Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 9:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಮತ್ತು ಅವರು ಬಾಳ್‍ಬೆರೀತಿನ ದೇವಸ್ಥಾನದಿಂದ ಎಪ್ಪತ್ತು ರೂಪಾಯಿಗಳನ್ನು ಅವನಿಗೆ ಕೊಟ್ಟರು. ಅವನು ಈ ಹಣದಿಂದ ಕೆಲವು ಕಾಕಪೋಕರನ್ನು ಕೂಡಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅದು ಮಾತ್ರವಲ್ಲ, ಬಾಳ್ ಬೆರೀತಿನ ದೇವಸ್ಥಾನದಿಂದ ಎಪ್ಪತ್ತು ಬೆಳ್ಳಿನಾಣ್ಯಗಳನ್ನು ಅವನಿಗೆ ಕೊಟ್ಟರು. ಅವನು ಈ ಹಣದಿಂದ ಕೆಲವು ಮಂದಿ ಪುಂಡಪೋಕರಿಗಳನ್ನು ಕೂಡಿಸಿ, ಅವರ ನಾಯಕನಾಗಿ ಹೊರಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಮತ್ತು ಅವರು ಬಾಳ್‍ಬೆರೀತಿನ ದೇವಸ್ಥಾನದಿಂದ ಎಪ್ಪತ್ತು ರೂಪಾಯಿಗಳನ್ನು ಅವನಿಗೆ ಕೊಟ್ಟರು. ಅವನು ಈ ಹಣದಿಂದ ಕೆಲವು ಮಂದಿ ಕಾಕಪೋಕರನ್ನು ಕೂಡಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಶೆಕೆಮಿನ ಹಿರಿಯರು ಅಬೀಮೆಲೆಕನಿಗೆ ಎಪ್ಪತ್ತು ಬೆಳ್ಳಿಯ ನಾಣ್ಯಗಳನ್ನು ಕೊಟ್ಟರು. ಆ ಬೆಳ್ಳಿಯು ಬಾಳ್‌ಬೆರೀತನ ಗುಡಿಗೆ ಸೇರಿತ್ತು. ಕೆಲವು ಗಂಡಸರನ್ನು ಕೂಲಿಗೆ ತೆಗೆದುಕೊಳ್ಳಲು ಅವನು ಈ ಬೆಳ್ಳಿಯನ್ನು ಬಳಸಿಕೊಂಡನು. ಈ ಗಂಡಸರು ಅಯೋಗ್ಯರೂ ದುಷ್ಟರೂ ಆಗಿದ್ದರು. ಅವರು ಅಬೀಮೆಲೆಕನ ಹಿಂಬಾಲಕರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವರು ಬಾಳ್ ಬೆರೀತಿನ ಮನೆಯೊಳಗಿಂದ ಎಪ್ಪತ್ತು ಬೆಳ್ಳಿಯ ನಾಣ್ಯಗಳನ್ನು ತೆಗೆದುಕೊಂಡು ಅವನಿಗೆ ಕೊಟ್ಟರು. ಅವುಗಳಿಂದ ಅಬೀಮೆಲೆಕನು ಪುಂಡಪೋಕರಿಗಳನ್ನು ಸಂಬಳಕ್ಕೆ ಇಟ್ಟುಕೊಂಡನು. ಅವರು ಅವನ ಹಿಂದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 9:4
11 ತಿಳಿವುಗಳ ಹೋಲಿಕೆ  

ಗಿದ್ಯೋನನು ಸತ್ತನಂತರ ಇಸ್ರಾಯೇಲರು ದೈವದ್ರೋಹಿಗಳಾಗಿ ಬಾಳನ ಪ್ರತಿಮೆಗಳನ್ನು ಪೂಜಿಸಿದರು; ಬಾಳ್‌ಬೆರೀತನನ್ನು ತಮ್ಮ ದೇವರನ್ನಾಗಿ ಮಾಡಿಕೊಂಡರು.


ನಂಬದಿರುವ ಯೆಹೂದ್ಯರು ಹೊಟ್ಟೆಕಿಚ್ಚುಪಟ್ಟು ಪೇಟೆಯಲ್ಲಿ ತಿರುಗಾಡುವ ಕೆಲವು ಪುಂಡರನ್ನು ಕರೆದುಕೊಂಡು ಬಂದು ಗುಂಪು ಕೂಡಿಸಿ ಊರಲ್ಲಿ ಗದ್ದಲ ಎಬ್ಬಿಸಿ ಪೌಲ ಮತ್ತು ಸೀಲರನ್ನು ಪಟ್ಟಣದ ಸಭೆ ಎದುರಿಗೆ ತರಬೇಕೆಂದು ಅವರನ್ನು ಹುಡುಕುತ್ತಾ ಯಾಸೋನನ ಮನೆಯನ್ನು ಮುತ್ತಿದರು.


ಕಾಕಪೋಕರೂ ದುಷ್ಟರೂ ಆಗಿರುವ ಜನರು ಅವನನ್ನು ಕೂಡಿಕೊಂಡರು. ಆ ಸಮಯದಲ್ಲಿ ಎಳೇಪ್ರಾಯದವನೂ, ಮೃದುಸ್ವಭಾವವುಳ್ಳವನೂ, ತಮ್ಮೆದುರಿನಲ್ಲಿ ನಿಲ್ಲಲಾರದವನೂ ಆದ ಸೊಲೊಮೋನನ ಮಗ ರೆಹಬ್ಬಾಮನನ್ನು ಇವರು ಪ್ರತಿಭಟಿಸಿ ಬಲಗೊಂಡರು.


ಅವನು ತನ್ನ ಸಹೋದರರನ್ನು ಬಿಟ್ಟು ಟೋಬ್ ದೇಶಕ್ಕೆ ಹೋಗಲು ಅಲ್ಲಿನ ಕಾಕಪೋಕರು ಕೂಡಿ ಅವನನ್ನು ಹಿಂಬಾಲಿಸಿದರು.


ದುಡಿದು ಹೊಲಗೇಯುವವನು ಹೊಟ್ಟೆತುಂಬಾ ಉಣ್ಣುವನು, ವ್ಯರ್ಥಕಾರ್ಯಾಸಕ್ತನು ಬುದ್ಧಿಹೀನನೇ.


ಮೂರ್ಖರ ಮಕ್ಕಳಾದ ಈ ನೀಚ ಜಾತಿಯವರು ದೇಶಭ್ರಷ್ಟರು. ಅವರು ಕೊರಡೆಗಳ ಪೆಟ್ಟಿನಿಂದ ದೇಶದಿಂದ ಹೊರಹಾಕಲ್ಪಟ್ಟಿದ್ದರೆ.


ಇದಲ್ಲದೆ ಕುಗ್ಗಿದವರೂ, ಸಾಲಗಾರರೂ, ಮನನೊಂದವರೂ, ಆಗಿರುವ ಸರ್ವಜನರೂ ಬಂದು ಅವನನ್ನು ಆಶ್ರಯಿಸಿಕೊಳ್ಳಲು, ಅವನು ಸುಮಾರು ನಾನೂರು ಜನರಿಗೆ ನಾಯಕನಾದನು.


ಅನಂತರ ದಾವೀದನು ತನ್ನ ಮನೆಯವರನ್ನು ಆಶೀರ್ವದಿಸುವುದಕ್ಕೆ ಹೋದಾಗ ಸೌಲನ ಮಗಳಾದ ಮೀಕಲಳು ಅವನೆದುರಿಗೆ ಬಂದು, “ಈ ಹೊತ್ತು ಇಸ್ರಾಯೇಲರ ಅರಸನು ಎಂಥ ಗೌರವದಿಂದ ನಡೆದುಕೊಂಡನು. ಹುಚ್ಚರಲ್ಲೊಬ್ಬನಂತೆ ತನ್ನ ಜನರ ದಾಸಿಯರ ಮುಂದೆ ಬೆತ್ತಲೆಯಾಗಿದ್ದನಲ್ಲಾ” ಅಂದಳು.


ಅಲ್ಲಿರುವ ಪ್ರವಾದಿಗಳು ಬಡಾಯಿ ಕೊಚ್ಚಿಕೊಳ್ಳುವವರು, ವಿಶ್ವಾಸ ದ್ರೋಹಿಗಳು; ಅದರ ಯಾಜಕರು ಪವಿತ್ರಾಲಯವನ್ನು ಹೊಲೆಗೆಡಿಸಿದ್ದಾರೆ, ಧರ್ಮವಿಧಿಗಳನ್ನು ಭಂಗಮಾಡಿದ್ದಾರೆ.


ಆ ಊರಿನವರು ಒಂದಾನೊಂದು ದಿನ ತಮ್ಮ ದ್ರಾಕ್ಷಾಫಲಗಳನ್ನು ಕೊಯಿದು, ಆಲೆಗಳಲ್ಲಿ ರಸತೆಗೆದು, ತಮ್ಮ ದೇವರ ಗುಡಿಗೆ ಹೋಗಿ ಹಬ್ಬಮಾಡಿ, ಉಂಡು ಕುಡಿದು ಅಬೀಮೆಲೆಕನನ್ನು ಶಪಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು