Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 9:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆ ಊರಿನವರು ಒಂದಾನೊಂದು ದಿನ ತಮ್ಮ ದ್ರಾಕ್ಷಾಫಲಗಳನ್ನು ಕೊಯಿದು, ಆಲೆಗಳಲ್ಲಿ ರಸತೆಗೆದು, ತಮ್ಮ ದೇವರ ಗುಡಿಗೆ ಹೋಗಿ ಹಬ್ಬಮಾಡಿ, ಉಂಡು ಕುಡಿದು ಅಬೀಮೆಲೆಕನನ್ನು ಶಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಆ ಊರಿನವರು ಒಂದು ದಿವಸ ತಮ್ಮ ದ್ರಾಕ್ಷಾಫಲಗಳನ್ನು ಕೊಯ್ದು, ಆಲೆಗಳಲ್ಲಿ ರಸ ತೆಗೆದು, ತಮ್ಮ ದೇವರ ಗುಡಿಗೆ ಹೋಗಿ, ಹಬ್ಬಮಾಡಿ, ಉಂಡು, ಕುಡಿದು ಅಬೀಮೆಲೆಕನನ್ನು ಶಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆ ಊರಿನವರು ಒಂದಾನೊಂದು ದಿವಸ ತಮ್ಮ ದ್ರಾಕ್ಷಾಫಲಗಳನ್ನು ಕೊಯಿದು ಆಲೆಗಳಲ್ಲಿ ರಸತೆಗೆದು ತಮ್ಮ ದೇವರ ಗುಡಿಗೆ ಹೋಗಿ ಹಬ್ಬಮಾಡಿ ಉಂಡು ಕುಡಿದು ಅಬೀಮೆಲೆಕನನ್ನು ಶಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಶೆಕೆಮಿನ ಜನರು ದ್ರಾಕ್ಷಿಯನ್ನು ಕೊಯಿದುಕೊಂಡು ಬರಲು ತಮ್ಮ ಹೊಲಗಳಿಗೆ ಹೋದರು. ಆ ದ್ರಾಕ್ಷಿಯನ್ನು ಹಿಂಡಿ ದ್ರಾಕ್ಷಾರಸ ಮಾಡಿದರು. ಆಮೇಲೆ ತಮ್ಮ ದೇವರ ಮಂದಿರದಲ್ಲಿ ಒಂದು ಉತ್ಸವನ್ನು ಮಾಡಿದರು. ಆ ಜನರು ತಿಂದು ಕುಡಿದು, ಅಬೀಮೆಲೆಕನ ಬಗ್ಗೆ ಕೆಟ್ಟ ಮಾತುಗಳನ್ನು ಆಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಹೊರಗೆ ಹೋಗಿ ತಮ್ಮ ದ್ರಾಕ್ಷಿ ಫಲಗಳನ್ನು ಕೊಯ್ದು, ಅವುಗಳನ್ನು ತುಳಿದು ಸಂತೋಷಪಟ್ಟು, ತಮ್ಮ ದೇವರ ಮನೆಯೊಳಗೆ ಹೋಗಿ, ತಿಂದು ಕುಡಿದು ಅಬೀಮೆಲೆಕನನ್ನು ಶಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 9:27
20 ತಿಳಿವುಗಳ ಹೋಲಿಕೆ  

ಮತ್ತು ಅವರು ಬಾಳ್‍ಬೆರೀತಿನ ದೇವಸ್ಥಾನದಿಂದ ಎಪ್ಪತ್ತು ರೂಪಾಯಿಗಳನ್ನು ಅವನಿಗೆ ಕೊಟ್ಟರು. ಅವನು ಈ ಹಣದಿಂದ ಕೆಲವು ಕಾಕಪೋಕರನ್ನು ಕೂಡಿಸಿ,


ಪರಲೋಕದ ಒಡೆಯನಿಗೆ ವಿರುದ್ಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ; ಆತನ ಆಲಯದ ಪಾತ್ರೆಗಳನ್ನು ನಿನ್ನ ಮುಂದೆ ತಂದರಲ್ಲಾ; ನೀನು ನಿನ್ನ ರಾಜ್ಯದ ಮುಖಂಡರ, ಪತ್ನಿ ಹಾಗೂ ಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ, ಕಣ್ಣು, ಕಿವಿ ಇಲ್ಲದ ಬೆಳ್ಳಿ, ಬಂಗಾರ, ತಾಮ್ರ, ಕಬ್ಬಿಣ, ಮರ, ಕಲ್ಲುಗಳ ದೇವರುಗಳನ್ನು ಸ್ತುತಿಸಿದ್ದೀ. ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ, ನಿನ್ನ ಸ್ಥಿತಿಗತಿಗಳು ಯಾರ ಅಧೀನವೋ ಆ ದೇವರನ್ನು ಘನಪಡಿಸಲೇ ಇಲ್ಲ.


ಇಂತಿರಲು ನೀನು ಪ್ರವಾದಿಸುತ್ತಾ ಈ ಮಾತುಗಳನ್ನೆಲ್ಲಾ ಅವರಿಗೆ ಹೇಳು, “ಯೆಹೋವನು ಉನ್ನತಲೋಕದಿಂದ ಗರ್ಜಿಸುವನು, ತನ್ನ ಘನನಿವಾಸದಿಂದ ಧ್ವನಿಗೈಯುವನು. ಆತನು ಗಟ್ಟಿಯಾಗಿ ಗರ್ಜಿಸಿ, ತನ್ನ ಹುಲ್ಗಾವಲಿನ ಮಂದೆಯನ್ನು ಬೆದರಿಸುವನು. ದ್ರಾಕ್ಷಿಯ ಹಣ್ಣನ್ನು ತುಳಿಯುವವರು ಕೂಗಾಡುವಂತೆ ಭೂನಿವಾಸಿಗಳೆಲ್ಲರಿಗೂ ಭಯಂಕರನಾಗಿ ಕೂಗುವನು.


ಶಪಿಸುವುದು ಅವನಿಗೆ ಇಷ್ಟವಾಗಿತ್ತು, ಅದೇ ಅವನಿಗೆ ಬರಲಿ! ಆಶೀರ್ವದಿಸುವುದು ಅವನಿಗೆ ಇಷ್ಟವಿರಲ್ಲಿಲ್ಲ, ಅದು ಅವನಿಂದ ದೂರವಿರಲಿ!


“ನೀನು ಕೋಲುಹಿಡಿದು ನನ್ನ ಬಳಿಗೆ ಬರುವುದೇನು? ನಾನು ನಾಯಿಯೋ” ಎಂದು ಹೇಳಿ ಅವನನ್ನು ತನ್ನ ದೇವರ ಹೆಸರಿನಲ್ಲಿ ಶಪಿಸಿ,


ಶತ್ರುವಾದ ಸಂಸೋನನನ್ನು ತಮ್ಮ ಕೈಗೆ ಒಪ್ಪಿಸಿದ ತಮ್ಮ ದೇವರಾದ ದಾಗೋನನಿಗೆ ಮಹಾಯಜ್ಞವನ್ನು ಸಮರ್ಪಿಸಿ ಸಂತೋಷಪಡಬೇಕೆಂದು ಫಿಲಿಷ್ಟಿಯ ಪ್ರಭುಗಳು ಒಟ್ಟಾಗಿ ಸೇರಿಬಂದರು.


ಶೆಕೆಮಿನ ಕೋಟೆಯವರು ಇದನ್ನು ಕೇಳಿ ಏಲ್‌ಬೆರೀತೆ ಎಂಬ ದೇವರ ಗುಡಿಯ ನೆಲಮನೆಯಲ್ಲಿ ಅಡಗಿಕೊಂಡರು.


ಗಿದ್ಯೋನನು ಸತ್ತನಂತರ ಇಸ್ರಾಯೇಲರು ದೈವದ್ರೋಹಿಗಳಾಗಿ ಬಾಳನ ಪ್ರತಿಮೆಗಳನ್ನು ಪೂಜಿಸಿದರು; ಬಾಳ್‌ಬೆರೀತನನ್ನು ತಮ್ಮ ದೇವರನ್ನಾಗಿ ಮಾಡಿಕೊಂಡರು.


ಅವನು ಯೆಹೋವನ ಹೆಸರನ್ನು ದೂಷಿಸಿ ಆತನನ್ನು ಶಪಿಸಿದ್ದರಿಂದ ಅವರು ಅವನನ್ನು ಮೋಶೆಯ ಬಳಿಗೆ ಹಿಡಿದು ಕರೆದುಕೊಂಡು ಬಂದರು. ಅವನ ತಾಯಿಯು ದಾನ್ ಕುಲದ ದಿಬ್ರೀಯ ಮಗಳಾದ ಶೆಲೋಮೀತ್ ಎಂಬುವವಳು.


ಮೋಶೆಯು ಪಾಳೆಯದ ಹತ್ತಿರಕ್ಕೆ ಬಂದು ಆ ಹೋರಿಕರುವನ್ನೂ ಮತ್ತು ಜನರು ಕುಣಿದಾಡುವುದನ್ನೂ ಕಂಡಾಗ ಬಹು ಕೋಪಗೊಂಡು ಕೈಯಲ್ಲಿದ್ದ ಶಿಲಾಶಾಸನಗಳನ್ನು ಬೆಟ್ಟದ ತಗ್ಗಿನಲ್ಲಿ ನೆಲಕ್ಕೆ ಹಾಕಿ ಒಡೆದುಬಿಟ್ಟನು.


ಆದುದರಿಂದ ಮರುದಿನದಲ್ಲಿ ಜನರು ಬೆಳಿಗ್ಗೆ ಎದ್ದು ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸಿದರು. ಆನಂತರ ಜನರು ತಿನ್ನುವುದಕ್ಕೂ ಕುಡಿಯುವುದಕ್ಕೂ ಕುಳಿತುಕೊಂಡರು. ಆಮೇಲೆ ಕುಣಿದಾಡಲು ಎದ್ದರು.


ಅದೇ ಸಮಯದಲ್ಲಿ ಎಬೆದನ ಮಗನಾದ ಗಾಳನೆಂಬುವನು ತನ್ನ ಬಂಧುಗಳೊಡನೆ ಶೆಕೆಮಿಗೆ ಬಂದನು. ಶೆಕೆಮಿನ ಹಿರಿಯರು ಅವನಲ್ಲಿ ಭರವಸವಿಟ್ಟರು.


ಅವರು ಹಾಸಿಗೆಯ ಮೇಲೆ ಬಿದ್ದುಕೊಂಡು ಧಾನ್ಯ ದ್ರಾಕ್ಷಾರಸಗಳಿಗೆ ಅರಚಿಕೊಳ್ಳುತ್ತಾರೆಯೇ ಹೊರತು, ನನ್ನನ್ನು ಮನಃಪೂರ್ವಕವಾಗಿ ಎಂದೂ ಪ್ರಾರ್ಥಿಸಲಿಲ್ಲ; ನನ್ನನ್ನು ತೊರೆದುಬಿಟ್ಟು ತಮ್ಮ ದೇಹಗಳನ್ನು ಗಾಯಮಾಡಿಕೊಳ್ಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು