53 ಆದರೆ ಅಬೀಮೆಲೆಕನು ಆ ಗೋಪುರದ ಬಾಗಿಲಿನ ಹತ್ತಿರ ನಿಂತಿದ್ದಾಗ ಮಾಳಿಗೆಯ ಮೇಲಿದ್ದ ಒಬ್ಬ ಸ್ತ್ರೀಯು ಅವನ ತಲೆಯ ಮೇಲೆ ಒಂದು ಬೀಸುವ ಕಲ್ಲನ್ನು ಹಾಕಿದಳು. ಆ ಬೀಸುವ ಕಲ್ಲು ಅಬೀಮೆಲೆಕನ ತಲೆಬುರುಡೆಯನ್ನು ಒಡೆಯಿತು.
ಯೆರುಬ್ಬೇಷೆತನ ಮಗನಾದ ಅಬೀಮೆಲೇಕನನ್ನು ಕೊಂದವರು ಯಾರು ಎಂದು ನಿಮಗೆ ಗೊತ್ತಿಲ್ಲವೋ? ತೇಬೇಚಿನಲ್ಲಿ ಒಬ್ಬ ಹೆಂಗಸು ಗೋಡೆಯ ಮೇಲಿನಿಂದ ಒಂದು ಬೀಸುವ ಕಲ್ಲನ್ನು ಅವನ ಮೇಲೆ ಎತ್ತಿ ಹಾಕಿ ಅವನನ್ನು ಕೊಂದಳಲ್ಲವೇ. ಹೀಗಿರುವುದರಿಂದ ನೀವು ಗೋಡೆಯ ಸಮೀಪಕ್ಕೆ ಹೋದದ್ದೇಕೆ?’ ಎಂದು ಕೇಳಿದರೆ ನೀನು, ಹಿತ್ತಿಯನಾದ ನಿನ್ನ ಸೇವಕ ಊರೀಯನು ಮೃತನಾದನೆಂದು ಹೇಳು” ಎಂಬುದಾಗಿ ಆಜ್ಞಾಪಿಸಿ ಅವನನ್ನು ಕಳುಹಿಸಿದನು.
ಹೀಗಿರಲು ಯೆಹೋವನು ಬಾಬೆಲಿನ ವಿಷಯವಾಗಿ ಮಾಡಿಕೊಂಡಿರುವ ಆಲೋಚನೆಯನ್ನೂ, ಆತನು ಕಸ್ದೀಯರ ದೇಶವನ್ನು ಕುರಿತು ಸಂಕಲ್ಪಿಸಿರುವ ಉದ್ದೇಶವನ್ನೂ ಆಲಿಸಿರಿ, ಮೃಗಗಳು ಹಿಂಡಿನ ಮರಿಗಳನ್ನು ಖಂಡಿತವಾಗಿ ಎಳೆದುಕೊಂಡು ಹೋಗುವವು; ನಿಶ್ಚಯವಾಗಿ ಅವುಗಳ ಹುಲ್ಗಾವಲು ಅವುಗಳ ನಾಶಕ್ಕೆ ಬೆದರುವುದು.
ಹೀಗಿರಲು ಯೆಹೋವನು ಎದೋಮಿನ ವಿಷಯವಾಗಿ ಮಾಡಿಕೊಂಡಿರುವ ಆಲೋಚನೆಯನ್ನೂ, ಆತನು ತೇಮಾನ್ಯರನ್ನು ಕುರಿತು ಸಂಕಲ್ಪಿಸಿರುವ ಉದ್ದೇಶವನ್ನೂ ಆಲಿಸಿರಿ; ಮೃಗಗಳು ಖಂಡಿತವಾಗಿ ಹಿಂಡಿನ ಮರಿಗಳನ್ನು ಎಳೆದುಕೊಂಡು ಹೋಗುವವು; ನಿಶ್ಚಯವಾಗಿ ಅವುಗಳ ಹುಲ್ಗಾವಲು ಅವುಗಳ ನಾಶನಕ್ಕಾಗಿ ಬೆದರುವುದು.
ಎಫ್ರಾಯೀಮಿನ ಪರ್ವತಪ್ರದೇಶದ ಬಿಕ್ರೀಯ ಮಗನಾದ ಶೆಬನೆಂಬುವವನು ಅರಸನಾದ ದಾವೀದನಿಗೆ ವಿರೋಧವಾಗಿ ಕೈಯೆತ್ತಿದ್ದಾನೆ. ಅವನ್ನನ್ನೇ ಒಪ್ಪಿಸಿರಿ, ನಾನು ಊರನ್ನು ಬಿಟ್ಟು ಹೋಗುತ್ತೇನೆ” ಎಂದು ಹೇಳಿದನು. ಆ ಸ್ತ್ರೀಯು ಯೋವಾಬನಿಗೆ, “ನೋಡು ಈಗಲೇ ಅವನ ತಲೆಯು ಗೋಡೆಯ ಕಿಂಡಿಯಿಂದ ನಿನ್ನ ಕಡೆಗೆ ಒಗೆಯಲ್ಪಡುವುದು” ಎಂದು ಉತ್ತರ ಕೊಟ್ಟು,
ಆಕೆಯು, “ನಾನು ಹೇಗೂ ನಿನ್ನ ಸಂಗಡ ಬರುವೆನು; ಆದರೆ ಈ ಯುದ್ಧಪ್ರಯಾಣದಲ್ಲಿ ಉಂಟಾಗುವ ಗೌರವ ನಿನಗೆ ಸಲ್ಲುವುದಿಲ್ಲ. ಯಾಕೆಂದರೆ ಒಬ್ಬ ಸ್ತ್ರೀ ಸೀಸೆರನನ್ನು ಸೋಲಿಸುವಂತೆ ಯೆಹೋವನು ಮಾಡುವನು” ಎಂದು ಹೇಳಿ ದೆಬೋರಳು ಬಾರಾಕನೊಡನೆ ಕೆದೆಷಿಗೆ ಹೋದಳು.