Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 8:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಗಿದ್ಯೋನನು ಅವನ ಸಂಗಡ ಇದ್ದ ಮುನ್ನೂರು ಜನರು ಬಹಳ ದಣಿದವರಾಗಿದ್ದರೂ, ಹಿಂದಟ್ಟುತ್ತಾ ಯೊರ್ದನನ್ನು ದಾಟಿ ಸುಖೋತಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಗಿದ್ಯೋನನೂ ಅವನ ಸಂಗಡ ಇದ್ದ ಮುನ್ನೂರು ಮಂದಿಯೂ ಬಹಳ ದಣಿದಿದ್ದರು. ಆದರೂ ಹಿಂದಟ್ಟುತ್ತಾ ಜೋರ್ಡನನ್ನು ದಾಟಿ ಸುಖೋತಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಗಿದ್ಯೋನನೂ ಅವನ ಸಂಗಡ ಇದ್ದ ಮುನ್ನೂರು ಮಂದಿಯೂ ಬಹಳ ದಣಿದವರಾಗಿದ್ದರೂ ಹಿಂದಟ್ಟುತ್ತಾ ಯೊರ್ದನನ್ನು ದಾಟಿ [ಸುಖೋತಿಗೆ] ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಗಿದ್ಯೋನ ಮತ್ತು ಅವನ ಮುನ್ನೂರು ಜನರು ಜೋರ್ಡನ್ ನದಿಯನ್ನು ದಾಟಿ ಆಚೆದಡಕ್ಕೆ ಹೋದರು. ಅವರು ಬಹಳ ದಣಿದಿದ್ದರು ಮತ್ತು ಹಸಿದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಗಿದ್ಯೋನನು ಯೊರ್ದನಿಗೆ ಬಂದು ಅದನ್ನು ದಾಟಿ; ಅವನೂ, ಅವನ ಸಂಗಡ ಇದ್ದ ಮುನ್ನೂರು ಜನರೂ ದಣಿದವರಾಗಿಯೂ, ಹಿಂದಟ್ಟುವವರಾಗಿಯೂ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 8:4
10 ತಿಳಿವುಗಳ ಹೋಲಿಕೆ  

ಒಳ್ಳೆಯದನ್ನು ಮಾಡುವುದರಲ್ಲಿ ಬೇಸರಗೊಳ್ಳದೇ ಇರೋಣ. ಏಕೆಂದರೆ ಮನಗುಂದದಿದ್ದರೆ ತಕ್ಕ ಸಮಯದಲ್ಲಿ ಬೆಳೆಯನ್ನು ಕೊಯ್ಯುವೆವು.


ಆದ್ದರಿಂದ ನಾವು ಧೈರ್ಯಗೆಡುವುದಿಲ್ಲ. ನಮ್ಮ ದೇಹವು ನಾಶವಾಗುತ್ತಾ ಇದ್ದರೂ ನಮ್ಮ ಅಂತರಂಗವು ದಿನೇ ದಿನೇ ಹೊಸದಾಗುತ್ತಾ ಬರುತ್ತದೆ.


ಆಯಾಸಗೊಂಡ ಇನ್ನೂರು ಜನರು ಅಲ್ಲೇ ನಿಂತುಬಿಟ್ಟದ್ದರಿಂದ, ದಾವೀದನು ಉಳಿದ ನಾನೂರು ಜನರನ್ನೇ ಕರೆದುಕೊಂಡು ಮುಂದೆ ನಡೆದನು.


ಇದಲ್ಲದೆ ಅವರು ಮಿದ್ಯಾನ್ಯರ ನಾಯಕರಾದ ಓರೇಬ್, ಜೇಬ್ ಎಂಬುವರನ್ನು ಹಿಡಿದು ಓರೇಬನನ್ನು, ಓರೇಬನ ಬಂಡೆಯ ಮೇಲೆಯೂ, ಜೇಬನನ್ನು ಜೇಬನ ದ್ರಾಕ್ಷಿಯ ಆಲೆಯಲ್ಲಿಯೂ ಕೊಂದು ಅವರ ತಲೆಗಳನ್ನು ತೆಗೆದುಕೊಂಡು ಮಿದ್ಯಾನ್ಯರನ್ನು ಹಿಂದಟ್ಟುತ್ತಾ ಯೊರ್ದನಿನ ಆಚೆಗೆ ಹೋಗಿ ಅಲ್ಲಿದ್ದ ಗಿದ್ಯೋನನಿಗೆ ಅವುಗಳನ್ನು ಒಪ್ಪಿಸಿದರು.


ದೇವರು ನಿಮ್ಮ ಕೈಯಲ್ಲಿ ಮಿದ್ಯಾನ್ಯರ ನಾಯಕರಾದ ಓರೇಬ್ ಜೇಬರನ್ನು ಒಪ್ಪಿಸಿ ಕೊಟ್ಟಿದ್ದಾನಲ್ಲಾ! ಇದಕ್ಕೆ ಸಮಾನವಾದದ್ದನ್ನು ನಾನೇನು ಮಾಡಿದ್ದೇನೆ?” ಎಂದನು. ಈ ಮಾತುಗಳನ್ನು ಕೇಳಿದಾಗ ಅವರ ಸಿಟ್ಟಿಳಿಯಿತು.


ಆಗ ದಾವೀದನು ಯೆಹೋವನನ್ನು, “ನಾನು ಆ ಗುಂಪನ್ನು ಹಿಂದಟ್ಟಬಹುದೋ, ಅದು ನನಗೆ ಸಿಕ್ಕುವುದೋ?” ಎಂದು ಕೇಳಲು ಆತನು, “ಹಿಂದಟ್ಟು, ಅದು ನಿನಗೆ ಸಿಕ್ಕುವುದು, ನೀನು ಎಲ್ಲರನ್ನೂ ಬಿಡಿಸಿಕೊಂಡು ಬರುವಿ” ಎಂದು ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು