Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 8:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಗಿದ್ಯೋನನು ಸುಖೋತಿನವರಿಗೆ, “ದಯವಿಟ್ಟು ನನ್ನ ಜೊತೆಯಲ್ಲಿ ಬಂದಿರುವವರಿಗೆ ಕೆಲವು ರೊಟ್ಟಿಗಳನ್ನು ಕೊಡಿರಿ, ಅವರು ಬಹಳ ದಣಿದಿದ್ದಾರೆ; ನಾನು ಮಿದ್ಯಾನ್ಯರ ಅರಸರಾದ ಜೆಬಹ, ಚಲ್ಮುನ್ನರನ್ನು ಹಿಂದಟ್ಟುತ್ತಾ ಇದ್ದೇನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಗಿದ್ಯೋನನು ಸುಖೋತಿನವರಿಗೆ, “ದಯವಿಟ್ಟು ನನ್ನ ಜೊತೆಯಲ್ಲಿ ಬಂದಿರುವವರಿಗೆ ಸ್ವಲ್ಪ ರೊಟ್ಟಿ ಕೊಡಿ. ಅವರು ಬಹಳ ದಣಿದಿದ್ದಾರೆ; ನಾನು ಮಿದ್ಯಾನ್ಯರ ಅರಸರಾದ ಜೆಬಹ ಮತ್ತು ಚಲ್ಮುನ್ನ ಎಂಬವರನ್ನು ಹಿಂದಟ್ಟುತ್ತಾ ಇದ್ದೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಗಿದ್ಯೋನನು ಸುಖೋತಿನವರಿಗೆ - ದಯವಿಟ್ಟು ನನ್ನ ಜೊತೆಯಲ್ಲಿ ಬಂದಿರುವವರಿಗೆ ಕೆಲವು ರೊಟ್ಟಿಗಳನ್ನು ಕೊಡಿರಿ, ಅವರು ಬಹಳ ದಣಿದಿದ್ದಾರೆ; ನಾನು ವಿುದ್ಯಾನ್ಯರ ಅರಸರಾದ ಜೆಬಹ, ಚಲ್ಮುನ್ನ ಎಂಬವರನ್ನು ಹಿಂದಟ್ಟುತ್ತಾ ಇದ್ದೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಗಿದ್ಯೋನನು ಸುಖೋತ್ ನಗರದ ಜನರಿಗೆ, “ನನ್ನ ಸೈನಿಕರಿಗೆ ತಿನ್ನಲು ಏನಾದರೂ ಕೊಡಿ; ಅವರು ಬಹಳ ದಣಿದು ಹೋಗಿದ್ದಾರೆ. ನಾವು ಮಿದ್ಯಾನ್ಯರ ಅರಸನಾದ ಜೆಬಹನನ್ನೂ ಚಲ್ಮುನ್ನನನ್ನೂ ಬೆನ್ನಟ್ಟಿಕೊಂಡು ಹೋಗುತ್ತಿದ್ದೇವೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅವನು ಸುಕ್ಕೋತನವರಿಗೆ, “ದಯಮಾಡಿ ನನ್ನ ಕೂಡ ಇರುವ ಜನರಿಗೆ ಕೆಲವು ರೊಟ್ಟಿಗಳನ್ನು ಕೊಡಿರಿ. ಏಕೆಂದರೆ ಅವರು ದಣಿದಿದ್ದಾರೆ. ನಾನು ಮಿದ್ಯಾನ್ಯರ ಅರಸುಗಳಾದ ಜೆಬಹನನ್ನೂ, ಚಲ್ಮುನ್ನನನ್ನೂ ಹಿಂದಟ್ಟುತ್ತೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 8:5
11 ತಿಳಿವುಗಳ ಹೋಲಿಕೆ  

ಯಾಕೋಬನು ಪ್ರಯಾಣಮಾಡಿ ಸುಕ್ಕೋತಿಗೆ ಬಂದನು. ಅಲ್ಲಿ ತನಗೋಸ್ಕರ ಮನೆಯನ್ನೂ ದನಗಳಿಗೆ ಆಶ್ರಯವನ್ನೂ ಮಾಡಿಸಿದನು. ಆದುದರಿಂದ ಆ ಸ್ಥಳಕ್ಕೆ “ಸುಕ್ಕೋತ್” ಎಂದು ಹೆಸರಾಯಿತು.


ದೇವರು ತನ್ನ ಪವಿತ್ರಸ್ಥಳದಲ್ಲಿ ನುಡಿದಿದ್ದಾನೆ. ಜಯಘೋಷಮಾಡುವೆನು; ಶೆಖೆಮ್ ಪ್ರದೇಶವನ್ನು ಹಂಚುವೆನು. ಸುಖೋತ್ ಬಯಲನ್ನು ಅಳೆದುಕೊಡುವೆನು.


ಆಗ ಅಬೀಗೈಲಳು ಶೀಘ್ರವಾಗಿ ಇನ್ನೂರು ರೊಟ್ಟಿ, ಎರಡು ಬುದ್ದಲಿ ದ್ರಾಕ್ಷಾರಸ, ಸಿದ್ಧಮಾಡಿದ ಐದು ಕುರಿಗಳ ಮಾಂಸ, ಐವತ್ತು ಸೇರು ಹುರಿಗಾಳು, ಒಣಗಿದ ನೂರು ದ್ರಾಕ್ಷಿ ಗೊಂಚಲುಗಳು, ಅಂಜೂರ ಹಣ್ಣುಗಳು, ಇನ್ನೂರು ಉಂಡೆಗಳು ಇವುಗಳನ್ನು ಕತ್ತೆಗಳ ಮೇಲೆ ಹೇರಿಸಿ,


ಯಾಕೆಂದರೆ ನೀವು ಐಗುಪ್ತದೇಶದಿಂದ ಬಂದಾಗ ಅಮ್ಮೋನಿಯರು ಅನ್ನಪಾನಗಳನ್ನು ತಂದು ನಿಮ್ಮನ್ನು ಎದುರುಗೊಳ್ಳಲಿಲ್ಲ; ಮೋವಾಬ್ಯರು ನಿಮ್ಮನ್ನು ಶಪಿಸುವುದಕ್ಕಾಗಿ ಬೆಯೋರನ ಮಗನಾದ ಬಿಳಾಮನಿಗೆ ಹಣಕೊಟ್ಟು ಎರಡು ನದಿಗಳ ಮಧ್ಯದಲ್ಲಿರುವ ಅರಾಮಿನ ಪೆತೋರ್ ಊರಿನಿಂದ ಅವನನ್ನು ಕರೆಯಿಸಿದರು.


ಸಾಲೇಮಿನ ಅರಸನಾದ ಮೆಲ್ಕೀಚೆದೆಕನು ಸಹ ಬಂದು ರೊಟ್ಟಿಯನ್ನೂ ದ್ರಾಕ್ಷಾರಸವನ್ನೂ ಕೊಟ್ಟನು. ಇವನು ಪರಾತ್ಪರನಾದ ದೇವರ ಯಾಜಕನಾಗಿದ್ದನು.


ಜೆಬಹ, ಚಲ್ಮುನ್ನರು ಸುಮಾರು ಹದಿನೈದು ಸಾವಿರ ಮಂದಿ ಸೈನಿಕರೊಡನೆ ಕರ್ಕೋರಿನಲ್ಲಿ ಇಳಿದುಕೊಂಡಿದ್ದರು. ಮೂಡಣದೇಶದವರ ಸೈನ್ಯದಲ್ಲಿ ಲಕ್ಷದ ಇಪ್ಪತ್ತು ಸಾವಿರ ಭಟರು ಹತರಾಗಿ ಉಳಿದವರು ಇಷ್ಟೇ ಮಂದಿ.


ಜೆಬಹನೂ ಮತ್ತು ಚಲ್ಮುನ್ನನೂ ಓಡಿಹೋಗಲಾಗಿ, ಅವರನ್ನು ಹಿಂದಟ್ಟಿ ಹಿಡಿದು, ಅವರ ಸೈನ್ಯವನ್ನು ಚದರಿಸಿಬಿಟ್ಟನು.


ಅನಂತರ ಅವನು ಸುಖೋತಿನವರ ಬಳಿಗೆ ಹೋಗಿ ಅವರಿಗೆ, “ನಾವು ದಣಿದಿರುವ ನಿನ್ನ ಸೈನಿಕರಿಗೋಸ್ಕರ ರೊಟ್ಟಿಗಳನ್ನು ಕೊಡುವುದಕ್ಕೆ ಜೆಬಹ, ಚಲ್ಮುನ್ನರನ್ನು ಕೈಕಟ್ಟಿ ಸ್ವಾಧೀನಮಾಡಿಕೊಂಡಿದ್ದೀಯೋ? ಎಂದು ನನ್ನನ್ನು ನಿಂದಿಸಿದಿರಲ್ಲಾ;


ಮೇರೋಜ್ ಊರನ್ನು ಶಪಿಸಿರೆಂದು ಯೆಹೋವನ ದೂತನು ಹೇಳುತ್ತಾನೆ. ‘ಅದರ ನಿವಾಸಿಗಳು ಯೆಹೋವನ ಸಹಾಯಕ್ಕೆ ಬರಲಿಲ್ಲ. ಯುದ್ಧವೀರರ ಹೋರಾಟದ ವಿರುದ್ಧ ಯೆಹೋವನ ಸಹಾಯಕ್ಕೆ ಬರಲಿಲ್ಲವಲ್ಲಾ; ಅವರನ್ನು ಶಪಿಸೇ ಶಪಿಸಿರಿ!’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು