Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 8:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಸುಖೋತಿನ ಒಬ್ಬ ಯೌವನಸ್ಥನನ್ನು ಹಿಡಿದು, ಆ ಊರಿನ ಮುಖಂಡರೂ, ಹಿರಿಯರೂ ಯಾರಾರೆಂದು ವಿಚಾರಿಸಲು ಅವನು ಎಪ್ಪತ್ತೇಳು ಮಂದಿಯ ಹೆಸರುಗಳನ್ನು ಬರೆದುಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಸುಖೋತಿನ ಒಬ್ಬ ಯೌವನಸ್ಥನನ್ನು ಹಿಡಿದು ಆ ಊರಿನ ಮುಖಂಡರೂ ಹಿರಿಯರೂ ಯಾರಾರೆಂದು ವಿಚಾರಿಸಿ ಎಪ್ಪತ್ತೇಳು ಮಂದಿಯ ಹೆಸರುಗಳನ್ನು ಬರೆಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಸುಖೋತಿನ ಒಬ್ಬ ಯೌವನಸ್ಥನನ್ನು ಹಿಡಿದು ಆ ಊರಿನ ಮುಖಂಡರೂ ಹಿರಿಯರೂ ಯಾರಾರೆಂದು ವಿಚಾರಿಸಿ ಎಪ್ಪತ್ತೇಳು ಮಂದಿಯ ಹೆಸರುಗಳನ್ನು ಬರಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಗಿದ್ಯೋನನು ಸುಖೋತ್ ನಗರದ ಒಬ್ಬ ತರುಣನನ್ನು ಹಿಡಿದುಕೊಂಡನು. ಗಿದ್ಯೋನನು ಆ ತರುಣನಿಗೆ ಕೆಲವು ಪ್ರಶ್ನೆಗಳನ್ನು ಕೇಳಿದನು. ಆ ತರುಣನು ಗಿದ್ಯೋನನಿಗಾಗಿ ಕೆಲವು ಹೆಸರುಗಳನ್ನು ಬರೆದನು. ಆ ತರುಣನು ಸುಖೋತ್ ನಗರದ ನಾಯಕರ ಮತ್ತು ಹಿರಿಯರ ಹೆಸರುಗಳನ್ನು ಬರೆದನು. ಅವನು ಎಪ್ಪತ್ತೇಳು ಜನರ ಹೆಸರುಗಳನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಸುಕ್ಕೋತಿನ ಮನುಷ್ಯರಲ್ಲಿ ಒಬ್ಬ ಯೌವನಸ್ಥನನ್ನು ಹಿಡಿದು ಅವನನ್ನು ಕೇಳಿದಾಗ ಅವನು, ಸುಕ್ಕೋತಿನ ಪ್ರಧಾನರೂ, ಹಿರಿಯರೂ ಆದ ಎಪ್ಪತ್ತೇಳು ಜನರ ಹೆಸರನ್ನು ಅವನು ಬರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 8:14
5 ತಿಳಿವುಗಳ ಹೋಲಿಕೆ  

ಯಾಕೋಬನು ಪ್ರಯಾಣಮಾಡಿ ಸುಕ್ಕೋತಿಗೆ ಬಂದನು. ಅಲ್ಲಿ ತನಗೋಸ್ಕರ ಮನೆಯನ್ನೂ ದನಗಳಿಗೆ ಆಶ್ರಯವನ್ನೂ ಮಾಡಿಸಿದನು. ಆದುದರಿಂದ ಆ ಸ್ಥಳಕ್ಕೆ “ಸುಕ್ಕೋತ್” ಎಂದು ಹೆಸರಾಯಿತು.


ಯೋವಾಷನ ಮಗನಾದ ಗಿದ್ಯೋನನು ಯುದ್ಧದಿಂದ ಹೆರೆಸಿನ ಗಟ್ಟದ ಮಾರ್ಗವಾಗಿ ಹಿಂದಿರುಗಿ ಬಂದು,


ಅನಂತರ ಅವನು ಸುಖೋತಿನವರ ಬಳಿಗೆ ಹೋಗಿ ಅವರಿಗೆ, “ನಾವು ದಣಿದಿರುವ ನಿನ್ನ ಸೈನಿಕರಿಗೋಸ್ಕರ ರೊಟ್ಟಿಗಳನ್ನು ಕೊಡುವುದಕ್ಕೆ ಜೆಬಹ, ಚಲ್ಮುನ್ನರನ್ನು ಕೈಕಟ್ಟಿ ಸ್ವಾಧೀನಮಾಡಿಕೊಂಡಿದ್ದೀಯೋ? ಎಂದು ನನ್ನನ್ನು ನಿಂದಿಸಿದಿರಲ್ಲಾ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು