Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 8:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆದರೆ ನಿಮಗೆ ಒಂದು ಬಿನ್ನಹ ಮಾಡುತ್ತೇನೆ; ಪ್ರತಿಯೊಬ್ಬನು ತಾನು ಕೊಳ್ಳೆಹೊಡೆದ ಬಂಗಾರದ ಓಲೆಗಳನ್ನು ನನಗೆ ಕೊಡಲಿ” ಅಂದನು. ಮಿದ್ಯಾನ್ಯರು ಇಷ್ಮಾಯೇಲ್ಯರಾಗಿದ್ದರಿಂದ ಅವರ ಬಳಿಯಲ್ಲಿ ಬಂಗಾರದ ಓಲೆಗಳು ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಆದರೆ ನಿಮ್ಮಲ್ಲಿ ನನ್ನದೊಂದು ಬಿನ್ನಹಃ ಪ್ರತಿಯೊಬ್ಬನು ತಾನು ಕೊಳ್ಳೆಹೊಡೆದ ಮುರುವುಗಳನ್ನು ನನಗೆ ಕೊಡಲಿ,” ಎಂದನು. ಮಿದ್ಯಾನ್ಯರು ಇಷ್ಮಾಯೇಲ್ಯರಾಗಿದ್ದುದರಿಂದ ಬಂಗಾರದ ಮುರುವುಗಳನ್ನು ಹಾಕಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಆದರೆ ನಿಮಗೆ ಒಂದು ಬಿನ್ನಹ ಮಾಡುತ್ತೇನೆ; ಪ್ರತಿಯೊಬ್ಬನು ತಾನು ಕೊಳ್ಳೆ ಹೊಡೆದ ಮುರುವುಗಳನ್ನು ನನಗೆ ಕೊಡಲಿ ಅಂದನು. ವಿುದ್ಯಾನ್ಯರು ಇಷ್ಮಾಯೇಲ್ಯರಾಗಿದ್ದದರಿಂದ ಬಂಗಾರದ ಮುರುವುಗಳನ್ನು ಹಾಕಿಕೊಳ್ಳುತ್ತಿದ್ದರು. ಗಿದ್ಯೋನನ ಬಿನ್ನಹಕ್ಕೆ ಇಸ್ರಾಯೇಲ್ಯರು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಇಸ್ರೇಲರು ಸೋಲಿಸಿದ ಜನರಲ್ಲಿ ಕೆಲವರು ಇಷ್ಮಾಯೇಲ್ಯರಾಗಿದ್ದರು. ಇಷ್ಮಾಯೇಲ್ಯರು ಕಿವಿಗಳಲ್ಲಿ ಚಿನ್ನದ ಮುರುವುಗಳನ್ನು ಹಾಕಿಕೊಳ್ಳುತ್ತಿದ್ದರು. ಆದ್ದರಿಂದ ಗಿದ್ಯೋನನು ಇಸ್ರೇಲರಿಗೆ, “ನೀವು ನನಗಾಗಿ ಈ ಒಂದು ಕೆಲಸವನ್ನು ಮಾಡಬೇಕೆಂದು ನನ್ನ ಕೋರಿಕೆ. ನೀವು ಯುದ್ಧದಲ್ಲಿ ಕೊಳ್ಳೆಹೊಡೆದ ವಸ್ತುಗಳಿಂದ ಪ್ರತಿಯೊಬ್ಬನು ಒಂದು ಬಂಗಾರದ ಮುರುವನ್ನು ನನಗೆ ಕೊಡಬೇಕು” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಮತ್ತು ಗಿದ್ಯೋನನು ಅವರಿಗೆ, “ಒಂದು ಬಿನ್ನಹವನ್ನು ನಾನು ನಿಮಗೆ ಮಾಡುತ್ತೇನೆ. ಪ್ರತಿಯೊಬ್ಬನು ಕೊಳ್ಳೆಹೊಡೆದ ಬಂಗಾರದ ಓಲೆಗಳನ್ನು ನನಗೆ ಕೊಡಿರಿ,” ಎಂದನು. ಏಕೆಂದರೆ ಮಿದ್ಯಾನರು ಇಷ್ಮಾಯೇಲರಾಗಿದ್ದದರಿಂದ ಅವರು ಬಂಗಾರದ ಮುರುವುಗಳನ್ನು ಹಾಕಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 8:24
17 ತಿಳಿವುಗಳ ಹೋಲಿಕೆ  

ಇಷ್ಮಾಯೇಲನ ಮಕ್ಕಳಿಗೂ ಇವರಿಂದ ಹುಟ್ಟಿದ ಕುಲಗಳಿಗೂ ಇರುವ ಹೆಸರುಗಳು ಯಾವುದೆಂದರೆ: ಮೊದಲು ಹುಟ್ಟಿದವನು ನೆಬಾಯೋತ್, ಆ ಮೇಲೆ ಹುಟ್ಟಿದವರು ಕೇದಾರ್, ಅದ್ಬಯೇಲ್, ಮಿಬ್ಸಾಮ್,


ಅಷ್ಟರಲ್ಲಿ ಮಿದ್ಯಾನ್ಯರಾದ ವರ್ತಕರು ಹಾದುಹೋಗುತ್ತಿದ್ದರು. ಅವರು ಯೋಸೇಫನನ್ನು ಗುಂಡಿಯೊಳಗಿಂದ ಮೇಲೆ ಎತ್ತಿ ಆ ಇಷ್ಮಾಯೇಲ್ಯರಿಗೆ ಇಪ್ಪತ್ತು ಬೆಳ್ಳಿಯ ನಾಣ್ಯಗಳಿಗೆ ಅವನನ್ನು ಮಾರಿದರು. ಅವರು ಅವನನ್ನು ಐಗುಪ್ತ ದೇಶಕ್ಕೆ ಕರೆದುಕೊಂಡು ಹೋದರು.


ಆ ಮೇಲೆ ಅವರು ಊಟಕ್ಕೆ ಕುಳಿತುಕೊಂಡಾಗ ಅವರು ತಮ್ಮ ಕಣ್ಣುಗಳನ್ನೆತ್ತಿ ನೋಡಲಾಗಿ, ಇಷ್ಮಾಯೇಲರ ಗುಂಪು ಒಂಟೆಗಳ ಮೇಲೆ ಪರಿಮಳ ದ್ರವ್ಯ, ಸುಗಂಧ ತೈಲ, ರಕ್ತಬೋಳ, ಇವುಗಳನ್ನು ಹೇರಿಕೊಂಡು ಗಿಲ್ಯಾದಿನಿಂದ ಐಗುಪ್ತದೇಶಕ್ಕೆ ಪ್ರಯಾಣಮಾಡುತ್ತಾ ಬರುವುದನ್ನು ಕಂಡರು.


ಇಸ್ರಾಯೇಲರ ಅರಸನು ಬಂದ ದೂತರಿಗೆ, “ಯುದ್ಧಕ್ಕಾಗಿ ನಡುಕಟ್ಟನ್ನು ಬಿಗಿದುಕೊಳ್ಳುವವನು, ಅದನ್ನು ಬಿಚ್ಚಿಡುವ ಜಯಶಾಲಿಯಂತೆ ಹೆಚ್ಚಳಪಡಬಾರದು ಎಂದು ಅವನಿಗೆ ಹೇಳಿರಿ” ಎಂದನು.


ಉಣ್ಣೆಕತ್ತರಿಸುವವರಿಗೋಸ್ಕರ ನಾನು ಸಿದ್ಧ ಮಾಡಿಸಿರುವ ಮಾಂಸವನ್ನು ಆಹಾರಪಾನಗಳನ್ನೂ, ಎಲ್ಲಿಂದಲೋ ಬಂದವರಿಗೆ ಕೊಟ್ಟುಬಿಡಬೇಕೋ?” ಎಂದು ಉತ್ತರ ಕೊಟ್ಟನು.


ಅವರೆಲ್ಲರೂ ತಮ್ಮ ಕಿವಿಗಳಲ್ಲಿದ್ದ ಚಿನ್ನದ ಓಲೆಗಳನ್ನು ಬಿಚ್ಚಿ ಆರೋನನ ಬಳಿಗೆ ತಂದು ಕೊಟ್ಟರು.


ಇಸ್ರಾಯೇಲರು ಮೋಶೆಯ ಮಾತಿನ ಮೇರೆಗೆ ಐಗುಪ್ತ್ಯರಿಂದ ಬೆಳ್ಳಿ ಬಂಗಾರದ ಒಡವೆಗಳನ್ನು, ಬಟ್ಟೆಗಳನ್ನು ಕೇಳಿ ಪಡೆದುಕೊಂಡರು.


ಆ ಮೇಲೆ ತಾನು ತಂದಿದ್ದ ಬೆಳ್ಳಿ ಬಂಗಾರದ ಒಡವೆಗಳನ್ನೂ, ವಸ್ತ್ರಗಳನ್ನೂ ತೆಗೆದು ರೆಬೆಕ್ಕಳಿಗೆ ಕೊಟ್ಟನು. ಆಕೆಯ ಅಣ್ಣನಿಗೂ ತಾಯಿಗೂ ಸಹ ಬೆಲೆಯುಳ್ಳ ವಸ್ತುಗಳನ್ನು ಕೊಟ್ಟನು.


ಒಂಟೆಗಳು ಕುಡಿದ ನಂತರ ಅವನು ಆಕೆಗೆ ಅರ್ಧ ತೊಲಾ ತೂಕವುಳ್ಳ ಒಂದು ಚಿನ್ನದ ಮೂಗುತಿಯನ್ನು, ಆಕೆಯ ಕೈಗಳಿಗೆ ಹತ್ತು ತೊಲಾ ತೂಕವುಳ್ಳ ಎರಡು ಚಿನ್ನದ ಬಳೆಗಳನ್ನೂ ಕೊಟ್ಟು, “ನೀನು ಯಾರ ಮಗಳು? ದಯವಿಟ್ಟು ನನಗೆ ಹೇಳು.


ಆಗ ಅವರು ತಮ್ಮಲ್ಲಿದ್ದ ಎಲ್ಲಾ ಅನ್ಯ ದೇವರುಗಳನ್ನು, ತಮ್ಮ ಕಿವಿಯಲ್ಲಿದ್ದ ಓಲೆಗಳನ್ನು ಯಾಕೋಬನಿಗೆ ಕೊಟ್ಟರು. ಅವನು ಅವುಗಳನ್ನು ಶೆಕೆಮ್ ಪಟ್ಟಣದ ಹತ್ತಿರವಿರುವ ಏಲಾ ಮರದ ಕೆಳಗೆ ಹೂಣಿಟ್ಟನು.


ಗಿದ್ಯೋನನ ಬಿನ್ನಹಕ್ಕೆ ಇಸ್ರಾಯೇಲ್ಯರು, “ನಾವು ಸಂತೋಷದಿಂದ ಕೊಡುವೆವು” ಎಂದು ಹೇಳಿ, ಅಲ್ಲಿ ಒಂದು ಬಟ್ಟೆಯನ್ನು ಹಾಸಿ, ಅದರ ಮೇಲೆ ತಾವು ಕೊಳ್ಳೆಯಾಗಿ ತಂದ ಓಲೆಗಳನ್ನು ಇಟ್ಟುಬಿಟ್ಟರು.


ಅಬ್ರಹಾಮನಿಗೆ ಸಾರಳ ಐಗುಪ್ತ ದಾಸಿಯಾದ ಹಾಗರಳಲ್ಲಿ ಹುಟ್ಟಿದ ಇಷ್ಮಾಯೇಲನ ವಂಶದ ಚರಿತ್ರೆ.


ಅವನು ಆ ಚಿನ್ನವನ್ನು ತನ್ನ ವಶಕ್ಕೆ ತೆಗೆದುಕೊಂಡು ಹೋರಿಕರುವಿನ ಆಕಾರವನ್ನು ಉಳಿಯಿಂದ ರೂಪಿಸಿ ಎರಕ ಹೊಯ್ಯಿಸಿದನು. ಆಗ ಅವರು “ಇಸ್ರಾಯೇಲರೇ ನೋಡಿರಿ, ಇದೇ ನಿಮ್ಮನ್ನು ಐಗುಪ್ತದೇಶದಿಂದ ಕರೆದುಕೊಂಡು ಬಂದ ದೇವರು” ಎಂದು ಹೇಳಿದರು.


ನಾನು ಅವರಿಗೆ ಅಜ್ಞಾಪಿಸಿದ ಮಾರ್ಗವನ್ನು ಅವರು ಬೇಗನೇ ಬಿಟ್ಟು ಹೋಗಿ ತಮಗೆ ಎರಕ ಹೊಯ್ದ ಹೋರಿಕರುವನ್ನು ಮಾಡಿಸಿಕೊಂಡು ಅದಕ್ಕೆ ಅಡ್ಡಬಿದ್ದು ಯಜ್ಞಗಳನ್ನು ಅರ್ಪಿಸಿ, ‘ಇಸ್ರಾಯೇಲ್ಯರೇ ನೋಡಿರಿ ಇದೇ ನಿಮ್ಮನ್ನು ಐಗುಪ್ತದೇಶದಿಂದ ಕರೆದುಕೊಂಡು ಬಂದ ದೇವರು ಎಂದು ಹೇಳಿಕೊಳ್ಳುತ್ತಿದ್ದಾರೆ’” ಎಂದು ಹೇಳಿದನು.


ಅವರ ಆಭರಣಗಳ ಚಂದವು ಅವರ ಗರ್ವಕ್ಕೆ ಆಸ್ಪದವಾಯಿತು; ಇದಲ್ಲದೆ ಹೇಯವೂ, ಅಸಹ್ಯವೂ ಆದ ತಮ್ಮ ದೇವತೆಗಳ ಪ್ರತಿಮೆಗಳನ್ನು ಬೆಳ್ಳಿಬಂಗಾರದಿಂದ ರೂಪಿಸುತ್ತಿದ್ದರು; ಆದಕಾರಣ ಅದನ್ನು ಅವರಿಗೆ ಅಶುದ್ಧ ಪದಾರ್ಥವನ್ನಾಗಿ ಮಾಡಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು