Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 8:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅವನು ಅವರಿಗೆ, “ನಾನಾಗಲಿ, ನನ್ನ ಮಗನಾಗಲಿ ನಿಮ್ಮನ್ನು ಆಳುವುದಿಲ್ಲ; ಯೆಹೋವನೇ ನಿಮ್ಮ ಅರಸನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅವನು ಅವರಿಗೆ, “ನಾನಾಗಲಿ, ನನ್ನ ಮಗನಾಗಲಿ ನಿಮ್ಮನ್ನು ಆಳುವುದಿಲ್ಲ; ಸರ್ವೇಶ್ವರನೇ ನಿಮ್ಮ ಅರಸ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅವನು ಅವರಿಗೆ - ನಾನಾಗಲಿ ನನ್ನ ಮಗನಾಗಲಿ ನಿಮ್ಮನ್ನು ಆಳುವದಿಲ್ಲ; ಯೆಹೋವನೇ ನಿಮ್ಮ ಅರಸನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಗಿದ್ಯೋನನು ಇಸ್ರೇಲರಿಗೆ, “ಯೆಹೋವನು ನಿಮ್ಮನ್ನು ಆಳುತ್ತಾನೆ. ನಾನು ನಿಮ್ಮನ್ನು ಆಳುವುದಿಲ್ಲ; ನನ್ನ ಮಗನೂ ನಿಮ್ಮನ್ನು ಆಳುವುದಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಗಿದ್ಯೋನನು ಅವರಿಗೆ, “ನಾನು ನಿಮ್ಮನ್ನು ಆಳುವುದಿಲ್ಲ. ನನ್ನ ಮಗನೂ ನಿಮ್ಮನ್ನು ಆಳುವುದಿಲ್ಲ. ಯೆಹೋವ ದೇವರೇ ನಿಮ್ಮನ್ನು ಆಳುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 8:23
14 ತಿಳಿವುಗಳ ಹೋಲಿಕೆ  

ಏಕೆಂದರೆ ಯೆಹೋವನು ನಮ್ಮ ನ್ಯಾಯಾಧಿಪತಿ, ಯೆಹೋವನು ನಮಗೆ ಆಜ್ಞೆಕೊಡುವಾತನು, ಯೆಹೋವನು ನಮ್ಮ ರಾಜನು, ಆತನೇ ನಮ್ಮನ್ನು ರಕ್ಷಿಸುವನು.


ಅಮ್ಮೋನಿಯರ ಅರಸನಾದ ನಾಹಾಷನು ನಿಮ್ಮ ಮೇಲೆ ಯುದ್ಧಕ್ಕೆ ಬರುತ್ತಾನೆಂದು ನಿಮಗೆ ಗೊತ್ತಾಗಲು, ನಿಮ್ಮ ದೇವರಾದ ಯೆಹೋವನು ನಿಮ್ಮ ಅರಸನಾಗಿದ್ದರೂ ನೀವು, ‘ನಮಗೊಬ್ಬ ಅರಸನನ್ನು ನೇಮಿಸು’ ಎಂದು ನನ್ನನ್ನು ಬೇಡಿಕೊಂಡಿರಿ.


ನೀವಾದರೋ ನಿಮ್ಮನ್ನು ಕಷ್ಟಸಂಕಟಗಳಿಂದ ಬಿಡಿಸಿದ ನಿಮ್ಮ ದೇವರಾದ ನನ್ನನ್ನು ಈಗ ತಿರಸ್ಕರಿಸಿ, ನಮಗೊಬ್ಬ ಅರಸನನ್ನು ನೇಮಿಸೆಂದು ಹೇಳುತ್ತೀರಿ ಅನ್ನುತ್ತಾನೆ. ಆದುದರಿಂದ ನೀವು ಕುಲ ಕುಲವಾಗಿಯೂ ಗೋತ್ರಗೋತ್ರವಾಗಿಯೂ ಯೆಹೋವನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಿರಿ” ಎಂದು ಅಪ್ಪಣೆ ಮಾಡಿದನು.


ನಿಮ್ಮ ನಂಬಿಕೆಯ ವಿಷಯದಲ್ಲಿಯೂ ನಾವು ನಿಮ್ಮ ಮೇಲೆ ದೊರೆತನಮಾಡುವವರೆಂಬುದಾಗಿ ಅಲ್ಲ. ನೀವು ನಂಬಿಕೆಯಲ್ಲಿ ದೃಢವಾಗಿರುವಂತೆ ನಿಮ್ಮ ಸಂತೋಷಕ್ಕೆ ನಾವು ಸಹಾಭಾಗಿಗಳಾಗಿದೇವಷ್ಟೇ.


ನಿಮ್ಮ ವಶಕ್ಕೆ ಒಪ್ಪಿಸಿಕೊಟ್ಟಿರುವವರ ಮೇಲೆ ದೊರೆತನಮಾಡುವವರಂತೆ ನಡೆಯದೆ ಮಂದೆಗೆ ಮಾದರಿಯಾಗಿಯೇ ನಡೆದುಕೊಳ್ಳಿರಿ.


ಗಿಲ್ಯಾದಿನ ಜನರೂ ಅಧಿಪತಿಗಳೂ, “ನಮ್ಮಲ್ಲಿ ಅಮ್ಮೋನಿಯರೊಡನೆ ಯುದ್ಧಕ್ಕೆ ಕೈಹಾಕುವವನು ಯಾರು? ಅಂಥವನನ್ನು ಗಿಲ್ಯಾದಿನವರೆಲ್ಲರ ಮೇಲೆ ನಾಯಕನನ್ನಾಗಿ ಮಾಡುವೆವು” ಎಂದು ತಮ್ಮ ತಮ್ಮೊಳಗೆ ಮಾತನಾಡಿಕೊಂಡರು.


ವೈರಿಗಳ ಹಿಂಸೆಯನ್ನು ತಾಳಲಾರದ ಇಸ್ರಾಯೇಲ್ಯರ ಗೋಳಾಟವನ್ನು ಯೆಹೋವನು ಕೇಳಿ, ಕನಿಕರಪಟ್ಟು, ನ್ಯಾಯಸ್ಥಾಪಕರನ್ನು ಎಬ್ಬಿಸಿ ಜೀವಮಾನವೆಲ್ಲಾ ಅವರ ಸಂಗಡ ಇದ್ದನು. ಅವರ ಮೂಲಕವಾಗಿ ಇಸ್ರಾಯೇಲರನ್ನು ಶತ್ರುಗಳಿಂದ ಬಿಡಿಸಿದನು.


ನಿನ್ನ ದೊರೆತನಕ್ಕೆ ಎಂದಿಗೂ ಒಳಪಡದೆ, ನಿನ್ನ ನಾಮವನ್ನು ಧರಿಸದೆ ಇರುವ ಜನರ ಹಾಗಿದ್ದೇವೆ.


ತರುವಾಯ ಇಸ್ರಾಯೇಲ್ಯರು ಗಿದ್ಯೋನನಿಗೆ, “ನೀನು ನಮ್ಮನ್ನು ಮಿದ್ಯಾನ್ಯರ ಕೈಯಿಂದ ಬಿಡಿಸಿದ್ದೀಯಲ್ಲಾ; ನೀನೂ, ನಿನ್ನ ಮಗನೂ, ಮೊಮ್ಮಗನೂ ವಂಶಪಾರಂಪರ್ಯವಾಗಿ ನಮ್ಮ ಮೇಲೆ ಅರಸರಾಗಿರಬೇಕು” ಎಂದರು.


ಯೆಹೋವನು ಯುಗಯುಗಾಂತರಗಳಲ್ಲಿಯೂ ಅರಸನಾಗಿರುವನು; ಆತನ ದೇಶದಲ್ಲಿ ಅನ್ಯಜನಗಳು ನಿಶ್ಶೇಷರಾದರು.


ಇಸ್ರಾಯೇಲರು ತಮ್ಮ ಸೃಷ್ಟಿಕರ್ತನಲ್ಲಿ ಹೆಮ್ಮೆಪಡಲಿ; ಚೀಯೋನಿನವರು ತಮ್ಮ ರಾಜನಲ್ಲಿ ಹರ್ಷಿಸಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು