Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 9:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಈ ಜನರ ಮೇಲೆ ನನಗೆ ಅಧಿಕಾರವಿದ್ದಿದ್ದರೆ ಅಬೀಮೆಲೆಕನನ್ನು ಓಡಿಸಿಬಿಡುತ್ತಿದ್ದೆನು” ಎಂದು ಹೇಳಿ, “ಎಲಾ, ಅಬೀಮೆಲೆಕನೇ, ಸೈನ್ಯವನ್ನು ತೆಗೆದುಕೊಂಡು ನನ್ನೊಡನೆ ಯುದ್ಧಕ್ಕೆ ಬಾ” ಎಂದು ಕೊಚ್ಚಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಈ ಜನರ ಮೇಲೆ ನನಗೆ ಅಧಿಕಾರವಿದ್ದರೆ ಅಬೀಮೆಲೆಕನನ್ನು ಓಡಿಸಿ ಬಿಡುತ್ತಿದ್ದೆ,” ಎಂದು ಹೇಳಿದನು. ಅಷ್ಟು ಮಾತ್ರವಲ್ಲದೆ, “ಎಲಾ, ಅಬೀಮೆಲೆಕನೇ, ಸೈನ್ಯವನ್ನು ತೆಗೆದುಕೊಂಡು ನನ್ನೊಡನೆ ಯುದ್ಧಕ್ಕೆ ಬಾ,” ಎಂದು ಕೊಚ್ಚಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಈ ಜನರ ಮೇಲೆ ನನಗೆ ಅಧಿಕಾರವಿದ್ದರೆ ಅಬೀಮೆಲೆಕನನ್ನು ಓಡಿಸಿ ಬಿಡುತ್ತಿದ್ದೆನು ಎಂದು ಹೇಳಿ - ಎಲಾ, ಅಬೀಮೆಲೆಕನೇ, ಸೈನ್ಯವನ್ನು ತೆಗೆದುಕೊಂಡು ನನ್ನೊಡನೆ ಯುದ್ಧಕ್ಕೆ ಬಾ ಎಂದು ಕೊಚ್ಚಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ನೀವು ನನಗೆ ಈ ಜನರ ಅಧಿಕಾರಿಯನ್ನಾಗಿ ಮಾಡಿದರೆ, ನಾನು ಅಬೀಮೆಲೆಕನನ್ನು ನಾಶಮಾಡುತ್ತೇನೆ. ನಾನು ಅವನಿಗೆ, ‘ನಿನ್ನ ಸೈನ್ಯವನ್ನು ಸಿದ್ಧಪಡಿಸಿಕೊಂಡು ಯುದ್ಧಕ್ಕೆ ಬಾ’ ಎಂದು ಕರೆಯುತ್ತೇನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಈ ಜನರನ್ನು ದೇವರು ನನ್ನ ಕೈಗೆ ಒಪ್ಪಿಸಿದರೆ ಚೆನ್ನಾಗಿತ್ತು, ಆಗ ನಾನು ಅಬೀಮೆಲೆಕನನ್ನು ತೆಗೆದುಹಾಕುತ್ತಿದ್ದೆನು. ತರುವಾಯ ಅಬೀಮೆಲೆಕನಿಗೆ, ‘ನೀನು ನಿನ್ನ ಸೈನ್ಯವನ್ನು ಹೆಚ್ಚಿಸಿಕೊಂಡು ಹೊರಟು ಬಾ,’ ಎಂದು ಹೇಳುತ್ತಿದ್ದೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 9:29
9 ತಿಳಿವುಗಳ ಹೋಲಿಕೆ  

ವ್ಯಾಜ್ಯವಾಗಲಿ, ಬಿನ್ನಹವಾಗಲಿ ಉಳ್ಳವರು ಬಂದು ನ್ಯಾಯವನ್ನು ಪಡೆದುಕೊಳ್ಳುವ ಹಾಗೆ ನನ್ನನ್ನೇ ದೇಶದ ನ್ಯಾಯಾಧಿಪತಿಯನ್ನಾಗಿ ನೇಮಿಸಿದ್ದರೆ ಎಷ್ಟೋ ಒಳ್ಳೆಯದಾಗುತ್ತಿತ್ತು” ಎಂದು ಹೇಳುವನು.


ದುಷ್ಟನು ತನ್ನ ಹೃದಯದ ಸಂಕಲ್ಪಗಳು ನೆರವೇರಿತೆಂದು ಕೊಚ್ಚಿಕೊಳ್ಳುತ್ತಾನೆ; ಲಾಭಬಡುಕನು ಯೆಹೋವನನ್ನು ದೂಷಿಸಿ ತಿರಸ್ಕರಿಸುತ್ತಾನೆ.


ನನ್ನ ಒಡೆಯನಾದ ಅಶ್ಶೂರದ ಅರಸನೊಂದಿಗೆ ಸವಾಲು ಮಾಡಿನೋಡು. ಆಗ ಕುದುರೆ ಸವಾರರನ್ನು ಬಳಸಲು ನಿನಗೆ ಸಾಮರ್ಥ್ಯವಿದ್ದರೆ ಆತನು ಎರಡು ಸಾವಿರ ಕುದುರೆಗಳನ್ನು ಕೊಡುತ್ತಾನೆ.


ಅನಂತರ ಅಮಚ್ಯನು ಯೇಹುವಿನ ಮೊಮ್ಮಗನೂ, ಯೆಹೋವಾಹಾಜನ ಮಗನೂ, ಇಸ್ರಾಯೇಲರ ಅರಸನಾದ ಯೆಹೋವಾಷನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ನಾವು ಒಬ್ಬರನ್ನೊಬ್ಬರು ಒಂದು ಕೈ ನೋಡೋಣ ಬಾ” ಎಂದು ಹೇಳಿದನು.


ಇಸ್ರಾಯೇಲರ ಅರಸನು ಬಂದ ದೂತರಿಗೆ, “ಯುದ್ಧಕ್ಕಾಗಿ ನಡುಕಟ್ಟನ್ನು ಬಿಗಿದುಕೊಳ್ಳುವವನು, ಅದನ್ನು ಬಿಚ್ಚಿಡುವ ಜಯಶಾಲಿಯಂತೆ ಹೆಚ್ಚಳಪಡಬಾರದು ಎಂದು ಅವನಿಗೆ ಹೇಳಿರಿ” ಎಂದನು.


ಪುರಾಧಿಕಾರಿಯಾದ ಜೆಬುಲನು ಎಬೆದನ ಮಗನಾದ ಗಾಳನ ಮಾತುಗಳನ್ನು ಕೇಳಿ, ಕೋಪಗೊಂಡು ಯಾರಿಗೂ ತಿಳಿಯದಂತೆ ಅಬೀಮೆಲೆಕನ ಬಳಿಗೆ ದೂತರನ್ನು ಕಳುಹಿಸಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು