ನ್ಯಾಯಸ್ಥಾಪಕರು 9:45 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201945 ಅಬೀಮೆಲೆಕನು ಆ ದಿನವೆಲ್ಲಾ ಯುದ್ಧಮಾಡಿ, ಪಟ್ಟಣವನ್ನು ಸ್ವಾಧೀನಮಾಡಿಕೊಂಡು, ಅದರ ಜನರನ್ನೆಲ್ಲಾ ಸಂಹರಿಸಿ, ಊರನ್ನು ಕೆಡವಿಬಿಟ್ಟು, ಅಲ್ಲಿ ಉಪ್ಪನ್ನು ಎರಚಿಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)45 ಅಬೀಮೆಲೆಕನು ಆ ದಿನವೆಲ್ಲಾ ಯುದ್ಧಮಾಡಿ ಪಟ್ಟಣವನ್ನು ಸ್ವಾಧೀನಮಾಡಿಕೊಂಡು ಅದರ ಜನರನ್ನೆಲ್ಲಾ ಸದೆಬಡಿದು ಊರನ್ನು ಕೆಡವಿ ಅಲ್ಲಿ ಉಪ್ಪನ್ನು ಎರಚಿಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)45 ಅಬೀಮೆಲೆಕನು ಆ ದಿವಸವೆಲ್ಲಾ ಯುದ್ಧಮಾಡಿ ಪಟ್ಟಣವನ್ನು ಸ್ವಾಧೀನಮಾಡಿಕೊಂಡು ಅದರ ಜನರನ್ನೆಲ್ಲಾ ಸಂಹರಿಸಿ ಊರನ್ನು ಕೆಡವಿಬಿಟ್ಟು ಅಲ್ಲಿ ಉಪ್ಪನ್ನು ಎರಚಿಬಿಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್45 ಆ ಇಡೀ ದಿವಸ ಅಬೀಮೆಲೆಕ ಮತ್ತು ಅವನ ಜನರು ಶೆಕೆಮಿನ ಜನರೊಂದಿಗೆ ಯುದ್ಧ ಮಾಡಿದರು. ಅಬೀಮೆಲೆಕ ಮತ್ತು ಅವನ ಜನರು ಶೆಕೆಮ್ ನಗರವನ್ನು ಸ್ವಾಧೀನಪಡಿಸಿಕೊಂಡರು; ಆ ನಗರದ ಜನರನ್ನು ಕೊಂದುಹಾಕಿದರು. ಅಬೀಮೆಲೆಕನು ಊರನ್ನು ಕೆಡವಿ ಹಾಕಿ ಉಪ್ಪನ್ನು ಚೆಲ್ಲಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ45 ಅಬೀಮೆಲೆಕನು ಆ ದಿನವೆಲ್ಲಾ ಪಟ್ಟಣದ ಮೇಲೆ ಯುದ್ಧಮಾಡಿ, ಪಟ್ಟಣವನ್ನು ಹಿಡಿದು, ಅದರಲ್ಲಿದ್ದ ಜನರನ್ನು ಕೊಂದು, ಪಟ್ಟಣವನ್ನು ಕೆಡವಿಬಿಟ್ಟು, ಅದರಲ್ಲಿ ಉಪ್ಪು ಎರಚಿಬಿಟ್ಟನು. ಅಧ್ಯಾಯವನ್ನು ನೋಡಿ |
ಇಸ್ರಾಯೇಲರ ದೇವರಾದ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ಸೊದೋಮಿನ ಗತಿಯೇ ಮೋವಾಬಿಗೂ ಆಗುವುದು. ಗೊಮೋರದ ದುರ್ದಶೆಯೇ ಅಮ್ಮೋನ್ಯರಿಗೆ ಸಂಭವಿಸುವುದು; ಆ ಪ್ರಾಂತ್ಯಗಳು ಮುಳ್ಳುಗಿಡಗಳಿಂದಲೂ, ಸೌಳುಗುಂಡಿಗಳಿಂದಲೂ ತುಂಬಿಕೊಂಡು ನಿತ್ಯ ನಾಶನಕ್ಕೆ ಈಡಾಗುವವು; ನನ್ನ ಜನರಲ್ಲಿ ಉಳಿದವರು ಅವುಗಳನ್ನು ಸೂರೆಮಾಡುವರು. ಅಳಿದುಳಿದ ನನ್ನ ಜನರಿಗೆ ಅವು ಸ್ವಾಸ್ತ್ಯವಾಗುವವು.”