Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 8:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆಗ ಜೆಬಹನೂ ಮತ್ತು ಚಲ್ಮುನ್ನನೂ ಗಿದ್ಯೋನನಿಗೆ, “ನೀನೇ ಎದ್ದು ಬಂದು ನಮ್ಮನ್ನು ಕೊಂದುಹಾಕು; ಪ್ರಾಯಕ್ಕೆ ತಕ್ಕಂತೆ ಪುರುಷನಿಗೆ ಬಲವಿರುತ್ತದಲ್ಲಾ” ಅನ್ನಲು ಅವನೆದ್ದು ಜೆಬಹ, ಚಲ್ಮುನ್ನರನ್ನು ಕೊಂದುಹಾಕಿ, ಅವರ ಒಂಟೆಗಳ ಕೊರಳಿನಲ್ಲಿದ್ದ ಅರ್ಧಚಂದ್ರಾಕಾರದ ಆಭರಣಗಳನ್ನು ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಆಗ ಜೆಬಹನು ಹಾಗು ಚಲ್ಮುನ್ನನು ಗಿದ್ಯೋನನಿಗೆ, “ನೀನೇ ಎದ್ದು ಬಂದು ನಮ್ಮ ಮೇಲೆ ಬೀಳು; ಪ್ರಾಯಕ್ಕೆ ತಕ್ಕಂತೆ ಪುರುಷನಿಗೆ ಬಲವಿರುತ್ತದೆ ಅಲ್ಲವೆ?” ಎನ್ನಲು ಅವನೆದ್ದು ಜೆಬಹ ಮತ್ತು ಚಲ್ಮುನ್ನ ಎಂಬವರನ್ನು ಕೊಂದುಹಾಕಿ ಅವರ ಒಂಟೆಗಳ ಕೊರಳಲ್ಲಿದ್ದ ಅರ್ಧಚಂದ್ರಾಕಾರದ ಆಭರಣಗಳನ್ನು ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆಗ ಜೆಬಹನೂ ಚಲ್ಮುನ್ನನೂ ಗಿದ್ಯೋನನಿಗೆ - ನೀನೇ ಎದ್ದು ಬಂದು ನಮ್ಮ ಮೇಲೆ ಬೀಳು; ಪ್ರಾಯಕ್ಕೆ ತಕ್ಕಂತೆ ಪುರುಷನಿಗೆ ಬಲವಿರುತ್ತದಲ್ಲಾ ಅನ್ನಲು ಅವನೆದ್ದು ಜೆಬಹ, ಚಲ್ಮುನ್ನ ಎಂಬವರನ್ನು ಕೊಂದುಹಾಕಿ, ಅವರ ಒಂಟೆಗಳ ಕೊರಳಲ್ಲಿದ್ದ ಅರ್ಧಚಂದ್ರಾಕಾರದ ಆಭರಣಗಳನ್ನು ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಆಗ ಜೆಬಹ ಮತ್ತು ಚಲ್ಮುನ್ನರು ಗಿದ್ಯೋನನಿಗೆ, “ನೀನೇ ನಮ್ಮನ್ನು ಕೊಲ್ಲು. ನೀನು ಈ ಕೆಲಸವನ್ನು ಮಾಡುವುದಕ್ಕೆ ಯೋಗ್ಯವಯಸ್ಸಿನವನೂ ಗಟ್ಟಿಗನೂ ಆಗಿರುವೆ” ಎಂದರು. ಗಿದ್ಯೋನನು ಎದ್ದು ಜೆಬಹ ಮತ್ತು ಚಲ್ಮುನ್ನರನ್ನು ಕೊಂದುಹಾಕಿದನು. ಆಮೇಲೆ ಗಿದ್ಯೋನನು ಅವರ ಒಂಟೆಗಳ ಕೊರಳಲ್ಲಿದ್ದ ಅರ್ಧಚಂದ್ರಾಕಾರದ ಆಭರಣಗಳನ್ನು ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆಗ ಜೆಬಹನೂ, ಚಲ್ಮುನ್ನನೂ, “ನೀನು ಎದ್ದು ನಮ್ಮ ಮೇಲೆ ಬೀಳು. ಏಕೆಂದರೆ ಮನುಷ್ಯನು ಹೇಗೋ ಹಾಗೆಯೇ ಅವನ ಬಲವು ಇರುವುದು,” ಎಂದರು. ಗಿದ್ಯೋನನು ಎದ್ದು ಜೆಬಹನನ್ನೂ, ಚೆಲ್ಮುನ್ನನನ್ನೂ ಕೊಂದುಹಾಕಿ, ಅವರ ಒಂಟೆಗಳ ಕುತ್ತಿಗೆಗಳಲ್ಲಿ ಇದ್ದ ಆಭರಣಗಳನ್ನು ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 8:21
13 ತಿಳಿವುಗಳ ಹೋಲಿಕೆ  

ಓರೇಬ್ ಮತ್ತು ಜೇಬ್ ಎಂಬವರ ಗತಿಯು, ಇವರ ಶ್ರೀಮಂತರಿಗೂ ಸಂಭವಿಸಲಿ; ಜೇಬಹ ಮತ್ತು ಚಲ್ಮುನ್ನ ಎಂಬವರ ಹಾಗೆ ಇವರ ಪ್ರಭುಗಳಿಗೂ ಆಗಲಿ.


ಆ ದಿನದಲ್ಲಿ ಕರ್ತನು ಅವರ ಅಂದುಗೆ, ತುರುಬುಬಲೆ, ಅರ್ಧಚಂದ್ರ,


ಗಿದ್ಯೋನನಿಗೆ ಮೊದಲೇ ದೊರಕಿದ್ದ ಅರ್ಧಚಂದ್ರಾಕಾರದ ಆಭರಣ, ಕುಂಡಲ, ಮಿದ್ಯಾನ್ ರಾಜರು ಹೊದ್ದುಕೊಂಡಿದ್ದ ರಕ್ತಾಂಬರ, ಅವರ ಒಂಟೆಗಳ ಕಂಠಮಾಲೆ, ಇವುಗಳ ಹೊರತಾಗಿ ಅವನು ಇಸ್ರಾಯೇಲ್ಯರಿಂದ ಕೇಳಿ ತೆಗೆದುಕೊಂಡ ಓಲೆಗಳ ಬಂಗಾರವೇ ಸಾವಿರದ ಏಳುನೂರು ತೊಲೆ ತೂಕವಾಗಿತ್ತು.


ಆ ಕಾಲದಲ್ಲಿ ಮನುಷ್ಯರು ಮರಣವನ್ನು ಬಯಸುವರು, ಆದರೆ ಅದು ಪ್ರಾಪ್ತವಾಗುವುದಿಲ್ಲ. ಸಾಯಬೇಕೆಂದು ಕೋರುವರು, ಆದರೆ ಮೃತ್ಯುವು ಅವರನ್ನು ಬಿಟ್ಟು ಓಡಿಹೋಗುವುದು.


ದೇವರೇ, ಸುಮ್ಮನಿರಬೇಡ! ನಿಶ್ಚಿಂತನಾಗಿ ಮೌನದಿಂದಿರಬೇಡ ಸ್ವಾಮೀ.


ಸೌಲನು ಮರಣ ಹೊಂದಿರುವುದನ್ನು ಅವನ ಆಯುಧವಾಹಕನು ಕಂಡು ತಾನೂ ತನ್ನ ಕತ್ತಿಯ ಮೇಲೆ ಬಿದ್ದು ಅಲ್ಲಿಯೇ ಸತ್ತನು.


ಸೌಲನಿದ್ದ ಕಡೆಯಲ್ಲಿ ಯುದ್ಧವು ಬಹು ಘೋರವಾಗಿತ್ತು. ಬಿಲ್ಲುಗಾರನು ಅವನಿಗೆ ಗುರಿಯಿಟ್ಟನು.


ಅವನು ಕೂಡಲೆ ತನ್ನ ಆಯುಧ ಹೊರುವವನನ್ನು ಕರೆದು ಅವನಿಗೆ, “ಕತ್ತಿಯನ್ನು ಹಿರಿದು ನನ್ನನ್ನು ಕೊಲ್ಲು; ಇಲ್ಲವಾದರೆ ನಾನು ಹೆಂಗಸಿನ ಕೈಯಿಂದ ಸತ್ತನೆಂದು ಜನರು ಹೇಳಾರು” ಎನ್ನಲು ಆ ಪ್ರಾಯಸ್ಥನು ಅವನನ್ನು ತಿವಿದು ಕೊಂದುಹಾಕಿದನು.


ತನ್ನ ಹಿರೀ ಮಗನಾದ ಎತೆರನಿಗೆ, “ನೀನೆದ್ದು ಇವರನ್ನು ಕೊಂದುಹಾಕು” ಅಂದನು. ಆದರೆ ಅವನು ಇನ್ನೂ ಹುಡುಗನಾಗಿದ್ದರಿಂದ ಭಯಪಟ್ಟು ಕತ್ತಿಯನ್ನು ಹಿರಿಯಲೇ ಇಲ್ಲ.


ತರುವಾಯ ಇಸ್ರಾಯೇಲ್ಯರು ಗಿದ್ಯೋನನಿಗೆ, “ನೀನು ನಮ್ಮನ್ನು ಮಿದ್ಯಾನ್ಯರ ಕೈಯಿಂದ ಬಿಡಿಸಿದ್ದೀಯಲ್ಲಾ; ನೀನೂ, ನಿನ್ನ ಮಗನೂ, ಮೊಮ್ಮಗನೂ ವಂಶಪಾರಂಪರ್ಯವಾಗಿ ನಮ್ಮ ಮೇಲೆ ಅರಸರಾಗಿರಬೇಕು” ಎಂದರು.


ಅನಂತರ ಆ ಅರಸರನ್ನು ಕೊಲ್ಲಿಸಿ ಐದು ಮರಗಳಿಗೆ ನೇತುಹಾಕಿಸಿದನು. ಅವರ ಶವಗಳು ಸಾಯಂಕಾಲದವರೆಗೂ ಅಲ್ಲೇ ತೂಗಾಡುತ್ತಿದ್ದವು.


ಅವರು, “ನಾವು ನಿನ್ನನ್ನು ಕಟ್ಟಿ ಫಿಲಿಷ್ಟಿಯರ ಕೈಗೆ ಒಪ್ಪಿಸಬೇಕೆಂದು ಬಂದಿದ್ದೇವೆ” ಅನ್ನಲು ಸಂಸೋನನು, “ಹಾಗಾದರೆ ನೀವು ನನ್ನನ್ನು ಕೊಲ್ಲುವುದಿಲ್ಲವೆಂದು ಆಣೆಮಾಡಿರಿ” ಎಂದನು.


ಅವರು “ದೇವರು ಅವರಿಗೆ ಕೊಟ್ಟ ದೇಶವನ್ನು ಸ್ವಾಧೀನಮಾಡಿಕೊಳ್ಳುತ್ತೇವೆ” ಅಂದುಕೊಳ್ಳುತ್ತಾರಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು