Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 8:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಮಿದ್ಯಾನ್ಯರು ಇಸ್ರಾಯೇಲ್ಯರ ಮುಂದೆ ಬಹಳವಾಗಿ ತಗ್ಗಿಸಲ್ಪಟ್ಟರು; ಅವರು ಪುನಃ ತಲೆಯೆತ್ತಲಿಲ್ಲ. ಗಿದ್ಯೋನನ ಜೀವಮಾನದಲ್ಲಿ ನಲ್ವತ್ತು ವರ್ಷಗಳ ಕಾಲ ದೇಶದಲ್ಲಿ ಸಮಾಧಾನವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಮಿದ್ಯಾನ್ಯರು ಇಸ್ರಯೇಲರ ಮುಂದೆ ಬಹಳವಾಗಿ ತಗ್ಗಿಹೋದರು. ಅವರು ಮರಳಿ ತಲೆಯೆತ್ತಲಾಗಲಿಲ್ಲ. ಗಿದ್ಯೋನನ ಜೀವಮಾನದಲ್ಲಿ ನಾಲ್ವತ್ತು ವರ್ಷಗಳ ಕಾಲಪರ್ಯಂತ ದೇಶದಲ್ಲಿ ಶಾಂತಿಸಮಾಧಾನವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ವಿುದ್ಯಾನ್ಯರು ಇಸ್ರಾಯೇಲ್ಯರ ಮುಂದೆ ಬಹಳವಾಗಿ ತಗ್ಗಿಸಲ್ಪಟ್ಟರು; ಅವರು ತಿರಿಗಿ ತಲೆಯೆತ್ತಲಿಲ್ಲ. ಗಿದ್ಯೋನನ ಜೀವಮಾನದಲ್ಲಿ ನಾಲ್ವತ್ತು ವರುಷಗಳ ಪರ್ಯಂತ ದೇಶದಲ್ಲಿ ಸಮಾಧಾನವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಮಿದ್ಯಾನ್ಯರು ಇಸ್ರೇಲರ ಅಧೀನದಲ್ಲಿರಬೇಕಾಯಿತು. ಮಿದ್ಯಾನ್ಯರು ಯಾವ ಹೆಚ್ಚಿನ ತೊಂದರೆಗಳನ್ನು ಕೊಡಲಿಲ್ಲ. ಗಿದ್ಯೋನನು ಬದುಕಿರುವವರೆಗೆ ನಲವತ್ತು ವರ್ಷ ಆ ದೇಶದಲ್ಲಿ ಶಾಂತಿ ನೆಲೆಸಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಮಿದ್ಯಾನ್ಯರು ತಮ್ಮ ತಲೆಯನ್ನು ತಿರುಗಿ ಎತ್ತಕೂಡದ ಹಾಗೆ ಇಸ್ರಾಯೇಲರ ಮುಂದೆ ತಗ್ಗಿಹೋದರು. ದೇಶವು ಗಿದ್ಯೋನನ ದಿವಸಗಳಲ್ಲಿ ನಲವತ್ತು ವರುಷ ವಿಶ್ರಾಂತಿಯಲ್ಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 8:28
10 ತಿಳಿವುಗಳ ಹೋಲಿಕೆ  

ಯೆಹೋವನ ಎಲ್ಲಾ ಶತ್ರುಗಳೂ ಹೀಗೆಯೇ ನಾಶವಾಗಲಿ. ಆತನನ್ನು ಪ್ರೀತಿಸುವ ಭಕ್ತರು ಪ್ರಕಾಶದಿಂದ ಉದಯಿಸುವ ಸೂರ್ಯನಂತಿರಲಿ.” ಅನಂತರ ದೇಶದಲ್ಲಿ ನಲವತ್ತು ವರ್ಷ ಸಮಾಧಾನವಿತ್ತು.


ದೇಶದಲ್ಲಿ ನಲ್ವತ್ತು ವರ್ಷಗಳ ಕಾಲ ಸಮಾಧಾನವಿತ್ತು. ತರುವಾಯ ಕೆನಜನ ಮಗನಾದ ಒತ್ನೀಯೇಲನು ಮರಣಹೊಂದಿದನು.


ಸೇನಾಧೀಶ್ವರನಾದ ಯೆಹೋವನು ಓರೇಬ ಬಂಡೆಯ ಹತ್ತಿರ ಮಿದ್ಯಾನ್ಯರನ್ನು ಹತಮಾಡಿದಂತೆ, ಆತನು ಕೋಲನ್ನು ಸಮುದ್ರದ ಮೇಲೆ ಚಾಚಿ, ಐಗುಪ್ತರ ಮೇಲೆ ಎತ್ತಿದಂತೆ ಎತ್ತುವನು.


ಅವರಿಗೆ ಭಾರವಾದ ನೊಗವನ್ನೂ, ಬೆನ್ನನ್ನು ಹೊಡೆದ ಕೋಲನ್ನೂ, ಬಿಟ್ಟೀ ಹಿಡಿದವನ ದೊಣ್ಣೆಯನ್ನೂ ಮಿದ್ಯಾನಿನ ನಾಶನದ ದಿನದಲ್ಲಿ ಮುರಿದುಬಿಟ್ಟಂತೆ ಮುರಿದು ಬಿಟ್ಟಿದ್ದೀ.


ಆ ದಿನದಲ್ಲಿ ಮೋವಾಬ್ಯರು ಇಸ್ರಾಯೇಲ್ಯರಿಂದ ತಗ್ಗಿಸಲ್ಪಟ್ಟರು. ದೇಶದಲ್ಲಿ ಎಂಭತ್ತು ವರ್ಷ ಸಮಾಧಾನವಿತ್ತು.


ಈ ಬಂಗಾರದಿಂದ ಗಿದ್ಯೋನನು ಒಂದು ಏಫೋದನ್ನು ಮಾಡಿಸಿ, ಅದನ್ನು ತನ್ನ ಊರಾದ ಒಫ್ರದಲ್ಲಿಟ್ಟನು. ಆದ್ದರಿಂದ ಇಸ್ರಾಯೇಲರೆಲ್ಲರೂ ಅದನ್ನು ಪೂಜಿಸುತ್ತಿದ್ದುದರಿಂದ ದೈವದ್ರೋಹಿಗಳಾದರು; ಅದು ಗಿದ್ಯೋನನಿಗೂ ಅವನ ಮನೆಯವರಿಗೂ ಉರುಲಾಯಿತು.


ಯೋವಾಷನ ಮಗ ಯೆರುಬ್ಬಾಳನು ಹೋಗಿ ತನ್ನ ಮನೆಯಲ್ಲಿ ವಾಸವಾಗಿದ್ದನು.


ನೋಡು, ನಿನ್ನ ಶತ್ರುಗಳು ಘೋಷಿಸುತ್ತಿದ್ದಾರೆ; ನಿನ್ನ ದ್ವೇಷಿಗಳು ತಲೆಯೆತ್ತಿದ್ದಾರೆ.


ಫಿಲಿಷ್ಟಿಯರು ಬಹಳವಾಗಿ ತಗ್ಗಿಸಲ್ಪಟ್ಟದರಿಂದ ತಿರುಗಿ ಇಸ್ರಾಯೇಲ್ಯರ ಪ್ರಾಂತ್ಯದೊಳಗೆ ಬರಲೇ ಇಲ್ಲ. ಸಮುವೇಲನ ಜೀವಮಾನದಲ್ಲೆಲ್ಲಾ ಯೆಹೋವನ ಹಸ್ತವು ಫಿಲಿಷ್ಟಿಯರಿಗೆ ವಿರೋಧವಾಗಿಯೇ ಇತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು