Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 9:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನನ್ನ ತಂದೆಯು ತನ್ನ ಜೀವದ ಆಶೆಯನ್ನು ತೊರೆದು, ಹೋರಾಡಿ, ನಿಮ್ಮನ್ನು ಮಿದ್ಯಾನ್ಯರ ಕೈಯಿಂದ ಬಿಡಿಸಿದನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ನನ್ನ ತಂದೆ ತನ್ನ ಪ್ರಾಣಾಶೆಯನ್ನು ತೊರೆದು ಹೋರಾಡಿ ನಿಮ್ಮನ್ನು ಮಿದ್ಯಾನ್ಯರ ಕೈಯಿಂದ ಬಿಡಿಸಿದನಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನನ್ನ ತಂದೆಯು ತನ್ನ ಜೀವದ ಆಶೆಯನ್ನು ತೊರೆದು ಹೋರಾಡಿ ನಿಮ್ಮನ್ನು ವಿುದ್ಯಾನ್ಯರ ಕೈಯಿಂದ ಬಿಡಿಸಿದನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆದರೆ ನಿಮಗೆ ನಮ್ಮ ತಂದೆಯು ಏನು ಮಾಡಿದನೆಂಬುದನ್ನು ಯೋಚಿಸಿರಿ. ನಮ್ಮ ತಂದೆಯು ನಿಮಗೋಸ್ಕರ ಯುದ್ಧ ಮಾಡಿದನು. ಅವನು ಮಿದ್ಯಾನ್ಯರಿಂದ ನಿಮ್ಮನ್ನು ರಕ್ಷಿಸಲು ತನ್ನ ಜೀವವನ್ನು ಅಪಾಯಕ್ಕೆ ಒಡ್ಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನನ್ನ ತಂದೆಯಾದ ಅವನು ನಿಮಗೋಸ್ಕರ ಯುದ್ಧಮಾಡಿದವನಾಗಿಯೂ, ತನ್ನ ಪ್ರಾಣವನ್ನು ಲೆಕ್ಕಿಸದೆ, ಮಿದ್ಯಾನಿನ ಕೈಯಿಂದ ನಿಮ್ಮನ್ನು ತಪ್ಪಿಸಿದವನಾಗಿಯೂ ಇರಲಾಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 9:17
10 ತಿಳಿವುಗಳ ಹೋಲಿಕೆ  

ಅವರು ಮರಣದವರೆಗೆ ತಮ್ಮ ಪ್ರಾಣವನ್ನು ಪ್ರೀತಿಸದೆ, ಯಜ್ಞದ ಕುರಿಮರಿಯಾದಾತನ ರಕ್ತದಿಂದಲೂ ತಮ್ಮ ಸಾಕ್ಷಿಯ ವಾಕ್ಯದಿಂದಲೂ ಅವನನ್ನು ಜಯಿಸಿದರು.


ಅವರು ನನ್ನ ಪ್ರಾಣದ ಸಂರಕ್ಷಣೆಗಾಗಿ ತಮ್ಮ ಪ್ರಾಣಗಳನ್ನು ಅಪಾಯಕ್ಕೆ ಗುರಿಮಾಡಿಕೊಂಡಿದ್ದರು. ನಾನು ಮಾತ್ರವೇ ಅಲ್ಲ, ಅನ್ಯಜನರ ಸಭೆಗಳವರೆಲ್ಲರೂ ಅವರ ಉಪಕಾರವನ್ನು ಸ್ಮರಿಸುತ್ತಾರೆ.


ಆದರೆ ನಾವು ಪಾಪಿಗಳಾಗಿದ್ದಾಗಲೇ ಕ್ರಿಸ್ತನು ನಮಗೋಸ್ಕರ ಪ್ರಾಣಕೊಟ್ಟದ್ದರಲ್ಲಿ ದೇವರು ನಮ್ಮ ಮೇಲೆ ತನಗಿರುವ ಪ್ರೀತಿಯನ್ನು ದೃಢಪಡಿಸಿದ್ದಾನೆ.


ನೀವೆಲ್ಲರೂ ಮೂರು ದಿನ ಹಗಲಿರುಳು ಅನ್ನಪಾನಗಳನ್ನು ಬಿಟ್ಟು ನನಗೋಸ್ಕರ ಉಪವಾಸ ಮಾಡಿರಿ; ಅದರಂತೆ ನಾನೂ ನನ್ನ ಸೇವಕಿಯರೊಡನೆ ಉಪವಾಸದಿಂದಿರುವೆನು. ಅನಂತರ ನಾನು ವಿಧಿಮೀರಿ ಅರಸನ ಬಳಿಗೆ ಹೋಗುವೆನು, ಸತ್ತರೆ ಸಾಯುತ್ತೇನೆ” ಎಂದು ಹೇಳಿಸಿದಳು.


“ನೀವು ಅಬೀಮೆಲೆಕನನ್ನು ಅರಸನನ್ನಾಗಿ ಮಾಡಿದ್ದು ನ್ಯಾಯವೋ? ಅದು ಧರ್ಮಕಾರ್ಯವೋ? ಯೆರುಬ್ಬಾಳನು ನಿಮಗೆ ಮಾಡಿದ ಉಪಕಾರಕ್ಕೋಸ್ಕರ ನೀವು ಅವನಿಗೂ ಅವನ ಮನೆಯವರಿಗೂ ಪ್ರತ್ಯುಪಕಾರಮಾಡಿದಿರೋ?


ಆದರೆ ನೀವು ಈಗ ನನ್ನ ತಂದೆಯ ಮನೆಗೆ ವಿರೋಧವಾಗಿ ನಿಂತು, ಅವನ ಎಪ್ಪತ್ತು ಮಂದಿ ಮಕ್ಕಳನ್ನು ಒಂದೇ ಬಂಡೆಯ ಮೇಲೆ ವಧಿಸಿ, ಅವನ ದಾಸಿಯ ಮಗನಾದ ಅಬೀಮೆಲೆಕನನ್ನು ನಮ್ಮ ಬಂಧುವೆಂದು ಹೇಳಿ, ಶೆಕೆಮಿನ ಅರಸನನ್ನಾಗಿ ಮಾಡಿಕೊಂಡಿದ್ದೀರಿ.


ತನ್ನ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಹೋಗಿ ಫಿಲಿಷ್ಟಿಯನನ್ನು ಕೊಂದನು. ಯೆಹೋವನು ಇಸ್ರಾಯೇಲ್ಯರಿಗೆ ಮಹಾ ಜಯವನ್ನುಂಟುಮಾಡಿದನು. ನೀನು ಅದನ್ನು ನೋಡಿ ಸಂತೋಷಪಟ್ಟಿಯಲ್ಲಾ. ದಾವೀದನನ್ನು ನಿಷ್ಕರುಣೆಯಾಗಿ ಕೊಂದು, ನಿರಪರಾಧಿಯ ರಕ್ತವನ್ನು ಸುರಿಸಿ, ಅಪರಾಧಕ್ಕೆ ನೀನೇಕೆ ಗುರಿಯಾಗುತ್ತೀ?” ಅಂದನು.


ನೀವು ಸಹಾಯಮಾಡುವುದಿಲ್ಲವೆಂದು ತಿಳಿದು ಜೀವವನ್ನು ಕೈಯಲ್ಲಿ ಹಿಡಿದು ಅಮ್ಮೋನಿಯರೊಡನೆ ಯುದ್ಧಕ್ಕೆ ಹೋದೆನು. ಯೆಹೋವನು ಅವರನ್ನು ನನ್ನ ಕೈಗೆ ಒಪ್ಪಿಸಿದನು. ಹೀಗಿರಲು ನೀವು ಈಗ ಬಂದು ನನ್ನೊಡನೆ ಕಲಹಮಾಡುವುದೇಕೆ?” ಎಂದು ಉತ್ತರಿಸಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು