ಪರಮಗೀತೆ 1:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನನ್ನನ್ನು ನಿನ್ನಡೆಗೆ ಸೆಳೆದುಕೋ; ನಿನ್ನ ಹಿಂದೆ ಓಡಿ ಬರುವೆನು; ರಾಜನು ನನ್ನನ್ನು ಅಂತಃಪುರಕ್ಕೆ ಬರಮಾಡಿದ್ದಾನೆ; ನಿನ್ನಲ್ಲಿ ಹರ್ಷಿಸಿ ಉಲ್ಲಾಸಿಸುವೆವು, ನಿನ್ನ ಪ್ರೀತಿಯು ದ್ರಾಕ್ಷಾರಸಕ್ಕಿಂತಲೂ ಉತ್ತಮವಾದುದು; ಸ್ತ್ರೀಯರು ನಿನ್ನನ್ನು ಯಥಾರ್ಥವಾಗಿ ಪ್ರೀತಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ನನ್ನನ್ನು ತುಸು ಎಳೆ, ಓಡೋಣ ನಾವು ಮುಂದಕ್ಕೆ; ಅರಸನಾಗಿರು ನನಗೆ ಕರೆದೊಯ್ಯಿ ನನ್ನನ್ನು ಅಂತಃಪುರಕ್ಕೆ. ಹರ್ಷಿಸೋಣ, ಒಂದಿಗೆ ಆನಂದಿಸೋಣ ಮಧುಪಾನಕ್ಕಿಂತ ನಿನ್ನ ಪ್ರೀತಿ ಸ್ತುತ್ಯಾರ್ಹ ನಿನ್ನನ್ನು ಪ್ರೀತಿಸುವುದು ಎನಿತು ಸಹಜ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನನ್ನನ್ನು ತುಸು ಎಳೆ; ನಿನ್ನ ಹಿಂದೆ ಓಡಿ ಬರುವೆವು; ರಾಜನು ನನ್ನನ್ನು ಅಂತಃಪುರಕ್ಕೆ ಬರಮಾಡಿದ್ದಾನೆ; ನಿನ್ನಲ್ಲಿ ಹರ್ಷಿಸಿ ಉಲ್ಲಾಸಿಸುವೆವು, ದ್ರಾಕ್ಷಾರಸಕ್ಕಿಂತಲೂ ನಿನ್ನ ಲಾಲನೆಯನ್ನು ಹೆಚ್ಚಾಗಿ ಕೊಂಡಾಡುವೆವು; ನಿನ್ನನ್ನು ಯಥಾರ್ಥವಾಗಿ ಪ್ರೀತಿಸುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ನನ್ನನ್ನು ಕರೆದುಕೊಂಡು ಹೋಗು! ನಾವು ಓಡಿಹೋಗೋಣ! ರಾಜನು ನನ್ನನ್ನು ಅಂತಃಪುರಕ್ಕೆ ಬರಮಾಡಿದ್ದಾನೆ. ನಿನ್ನಲ್ಲಿ ಹರ್ಷಿಸಿ ಉಲ್ಲಾಸಿಸುವೆವು. ನಿನ್ನ ಪ್ರೀತಿಯು ದ್ರಾಕ್ಷಾರಸಕ್ಕಿಂತಲೂ ಉತ್ತಮ. ಯುವತಿಯರು ನಿನ್ನನ್ನು ಹೃದಯಪೂರ್ವಕವಾಗಿ ಪ್ರೀತಿಸುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ನನ್ನನ್ನು ನಿನ್ನೊಂದಿಗೆ ಕರೆದುಕೊಂಡು ಹೋಗಲು ಅವಸರಪಡು! ಅರಸನು ನನ್ನನ್ನು ತನ್ನ ಕೊಠಡಿಯೊಳಗೆ ಕರೆದುಕೊಂಡು ಬರಲಿ. ನಾವು ನಿನ್ನಲ್ಲಿ ಉಲ್ಲಾಸಪಟ್ಟು, ಸಂತೋಷ ಪಡುತ್ತೇವೆ. ದ್ರಾಕ್ಷಾರಸಕ್ಕಿಂತ ಹೆಚ್ಚಾಗಿ ನಿನ್ನ ಪ್ರೀತಿಯನ್ನು ಹೊಗಳುತ್ತೇವೆ. ಅವರು ಯಥಾರ್ಥವಾಗಿ ನಿನ್ನನ್ನು ಮೆಚ್ಚುತ್ತಾರೆ! ಅಧ್ಯಾಯವನ್ನು ನೋಡಿ |
ಆದಕಾರಣ ಇಷ್ಟು ಸಾಕ್ಷಿಗಳ ದೊಡ್ಡ ಗುಂಪು ಮೇಘದಂತೆ ನಮ್ಮ ಸುತ್ತಲು ಇರುವುದರಿಂದ ನಮಗೆ ಅಭ್ಯಂತರಪಡಿಸುವ ಎಲ್ಲಾ ಭಾರವನ್ನೂ, ಸುಲಭವಾಗಿ ಮುತ್ತಿಕೊಳ್ಳುವ ಪಾಪವನ್ನು ಸಹ ನಾವು ತೆಗೆದಿಟ್ಟು, ನಂಬಿಕೆಯನ್ನು ಹುಟ್ಟಿಸುವಾತನೂ ಅದನ್ನು ಪರಿಪೂರ್ಣಗೊಳಿಸುವಾತನೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮಗೆ ನೇಮಕವಾದ ಓಟವನ್ನು ಸಹನೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ ಅಪಮಾನವನ್ನು ಅಲಕ್ಷ್ಯಮಾಡಿ, ಶಿಲುಬೆಯ ಮರಣವನ್ನು ಸಹಿಸಿಕೊಂಡು, ದೇವರ ಸಿಂಹಾಸನದ ಬಲಗಡೆಯಲ್ಲಿ ಆಸೀನನಾಗಿದ್ದಾನೆ.