೆಗಿರುವ ಪ್ರವಾಹಗಳಿಗೂ ಬಂದು ಅವುಗಳ ಹಾಯಗಡಗಳನ್ನೆಲ್ಲಾ ಮತ್ತು ಯೊರ್ದನ್ ಹೊಳೆಯನ್ನೂ ಹಿಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಇದಲ್ಲದೆ, ಗಿದ್ಯೋನನು ಎಫ್ರಯಿಮ್ ಪರ್ವತ ಪ್ರದೇಶಗಳಿಗೆ ದೂತರನ್ನು ಅಟ್ಟಿ ಆ ಜನರಿಗೆ, “ನೀವು ಮಿದ್ಯಾನ್ಯರಿಗೆ ವಿರೋಧವಾಗಿ ಹೊರಟು, ಅವರು ಬೇತ್ ಬಾರದವರೆಗಿರುವ ಪ್ರವಾಹಗಳನ್ನೂ ಜೋರ್ಡನ್ ನದಿಯನ್ನೂ ದಾಟಿಹೋಗದಂತೆ ಅಡ್ಡಗಟ್ಟಿರಿ,” ಎಂದು ಹೇಳಿಕಳಿಸಿದನು. ಆಗ ಎಫ್ರಯಿಮ್ಯರೆಲ್ಲರೂ ಬೇತ್‍ಬಾರದವರೆಗಿರುವ ಪ್ರವಾಹಗಳಿಗೂ ಜೋರ್ಡನ್ ನದಿಗೂ ಬಂದು ಅವುಗಳ ಹಾಯಗಡಗಳನ್ನೆಲ್ಲಾ ಹಿಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಇದಲ್ಲದೆ ಗಿದ್ಯೋನನು ಎಫ್ರಾಯೀಮ್ ಪರ್ವತಪ್ರದೇಶಗಳಿಗೆ ದೂತರನ್ನು ಅಟ್ಟಿ ಅಲ್ಲಿನವರಿಗೆ - ನೀವು ವಿುದ್ಯಾನ್ಯರಿಗೆ ವಿರೋಧವಾಗಿ ಹೊರಟು ಅವರು ಬೇತ್‍ಬಾರದವರೆಗಿರುವ ಪ್ರವಾಹಗಳನ್ನೂ ಯೊರ್ದನ್ ಹೊಳೆಯನ್ನೂ ದಾಟಿ ಹೋಗದಂತೆ ಅಡ್ಡಗಟ್ಟಿರಿ ಎಂದು ಹೇಳಿಸಿದನು. ಆಗ ಎಫ್ರಾಯೀಮ್ಯರೆಲ್ಲರೂ ಬೇತ್‍ಬಾರದವರೆಗಿರುವ ಪ್ರವಾಹಗಳಿಗೂ ಯೊರ್ದನ್‍ಹೊಳೆಗೂ ಬಂದು ಅವುಗಳ ಹಾಯಗಡಗಳನ್ನೆಲ್ಲಾ ಹಿಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಗಿದ್ಯೋನನು ಎಫ್ರಾಯೀಮ್ ಬೆಟ್ಟಪ್ರದೇಶಗಳಿಗೆ ದೂತರನ್ನು ಕಳುಹಿಸಿದನು. ಆ ದೂತರು, “ಬನ್ನಿ, ಮಿದ್ಯಾನ್ಯರ ಮೇಲೆ ಧಾಳಿ ಮಾಡಿರಿ. ಬೇತ್‌ಬಾರದವರೆಗಿನ ನದಿಯ ಮತ್ತು ಜೋರ್ಡನ್ ನದಿಯ ಪ್ರದೇಶವನ್ನು ಹಿಡಿದುಕೊಳ್ಳಿರಿ. ಮಿದ್ಯಾನ್ಯರು ಅಲ್ಲಿಗೆ ಬರುವ ಮೊದಲೇ ಈ ಕೆಲಸವನ್ನು ಮಾಡಿರಿ” ಎಂದು ತಿಳಿಸಿದರು. ಅವರು ಎಫ್ರಾಯೀಮ್ ಕುಲದ ಎಲ್ಲ ಜನರನ್ನು ಕರೆದರು. ಅವರು ಬೇತ್‌ಬಾರಾದವರೆಗೆ ನದಿಯ ಪ್ರದೇಶವನ್ನು ಹಿಡಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಇದಲ್ಲದೆ ಗಿದ್ಯೋನನು ಎಫ್ರಾಯೀಮ್ ಬೆಟ್ಟದಲ್ಲೆಲ್ಲಾ ದೂತರನ್ನು ಕಳುಹಿಸಿ, “ನೀವು ಮಿದ್ಯಾನ್ಯರಿಗೆ ಎದುರಾಗಿ ಇಳಿದು ಹೋಗಿ, ಬೇತ್‌ಬಾರದವರೆಗಿರುವ ನೀರನ್ನೂ, ಯೊರ್ದನನ್ನೂ ಅವರಿಗೆ ಮುಂದಾಗಿ ಹಿಡಿಯಿರಿ,” ಎಂದು ಹೇಳಿದನು. ಹಾಗೆಯೇ ಎಫ್ರಾಯೀಮನ ಜನರೆಲ್ಲರೂ ಕೂಡಿಕೊಂಡು, ಬೇತ್‌ಬಾರದವರೆಗೆ ನೀರನ್ನೂ, ಯೊರ್ದನನ್ನೂ ಹಿಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 7:24
7 ತಿಳಿವುಗಳ ಹೋಲಿಕೆ  

ಹೇಗೂ ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಿರಿ. ಆಗ ನಾನು ಬಂದು ನಿಮ್ಮನ್ನು ನೋಡಿದರೂ ಸರಿಯೇ, ದೂರದಲ್ಲಿದ್ದು ನಿಮ್ಮ ಸುದ್ದಿಯನ್ನು ಕೇಳಿದರೂ ಸರಿಯೇ, ನೀವು ನಿಮ್ಮ ವಿರೋಧಿಗಳಿಗೆ ಯಾವ ವಿಷಯದಲ್ಲಾದರೂ ಹೆದರದೆ ಏಕಮನಸ್ಸಿನಿಂದ ದೃಢವಾಗಿ ನಿಂತು ಸುವಾರ್ತೆಯಲ್ಲಿಟ್ಟ ನಂಬಿಕೆಗೋಸ್ಕರ ಐಕಮತ್ಯದಿಂದ ಹೋರಾಡುವವರಾಗಿದ್ದೀರೆಂದು ನಾನು ತಿಳಿದುಕೊಳ್ಳುವೆನು.


ಸಹೋದರರೇ, ನೀವು ನನಗೋಸ್ಕರ ದೇವರ ಮುಂದೆ ಮಾಡುವ ಪ್ರಾರ್ಥನೆಗಳಲ್ಲಿ ನನ್ನೊಂದಿಗೆ ಬಲವಾಗಿ ವಿಜ್ಞಾಪಿಸಿಕೊಳ್ಳಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ನಿಮಿತ್ತವಾಗಿಯೂ ಪವಿತ್ರಾತ್ಮನಿಂದಾಗುವ ಪ್ರೀತಿಯ ನಿಮಿತ್ತವಾಗಿಯೂ ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ಇದೆಲ್ಲಾ ಯೋಹಾನನು ದೀಕ್ಷಾಸ್ನಾನ ಮಾಡಿಸುತ್ತಿದ್ದ ಯೊರ್ದನ್ ನದಿಯ ಆಚೆಯಲ್ಲಿರುವ ಬೇಥಾನ್ಯ ಎಂಬ ಊರಿನಲ್ಲಿ ನಡೆಯಿತು.


ಇದಲ್ಲದೆ ಅವರು ಎಫ್ರಾಯೀಮಿಗೆ ಹೋಗುವ ಯೊರ್ದನಿನ ಹಾಯಗಡಗಳನ್ನೆಲ್ಲಾ ಹಿಡಿದರು. ತಪ್ಪಿಸಿಕೊಂಡ ಎಫ್ರಾಯೀಮ್ಯರಲ್ಲೊಬ್ಬನು ಅಲ್ಲಿಗೆ ಬಂದು ನನ್ನನ್ನು ದಾಟಗೊಡಿಸಿರಿ ಎಂದು ಅವರನ್ನು ಕೇಳಿದರೆ ಅವರು, “ನೀನು ಎಫ್ರಾಯೀಮ್ಯನೋ” ಎಂದು ಕೇಳುವರು.


ಇಗೋ, ಕೂಷಾನಿನ ಗುಡಾರಗಳು ತಳಮಳಗೊಂಡಿವೆ, ಮಿದ್ಯಾನ್ ದೇಶದ ಡೇರೆಗಳು ನಡುಗುತ್ತಿವೆ.


ದೇವರು ನಿಮ್ಮ ಕೈಯಲ್ಲಿ ಮಿದ್ಯಾನ್ಯರ ನಾಯಕರಾದ ಓರೇಬ್ ಜೇಬರನ್ನು ಒಪ್ಪಿಸಿ ಕೊಟ್ಟಿದ್ದಾನಲ್ಲಾ! ಇದಕ್ಕೆ ಸಮಾನವಾದದ್ದನ್ನು ನಾನೇನು ಮಾಡಿದ್ದೇನೆ?” ಎಂದನು. ಈ ಮಾತುಗಳನ್ನು ಕೇಳಿದಾಗ ಅವರ ಸಿಟ್ಟಿಳಿಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು