Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 8:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅನಂತರ ಎಫ್ರಾಯೀಮ್ಯರು ಗಿದ್ಯೋನನಿಗೆ, “ನೀನು ಹೀಗೆ ಯಾಕೆ ಮಾಡಿದಿ? ಮಿದ್ಯಾನ್ಯರೊಡನೆ ಯುದ್ಧಮಾಡುವುದಕ್ಕೆ ಹೊರಟಾಗ ನಮ್ಮನ್ನೇಕೆ ಕರೆಯಲಿಲ್ಲ?” ಎಂದು ಉಗ್ರಕೋಪದಿಂದ ಜಗಳವಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಅನಂತರ ಎಫ್ರಯಿಮ್ಯರು ಗಿದ್ಯೋನನಿಗೆ, “ನೀನು ಹೀಗೇಕೆ ಮಾಡಿದೆ? ಮಿದ್ಯಾನ್ಯರೊಡನೆ ಯುದ್ಧ ಮಾಡುವುದಕ್ಕೆ ಹೊರಟಾಗ ನಮ್ಮನ್ನೇಕೆ ಕರೆಯಲಿಲ್ಲ?” ಎಂದು ಉಗ್ರ ವಾಗ್ವಾದ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಅನಂತರ ಎಫ್ರಾಯೀಮ್ಯರು ಗಿದ್ಯೋನನಿಗೆ - ನೀನು ಹೀಗೆ ಯಾಕೆ ಮಾಡಿದಿ? ವಿುದ್ಯಾನ್ಯರೊಡನೆ ಯುದ್ಧಮಾಡುವದಕ್ಕೆ ಹೊರಟಾಗ ನಮ್ಮನ್ನೇಕೆ ಕರೆಯಲಿಲ್ಲ ಎಂದು ಉಗ್ರದಿಂದ ಕಲಹಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಎಫ್ರಾಯೀಮ್ಯರು ಗಿದ್ಯೋನನ ಮೇಲೆ ಕೋಪಗೊಂಡಿದ್ದರು. ಎಫ್ರಾಯೀಮ್ಯರು ಗಿದ್ಯೋನನನ್ನು ಕಂಡಾಗ, “ನೀನು ನಮ್ಮ ಸಂಗಡ ಹೀಗೇಕೆ ವರ್ತಿಸಿದೆ? ನೀನು ಮಿದ್ಯಾನ್ಯರೊಂದಿಗೆ ಯುದ್ಧಮಾಡಲು ಹೋದಾಗ ನಮ್ಮನ್ನು ಏಕೆ ಕರೆಯಲಿಲ್ಲ?” ಎಂದು ಗಿದ್ಯೋನನನ್ನು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆಗ ಎಫ್ರಾಯೀಮ್ಯರು, “ನೀನು ಮಿದ್ಯಾನ್ಯರ ಮೇಲೆ ಯುದ್ಧಮಾಡುವುದಕ್ಕೆ ಹೋಗುವಾಗ, ನಮ್ಮನ್ನು ಕರೆಯದೆ ಹೋದದ್ದೇನು?” ಎಂದು ಹೇಳಿ ಅವನ ಸಂಗಡ ತೀಕ್ಷ್ಣವಾಗಿ ವಿವಾದ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 8:1
9 ತಿಳಿವುಗಳ ಹೋಲಿಕೆ  

ಆಗ ಇಸ್ರಾಯೇಲರೆಲ್ಲರೂ ಅರಸನ ಮುಂದೆ ಬಂದು ಅವನನ್ನು, “ನಮ್ಮ ಸಹೋದರರಾದ ಯೆಹೂದ್ಯರು ನಮಗೆ ತಿಳಿಸದೆ ತಾವೆ ಹೋಗಿ ಅರಸನನ್ನೂ, ಅವನ ಮನೆಯವರನ್ನೂ, ಅವನೊಡನೆ ಇದ್ದ ಜನರನ್ನೂ ಯೊರ್ದನ್ ನದಿ ದಾಟಿಸಿ ಕರೆದುಕೊಂಡು ಬಂದದ್ದೇಕೆ?” ಎಂದು ಕೇಳಿದರು.


ಆಗ ಸಮಸ್ತ ಪ್ರಯಾಸವನ್ನು, ಕೈಗೂಡುವ ಸಕಲ ಕಾರ್ಯವನ್ನು ನೋಡಿ ಇವು ಪರಸ್ಪರ ಮತ್ಸರಕ್ಕೆ ಆಸ್ಪದವೆಂದು ಗ್ರಹಿಸಿಕೊಂಡೆನು. ಇದು ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥವೇ.


ಕೋಪದಿಂದ ಮೂರ್ಖನಿಗೆ ನಾಶವು, ರೋಷದಿಂದ ಮೂಢನಿಗೆ ಮರಣವು ಸಂಭವಿಸುವುದಲ್ಲವೇ.


ಆಗ ಅವನು ಅವರಿಗೆ, “ನೀವು ಮಾಡಿದ ಕಾರ್ಯಕ್ಕೆ ಸಮಾನವಾಗುವಂತದ್ದು ನಾನೇನು ಮಾಡಿದೆ? ಅಬೀಯೆಜೆರನವರು ಸುಗ್ಗಿಯಲ್ಲಿ ಕೂಡಿಸಿದ್ದಕ್ಕಿಂತಲೂ, ಎಫ್ರಾಯೀಮ್ಯರು ಹಕ್ಕಲಾಯ್ದು ಕೂಡಿಸಿದ್ದು ಹೆಚ್ಚಾಗಿದೆಯಲ್ಲವೇ?


ಮೃದುವಾದ ಪ್ರತ್ಯುತ್ತರವು ಸಿಟ್ಟನ್ನಾರಿಸುವುದು, ಬಿರುನುಡಿಯು ಸಿಟ್ಟನ್ನೇರಿಸುವುದು.


ಪೂರ್ವದಲ್ಲಿ ಎಫ್ರಾಯೀಮು ನುಡಿದ ಮಾತಿಗೆ ಎಲ್ಲರೂ ನಡುಗಿದರು, ಅದು ಇಸ್ರಾಯೇಲಿನಲ್ಲಿ ಉನ್ನತಸ್ಥಿತಿಗೆ ಬಂದಿತ್ತು; ಆದರೆ ಬಾಳ್ ದೇವತೆಯ ವಿಷಯದಲ್ಲಿ ದೋಷಿಯಾದಾಗ ನಾಶವಾಯಿತು.


ಅದಕ್ಕೆ ಯೆಹೂದ್ಯರು ಇಸ್ರಾಯೇಲರಿಗೆ, “ಅರಸನು ನಮಗೆ ಸಮೀಪದ ಬಂಧು. ನೀವು ಅದಕ್ಕಾಗಿ ಕೋಪಗೊಳ್ಳುವುದೇಕೆ? ನಾವೇನು ಅರಸನ ಹಣದಿಂದ ಊಟಮಾಡಿದೆವೋ? ಅವನು ನಮಗೆ ಏನಾದರೂ ಕೊಟ್ಟನೋ?” ಎಂದು ಉತ್ತರ ಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು