Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 9:46 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

46 ಶೆಕೆಮಿನ ಕೋಟೆಯವರು ಇದನ್ನು ಕೇಳಿ ಏಲ್‌ಬೆರೀತೆ ಎಂಬ ದೇವರ ಗುಡಿಯ ನೆಲಮನೆಯಲ್ಲಿ ಅಡಗಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

46 ಶೆಕೆಮಿನ ಕೋಟೆಯವರು ಇದನ್ನು ಕೇಳಿ ಏಲ್ ಬೆರೀತ್ ಎಂಬ ದೇವರ ಗುಡಿಯ ನೆಲಮನೆಯಲ್ಲಿ ಅಡಗಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

46 ಶೆಕೆವಿುನ ಕೋಟೆಯವರು ಇದನ್ನು ಕೇಳಿ ಏಲ್‍ಬೆರೀತೆಂಬ ದೇವರ ಗುಡಿಯ ನೆಲಮನೆಯಲ್ಲಿ ಅಡಗಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

46 ಶೆಕೆಮಿನ ಬುರುಜಿನ ಮೇಲೆ ಕೆಲವು ಜನರು ವಾಸಮಾಡುತ್ತಿದ್ದರು. ಶೆಕೆಮಿನಲ್ಲಿ ನಡೆದ ಘಟನೆಯ ಬಗ್ಗೆ ಕೇಳಿ ಅವರು ಏಲ್‌ಬೆರೀತ್ ದೇವರಗುಡಿಯ ಅತಿ ಸುರಕ್ಷಿತವಾದ ಕೋಣೆಯಲ್ಲಿ ಒಟ್ಟುಗೂಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

46 ಅದನ್ನು ಶೆಕೆಮಿನ ಗೋಪುರದಲ್ಲಿ ಜನರೆಲ್ಲರೂ ಕೇಳಿದಾಗ, ಅವರು ಬೆರೀತೆಂಬ ದೇವರ ಮನೆಯ ಭದ್ರವಾದ ಸ್ಥಳದಲ್ಲಿ ಅಡಗಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 9:46
10 ತಿಳಿವುಗಳ ಹೋಲಿಕೆ  

ಗಿದ್ಯೋನನು ಸತ್ತನಂತರ ಇಸ್ರಾಯೇಲರು ದೈವದ್ರೋಹಿಗಳಾಗಿ ಬಾಳನ ಪ್ರತಿಮೆಗಳನ್ನು ಪೂಜಿಸಿದರು; ಬಾಳ್‌ಬೆರೀತನನ್ನು ತಮ್ಮ ದೇವರನ್ನಾಗಿ ಮಾಡಿಕೊಂಡರು.


ಮತ್ತು ಅವರು ಬಾಳ್‍ಬೆರೀತಿನ ದೇವಸ್ಥಾನದಿಂದ ಎಪ್ಪತ್ತು ರೂಪಾಯಿಗಳನ್ನು ಅವನಿಗೆ ಕೊಟ್ಟರು. ಅವನು ಈ ಹಣದಿಂದ ಕೆಲವು ಕಾಕಪೋಕರನ್ನು ಕೂಡಿಸಿ,


ಅವನು ಒಂದು ದಿನ ಗುಡಿಗೆ ಹೋಗಿ ತನ್ನ ದೇವರಾದ ನಿಸ್ರೋಕನನ್ನು ಮನೆಯಲ್ಲಿ ಪೂಜಿಸುತ್ತಿರುವಾಗ ಅದ್ರಮ್ಮೆಲೆಕ್, ಸರೆಚೆರ್ ಎಂಬ ಅವನ ಮಕ್ಕಳು ಅವನನ್ನು ಕತ್ತಿಯಿಂದ ಕೊಂದು, ಅರರಾಟ್ ದೇಶಕ್ಕೆ ಓಡಿಹೋದರು. ಅವನಿಗೆ ಬದಲಾಗಿ ಅವನ ಮಗನಾದ ಏಸರ್ ಹದ್ದೋನನು ಅರಸನಾದನು.


ಅವುಗಳನ್ನು ಮಾಡುವವರೂ, ಅವುಗಳಲ್ಲಿ ಭರವಸವಿಡುವವರೂ ಅವುಗಳಂತೆಯೇ.


ಇಸ್ರಾಯೇಲ್ ದೇವರೇ, ನೀನು ನಿನ್ನ ಸೇವಕನೂ, ನನ್ನ ತಂದೆಯೂ ಆದ ದಾವೀದನಿಗೆ ನುಡಿದಿದ್ದೆಲ್ಲವೂ ಸಾರ್ಥಕವಾಗಲಿ.


ಆ ಊರಿನವರು ಒಂದಾನೊಂದು ದಿನ ತಮ್ಮ ದ್ರಾಕ್ಷಾಫಲಗಳನ್ನು ಕೊಯಿದು, ಆಲೆಗಳಲ್ಲಿ ರಸತೆಗೆದು, ತಮ್ಮ ದೇವರ ಗುಡಿಗೆ ಹೋಗಿ ಹಬ್ಬಮಾಡಿ, ಉಂಡು ಕುಡಿದು ಅಬೀಮೆಲೆಕನನ್ನು ಶಪಿಸಿದರು.


ಕೋಟೆಯವರೆಲ್ಲರೂ ಅಲ್ಲಿ ಅಡಗಿಕೊಂಡಿದ್ದಾರೆಂಬುದು ಅಬೀಮೆಲೆಕನಿಗೆ ಗೊತ್ತಾದಾಗ


ಆಗ ಯೆಹೋಶುವನು ಅವರಿಗೆ “ಆ ಗವಿಯ ಬಾಯಿಗೆ ದೊಡ್ಡ ಕಲ್ಲುಗಳನ್ನು ಹೊರಳಿಸಿ ಕಾಯುವುದಕ್ಕೆ ಕಾವಲುಗಾರರನ್ನು ಇಡಿರಿ. ನೀವಾದರೂ ಅಲ್ಲೇ ನಿಂತುಕೊಳ್ಳಬೇಡಿ. ಬೇಗನೆ ಹಿಂದಟ್ಟಿ ಹಿಂದೆ ಬರುವ ಶತ್ರುಗಳನ್ನು ಹತಮಾಡುತ್ತಾ ಹೋಗಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು