ನ್ಯಾಯಸ್ಥಾಪಕರು 8:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಅವನು ಜೆಬಹ, ಚಲ್ಮುನ್ನರನ್ನು, “ನೀವು ತಾಬೋರದಲ್ಲಿ ಕೊಂದುಹಾಕಿದ ಮನುಷ್ಯರು ಹೇಗಿದ್ದರು?” ಎಂದು ಕೇಳಲಾಗಿ ಅವರು ಅವನಿಗೆ, “ನಿನ್ನ ಹಾಗೆಯೇ ಇದ್ದರು; ಎಲ್ಲರೂ ರೂಪದಲ್ಲಿ ರಾಜಪುತ್ರರಂತಿದ್ದರು” ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಬಳಿಕ ಗಿದ್ಯೋನನು ಜೆಬಹ ಮತ್ತು ಚಲ್ಮುನ್ನ ಎಂಬವರನ್ನು, “ನೀವು ತಾಬೋರದಲ್ಲಿ ಕೊಂದು ಹಾಕಿದ ವ್ಯಕ್ತಿಗಳು ಹೇಗಿದ್ದರು?” ಎಂದು ಕೇಳಿದಾಗ ಅವರು ಅವನಿಗೆ, “ನಿನ್ನ ಹಾಗೆಯೇ ಇದ್ದರು; ಎಲ್ಲರೂ ರೂಪದಲ್ಲಿ ರಾಜಪುತ್ರರಂತಿದ್ದರು,” ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಮತ್ತು ಅವನು ಜೆಬಹ, ಚಲ್ಮುನ್ನ ಎಂಬವರನ್ನು - ನೀವು ತಾಬೋರದಲ್ಲಿ ಕೊಂದು ಹಾಕಿದ ಮನುಷ್ಯರು ಹೇಗಿದ್ದರು ಎಂದು ಕೇಳಲಾಗಿ ಅವರು ಅವನಿಗೆ - ನಿನ್ನ ಹಾಗೆಯೇ ಇದ್ದರು; ಎಲ್ಲರೂ ರೂಪದಲ್ಲಿ ರಾಜಪುತ್ರರಂತಿದ್ದರು ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಆಮೇಲೆ ಗಿದ್ಯೋನನು ಜೆಬಹ ಮತ್ತು ಚಲ್ಮುನ್ನರನ್ನು, “ನೀವು ತಾಬೋರ್ ಪರ್ವತದಲ್ಲಿ ಕೆಲವು ಜನರನ್ನು ಕೊಂದಿರುವಿರಿ. ಅವರು ಹೇಗಿದ್ದರು?” ಎಂದು ಕೇಳಿದನು. ಅವರು “ನಿನ್ನ ಹಾಗೆಯೇ ಇದ್ದರು. ಅವರಲ್ಲಿ ಪ್ರತಿಯೊಬ್ಬನೂ ಒಬ್ಬ ರಾಜಕುಮಾರನಂತೆ ಕಂಡನು” ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಅವನು ಜೆಬಹನಿಗೂ, ಚಲ್ಮುನ್ನನಿಗೂ, “ನೀವು ತಾಬೋರಿನಲ್ಲಿ ಕೊಂದುಹಾಕಿದ ಆ ಮನುಷ್ಯರು ಯಾವ ತರಹದವರಾಗಿದ್ದರು?” ಎಂದನು. ಅದಕ್ಕವರು, “ನಿನ್ನ ಹಾಗೆಯೇ ಅವರು ಒಬ್ಬೊಬ್ಬರು ರೂಪದಲ್ಲಿ ಅರಸನ ಮಕ್ಕಳಂತಿದ್ದರು,” ಎಂದರು. ಅಧ್ಯಾಯವನ್ನು ನೋಡಿ |