Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 9:38 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಆಗ ಜೆಬುಲನು ಅವನಿಗೆ, “ಈಗ ನಿನ್ನ ಬಾಯೆಲ್ಲಿದೆ? ಅಬೀಮೆಲೆಕನು ಎಷ್ಟರವನು? ನಾವು ಅವನನ್ನು ಯಾಕೆ ಸೇವಿಸಬೇಕು ಎಂದು ಕೊಚ್ಚಿಕೊಂಡಿಯಲ್ಲಾ; ಅವರು ನೀನು ತಿರಸ್ಕರಿಸಿದ ಜನರಲ್ಲವೋ? ಹಾಗಾದರೆ ಹೋಗಿ ಅವರೊಡನೆ ಯುದ್ಧಮಾಡು, ನೋಡೋಣ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ಆಗ ಜೆಬುಲನು ಅವನಿಗೆ, “ಈಗ ನಿನ್ನ ಮಾತೆಲ್ಲಿ? ಅಬೀಮೆಲೆಕನು ಎಷ್ಟರವನು? ನಾವು ಅವನಿಗೆ ಏಕೆ ಸೇವೆಮಾಡಬೇಕು ಎಂದು ಕೊಚ್ಚಿಕೊಂಡಿಯಲ್ಲವೆ? ಅವರು ನೀನು ತಿರಸ್ಕರಿಸಿದ ಜನರಲ್ಲವೇ? ಹಾಗಾದರೆ ಹೋಗಿ ಅವರೊಡನೆ ಯುದ್ಧಮಾಡು, ನೋಡೋಣ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಆಗ ಜೆಬುಲನು ಅವನಿಗೆ - ಈಗ ನಿನ್ನ ಬಾಯೆಲ್ಲಿದೆ? ಅಬೀಮೆಲೆಕನು ಎಷ್ಟರವನು? ನಾವು ಅವನನ್ನು ಯಾಕೆ ಸೇವಿಸಬೇಕು ಎಂದು ಕೊಚ್ಚಿಕೊಂಡಿಯಲ್ಲಾ; ಅವರು ನೀನು ತಿರಸ್ಕರಿಸಿದ ಜನರಲ್ಲವೋ? ಹಾಗಾದರೆ ಹೋಗಿ ಅವರೊಡನೆ ಯುದ್ಧಮಾಡು, ನೋಡೋಣ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ಆಗ ಜೆಬುಲನು ಗಾಳನಿಗೆ, “ನೀನು ಈಗೇಕೆ ಬಡಾಯಿ ಕೊಚ್ಚುತ್ತಾ ಇಲ್ಲ? ‘ಅಬೀಮೆಲೆಕನು ಯಾರು? ನಾವು ಅವನ ಆಜ್ಞೆಯನ್ನು ಏಕೆ ಪಾಲಿಸಬೇಕು?’ ಎಂದು ನೀನು ಕೇಳಿದೆ. ನೀನು ಈ ಜನರನ್ನು ತಮಾಷೆಮಾಡಿದೆ. ಈಗ ಹೊರಗೆ ಹೋಗಿ ಅವರೊಂದಿಗೆ ಯುದ್ಧಮಾಡು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಆಗ ಜೆಬೂಲನು ಅವನಿಗೆ, “ನಾವು ಅವನನ್ನು ಸೇವಿಸುವ ಹಾಗೆ ಅಬೀಮೆಲೆಕನು ಯಾರು, ಎಂದು ನೀನು ಹೇಳಿದ ನಿನ್ನ ಬಾಯಿ ಈಗ ಎಲ್ಲಿ? ಅದು ನೀನು ಅಲಕ್ಷ್ಯಮಾಡಿದ ಜನರಲ್ಲವೋ? ಈಗ ನೀನು ಹೊರಟು ಅವರ ಸಂಗಡ ಯುದ್ಧ ಮಾಡು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 9:38
7 ತಿಳಿವುಗಳ ಹೋಲಿಕೆ  

ಯೆಹೂದವೇ, ನೀನು ನಿರ್ಮಿಸಿಕೊಂಡ ದೇವರುಗಳು ಎಲ್ಲಿ? ನಿನಗೆ ಕೇಡು ಸಂಭವಿಸಿದಾಗ ಅವು ನಿನ್ನನ್ನು ಉದ್ಧರಿಸಲು ಶಕ್ತವಾದರೆ ಏಳಲಿ! ನಿನ್ನ ಪಟ್ಟಣಗಳೆಷ್ಟೋ, ನಿನ್ನ ದೇವರುಗಳೂ ಅಷ್ಟು ಇವೆ.


ಅವನು ತಿರುಗಿ, “ನೋಡು, ಬೆಟ್ಟದ ಮೇಲಿನಿಂದ ಜನರು ಬರುತ್ತಿದ್ದಾರೆ; ಕಣಿಹೇಳುವವರ ಮರದ ಮಾರ್ಗವಾಗಿ ಇನ್ನೊಂದು ಗುಂಪು ಬರುತ್ತಿದೆ” ಅಂದನು.


ಗಾಳನು ಶೆಕೆಮಿನವರ ನಾಯಕನಾಗಿ ಹೊರಟು ಅಬೀಮೆಲೆಕನೊಡನೆ ಕಾದಾಡಿದನು.


“ಇನ್ನು ಮುಂದೆ ಗರ್ವದಿಂದ ಮಾತನಾಡಬೇಡಿರಿ; ಸೊಕ್ಕಿನ ಮಾತು ನಿಮ್ಮ ಬಾಯಿಂದ ಹೊರಡದಿರಲಿ. ದೇವರಾದ ಯೆಹೋವನು ಸರ್ವಜ್ಞನು; ಆತನು ಮನುಷ್ಯರ ಕ್ರಿಯೆಗಳನ್ನು ತೂಗಿನೋಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು