Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 2:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಬಂಡೆಯ ಬಿರುಕುಗಳಲ್ಲಿಯೂ, ಸಂದುಗಳ ಮರೆಯಲ್ಲಿಯೂ ಇರುವ ನನ್ನ ಪಾರಿವಾಳವೇ! ನಿನ್ನ ರೂಪವನ್ನು ನನಗೆ ತೋರಿಸು, ನಿನ್ನ ಧ್ವನಿಯನ್ನು ಕೇಳಿಸು; ಯಾಕೆಂದರೆ ನಿನ್ನ ಸ್ವರ ಎಷ್ಟೋ ಇಂಪು, ನಿನ್ನ ರೂಪವು ಎಷ್ಟೋ ಅಂದ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಬಂಡೆಯ ಬಿರುಕುಗಳಲ್ಲಿ ಸಂದುಗಳ ಮರೆಯಲ್ಲಿ ತಂಗಿರುವ ಪಾರಿವಾಳವೇ ಬಾ. ನಿನ್ನ ರೂಪವನು ನನಗೆ ಕಾಣಿಸು ನಿನ್ನ ದನಿಯನು ನನಗೆ ಕೇಳಿಸು. ನಿನ್ನ ದನಿ ಎನಿತೋ ಇಂಪು! ನಿನ್ನ ರೂಪ ಎನಿತೋ ತಂಪು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಬಂಡೆಯ ಬಿರುಕುಗಳಲ್ಲಿಯೂ ಜರಿಯ ಮರೆಯಲ್ಲಿಯೂ ಇರುವ ನನ್ನ ಪರಿವಾಳವೇ! ನಿನ್ನ ರೂಪು ನನಗೆ ಕಾಣಿಸು, ನಿನ್ನ ದನಿ ಕೇಳಿಸು; ನಿನ್ನ ದನಿ ಎಷ್ಟೋ ಇಂಪು, ನಿನ್ನ ರೂಪು ಎಷ್ಟೋ ಅಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಬಂಡೆಯ ಬಿರುಕುಗಳಲ್ಲಿಯೂ ಜರಿಯ ಮರೆಯಲ್ಲಿಯೂ ಇರುವ ನನ್ನ ಪಾರಿವಾಳವೇ, ನಿನ್ನ ರೂಪವನ್ನು ತೋರಿಸು; ನಿನ್ನ ಸ್ವರವನ್ನು ಕೇಳಿಸು. ನಿನ್ನ ಸ್ವರ ಎಷ್ಟೋ ಮಧುರ! ನಿನ್ನ ರೂಪ ಎಷ್ಟೋ ಅಂದ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಬಂಡೆಯ ಬಿರುಕುಗಳಲ್ಲಿಯೂ ಸಂದುಗಳ ಮರೆಯಲ್ಲಿಯೂ ಇರುವ ನನ್ನ ಪಾರಿವಾಳವೇ ಬಾ. ನಿನ್ನ ಮುಖವನ್ನು ನನಗೆ ತೋರಿಸು. ನಿನ್ನ ಸ್ವರವನ್ನು ನನಗೆ ಕೇಳಿಸು. ನಿನ್ನ ಸ್ವರವು ಇಂಪಾಗಿದೆ. ನಿನ್ನ ಮುಖವು ಸುಂದರವಾಗಿಯೂ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 2:14
41 ತಿಳಿವುಗಳ ಹೋಲಿಕೆ  

ಯೆರೂಸಲೇಮಿನ ಮಹಿಳೆಯರೇ, ನಾನು ಕೇದಾರಿನ ಗುಡಾರಗಳಂತೆ ಕಪ್ಪಾಗಿದ್ದರೂ, ಸೊಲೊಮೋನನ ಪರದೆಗಳಂತೆ ಚೆಲುವಾಗಿದ್ದೇನೆ.


ಉದ್ಯಾನದಲ್ಲಿ ವಾಸಿಸುವವಳೇ ಗೆಳೆಯರು ನಿನ್ನ ಧ್ವನಿ ಕೇಳಬೇಕೆಂದಿದ್ದಾರೆ, ನನಗೂ ಆ ಧ್ವನಿ ಕೇಳಿಸಲಿ.


ನಾನು ನಿದ್ರೆಗೊಂಡಿದ್ದರೂ ನನ್ನ ಹೃದಯವು ಎಚ್ಚರಗೊಂಡಿತ್ತು. ಇಗೋ, ಎನ್ನಿನಿಯನು ಕದ ತಟ್ಟಿ, “ಪ್ರಿಯಳೇ, ಕಾಂತಳೇ, ಪಾರಿವಾಳವೇ, ನಿರ್ಮಲೆಯೇ, ಬಾಗಿಲು ತೆಗೆ! ನನ್ನ ತಲೆಯ ಮೇಲೆಲ್ಲಾ ಇಬ್ಬನಿಯು ಬಿದ್ದಿದೆ, ನನ್ನ ಕೂದಲು ರಾತ್ರಿ ಬೀಳುವ ಹನಿಗಳಿಂದ ತುಂಬಿದೆ” ಅಂದನು.


ಇದಲ್ಲದೆ ಆತನು ಅವನಿಗೆ, “ನಾನು ನಿನ್ನ ತಂದೆಯಾದ, ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರೂ ಆಗಿದ್ದೇನೆ” ಎಂದು ಹೇಳಿದನು. ಮೋಶೆಯು ದೇವರನ್ನು ನೋಡುವುದಕ್ಕೆ ಭಯಪಟ್ಟು ಮುಖವನ್ನು ಮುಚ್ಚಿಕೊಂಡನು.


ಅದನ್ನು ತೆಗೆದುಕೊಂಡಾಗ ಆ ನಾಲ್ಕು ಜೀವಿಗಳೂ ಇಪ್ಪತ್ನಾಲ್ಕು ಮಂದಿ ಹಿರಿಯರೂ ಕುರಿಮರಿಯಾದಾತನ ಪಾದಕ್ಕೆ ಅಡ್ಡ ಬಿದ್ದರು. ಹಿರಿಯರ ಕೈಗಳಲ್ಲಿ ವೀಣೆಗಳೂ ದೇವಜನರ ಪ್ರಾರ್ಥನೆಗಳೆಂಬ ಧೂಪದಿಂದ ತುಂಬಿದ್ದ ಚಿನ್ನದ ಧೂಪಾರತಿಗಳೂ ಇದ್ದವು.


ಆದುದರಿಂದ ನಾವು ತಕ್ಕ ಸಮಯದಲ್ಲಿ ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಆತನ ಕೃಪಾಸನದ ಮುಂದೆ ಬರೋಣ.


ಉನ್ನತ ಸ್ಥಾನದಲ್ಲಿ ಬಂಡೆಯ ಬಿರುಕುಗಳೊಳಗೆ ವಾಸಿಸುತ್ತಾ, ನನ್ನನ್ನು ನೆಲಕ್ಕೆ ಇಳಿಸಬಲ್ಲವರು ಯಾರು? ಎಂದುಕೊಳ್ಳುವ ಜನರೇ, ನಿಮ್ಮ ಹೃದಯದ ಒಣ ಹೆಮ್ಮೆಯು ನಿಮ್ಮನ್ನು ಮೋಸಗೊಳಿಸಿದೆ.


ಅವರಲ್ಲಿ ಪಲಾಯನ ಮಾಡಿದವರು ತಪ್ಪಿಸಿಕೊಂಡು, ತಮ್ಮ ಅಧರ್ಮದಲ್ಲಿಯೇ ಇದ್ದು, ಡೊಂಗರಗಳಲ್ಲಿನ ಪಾರಿವಾಳಗಳಂತೆ ಬೆಟ್ಟಗಳ ಮೇಲೆ ಗೋಳಾಡುತ್ತಿರುವರು.


ಆಹಾ, ನಿನ್ನ ಭೀಕರತ್ವವೆಲ್ಲಿ! ಪರ್ವತಾಗ್ರದಲ್ಲಿ ನೆಲೆಗೊಂಡು ಬಂಡೆಯ ಬಿರುಕುಗಳಲ್ಲಿ ವಾಸಿಸುವ ಜನವೇ, ನಿನ್ನೆದೆಯ ಹೆಮ್ಮೆಯು ನಿನ್ನನ್ನು ಮೋಸಗೊಳಿಸಿದೆ; ನೀನು ಹದ್ದಿನಂತೆ ನಿನ್ನ ಗೂಡನ್ನು ಉನ್ನತಸ್ಥಾನದಲ್ಲಿ ಕಟ್ಟಿಕೊಂಡರೂ, ನಿನ್ನನ್ನು ಅಲ್ಲಿಂದ ಇಳಿಸಿಬಿಡುವೆನು. ಇದು ಯೆಹೋವನ ನುಡಿ.”


ಮೋವಾಬ್ಯರೇ, ಪಟ್ಟಣಗಳನ್ನು ಬಿಟ್ಟು ಬಂಡೆಯ ಗುಹೆಗಳಲ್ಲಿ ವಾಸಿಸಿರಿ; ಹಳ್ಳಕೊಳ್ಳದ ಆಚೆಯ ಪಕ್ಕದಲ್ಲಿ ಗೂಡನ್ನು ಕಟ್ಟಿಕೊಳ್ಳುವ ಪಾರಿವಾಳದಂತಿರಿ;


ಆಹಾ, ದ್ವೀಪನಿವಾಸಿಗಳೂ ನನ್ನನ್ನು ನಿರೀಕ್ಷಿಸುವವರಾಗಿದ್ದಾರೆ! ಮೇಘದೋಪಾದಿಯಲ್ಲಿ ಗೂಡುಗಳಿಗೆ ತ್ವರೆಪಡುವ ಪಾರಿವಾಳಗಳಂತೆ ಹಾರಿ ಬರುತ್ತಿರುವ ಇವರು ಯಾರು?


ಯೆಹೋವನು ಚೀಯೋನನ್ನು ಸಂತೈಸುವನು. ಅಲ್ಲಿನ ಹಾಳು ಪ್ರದೇಶಗಳನ್ನೆಲ್ಲಾ ಸುಧಾರಿಸಿ, ಕಾಡುನೆಲವನ್ನು ಏದೆನ್ ಉದ್ಯಾನದಂತೆಯೂ, ಬೀಳುಭೂಮಿಯನ್ನು ಯೆಹೋವನ ವನದ ಹಾಗೆ ಕಂಗೊಳಿಸುವಂತೆ ಮಾಡುವನು. ಹರ್ಷ, ಉಲ್ಲಾಸ, ಸ್ತೋತ್ರ, ಗಾನಧ್ವನಿ ಇವು ಅಲ್ಲಿ ನೆಲೆಯಾಗಿರುವವು.


ಆಹಾ, ನನ್ನ ಪ್ರಿಯಳೇ, ನೀನು ಎಷ್ಟು ಚೆಲುವೆ, ಆಹಾ, ನೀನು ಎಷ್ಟು ಸುಂದರಿ! ನಿನ್ನ ನೇತ್ರಗಳು ಪಾರಿವಾಳಗಳಂತಿವೆ.


ಮುಗ್ಗರಿಸದಂತೆ ನಿಮ್ಮನ್ನು ಕಾಪಾಡಿಕೊಳ್ಳುತ್ತಾ, ತನ್ನ ಮಹಿಮೆಯ ಸಮಕ್ಷಮದಲ್ಲಿ ನಿಮ್ಮನ್ನು ನಿರ್ದೋಷಿಗಳನ್ನಾಗಿ, ಅತ್ಯಂತ ಹರ್ಷದೊಡನೆ ನಿಲ್ಲಿಸುವುದಕ್ಕೂ ಶಕ್ತನಾಗಿರುವ,


ಆದರೆ ದೇವರ ದೃಷ್ಟಿಯಲ್ಲಿ ಅಮೂಲ್ಯವಾದದ್ದೂ ಮತ್ತು ಶಾಶ್ವತವಾದದ್ದೂ ಆಗಿರುವ ಸಾತ್ವಿಕತೆ ಮತ್ತು ಶಾಂತಮನಸ್ಸು ಎಂಬ ಆಂತರ್ಯದ ಭೂಷಣವೇ ನಿಮ್ಮ ಅಲಂಕಾರವಾಗಿರಲಿ.


ಆದಕಾರಣ ಕೆಟ್ಟ ಮನಸ್ಸಾಕ್ಷಿಯನ್ನು ಪ್ರೋಕ್ಷಿಸಿ ಶುದ್ಧೀಕರಿಸಿಕೊಂಡು, ತಿಳಿನೀರಿನಿಂದ ತೊಳೆದ ದೇಹದಿಂದಲೂ, ಯಥಾರ್ಥಹೃದಯದಿಂದಲೂ, ನಂಬಿಕೆಯ ಪೂರ್ಣನಿಶ್ಚಯದಿಂದಲೂ ದೇವರ ಸಮೀಪಕ್ಕೆ ಬರೋಣ.


ಈಗಲಾದರೋ ದೇವರು ನಿಮ್ಮನ್ನು ಯೇಸುಕ್ರಿಸ್ತನ ಶಾರೀರಿಕ ಮರಣದ ಮೂಲಕವಾಗಿ ಸಂಧಾನಪಡಿಸಿಕೊಂಡಿದ್ದಾನೆ. ದೇವರು ತನ್ನ ಸನ್ನಿಧಿಯಲ್ಲಿ ನಿಮ್ಮನ್ನು ಪರಿಶುದ್ಧರನ್ನಾಗಿಯೂ, ನಿರ್ದೋಷಿಗಳನ್ನಾಗಿಯೂ, ನಿರಪರಾಧಿಗಳನ್ನಾಗಿಯೂ ನಿಲ್ಲಿಸಬೇಕೆಂದು ಹೀಗೆ ಮಾಡಿದ್ದಾನೆ.


ಅದನ್ನು ಕಳಂಕ ಸುಕ್ಕು ಮುಂತಾದದ್ದೊಂದೂ ಇಲ್ಲದಂತೆ ಪರಿಶುದ್ಧವೂ, ನಿರ್ದೋಷವೂ, ಮಹಿಮೆಯುಳ್ಳದ್ದೂ ಆಗಿರುವ ಸಭೆಯನ್ನಾಗಿ ತನ್ನೆದುರಿನಲ್ಲಿ ನಿಲ್ಲಿಸಿಕೊಳ್ಳಬೇಕೆಂದು ವಾಕ್ಯೋಪದೇಶ ಸಹಿತವಾದ ಜಲಸ್ನಾನವನ್ನು ಮಾಡಿಸಿ ಶುದ್ಧಿಮಾಡಿದನು.


“ನೋಡಿರಿ, ತೋಳಗಳ ನಡುವೆ ಕುರಿಗಳನ್ನು ಕಳುಹಿಸುವಂತೆ ನಾನು ನಿಮ್ಮನ್ನು ಕಳುಹಿಸಿಕೊಡುತ್ತಿದ್ದೇನೆ. ಆದುದರಿಂದ ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳೂ ಆಗಿರಿ.


ಯೇಸು ದೀಕ್ಷಾಸ್ನಾನ ಮಾಡಿಸಿಕೊಂಡ ನೀರಿನಿಂದ ಮೇಲಕ್ಕೆ ಬಂದ ಕೂಡಲೇ ಇಗೋ, ಆತನಿಗಾಗಿ ಪರಲೋಕವು ತೆರೆಯಿತು; ಮತ್ತು ದೇವರ ಆತ್ಮವು ಪಾರಿವಾಳದ ಹಾಗೆ ತನ್ನ ಮೇಲೆ ಇಳಿದು ಬರುವುದನ್ನು ಕಂಡನು.


ಕರ್ತನೇ, ನೀನು ಧರ್ಮಸ್ವರೂಪನು, ನಾವೋ ನಾಚಿಕೆಗೆ ಈಡಾದವರು; ಹೌದು, ಈಗಲೇ ಯೆಹೂದ್ಯರೂ ಯೆರೂಸಲೇಮಿನ ನಿವಾಸಿಗಳೂ ನಿನ್ನ ವಿರುದ್ಧವಾಗಿ ಮಾಡಿದ ದ್ರೋಹದ ನಿಮಿತ್ತ ನಿನ್ನಿಂದ ದೇಶದೇಶಗಳಿಗೆ ತಳ್ಳಲ್ಪಟ್ಟು ದೂರದಲ್ಲಿಯೂ, ಸಮೀಪದಲ್ಲಿಯೂ ಚದರಿರುವ ಎಲ್ಲಾ ಇಸ್ರಾಯೇಲರೂ ನಾಚಿಕೆಗೆ ಈಡಾಗಿದ್ದಾರೆ.


ಆಗ ನಾನು, “ಅಯ್ಯೋ, ನನ್ನ ಗತಿಯನ್ನು ಏನು ಹೇಳಲಿ ನಾಶವಾದೆನಲ್ಲಾ! ನಾನು ಹೊಲಸು ತುಟಿಯವನು. ಹೊಲಸು ತುಟಿಯವರ ಮಧ್ಯದಲ್ಲಿ ವಾಸಿಸುವವನು. ಇಂಥ ನನ್ನ ಕಣ್ಣುಗಳು ರಾಜಾಧಿರಾಜನನ್ನು, ಸೇನಾಧೀಶ್ವರನಾದ ಯೆಹೋವನನ್ನು ಕಂಡೆವಲ್ಲಾ!” ಎಂದು ಕೂಗಿಕೊಳ್ಳಲು,


ಯೆಹೋವನು ಭೂಮಂಡಲವನ್ನು ನಡುಗಿಸಲು ಏಳುವಾಗ, ಆತನ ಭಯಂಕರಕ್ಕೂ, ಅತ್ಯುನ್ನತ ಮಹಿಮೆಗೂ ಹೆದರಿ ಬಂಡೆಗಳ ಸಂದುಗೊಂದುಗಳಲ್ಲಿಯೂ, ಚೂಪಾದ ಶಿಖರಗಳ ಕಡಿದಾದ ಸ್ಥಳಗಳಿಗೂ ನುಗ್ಗುವರು.


ಸ್ತ್ರೀಯರಲ್ಲಿ ಅತಿ ಸುಂದರವಾದ ಹೆಣ್ಣು ನೀನು, ನಿನಗಿದು ಗೊತ್ತಿಲ್ಲವಾದರೆ ಹಿಂಡಿನ ಹೆಜ್ಜೆಯ ಜಾಡನ್ನು ಹಿಡಿದು ಹೋಗಿ, ಕುರುಬರ ಗುಡಾರಗಳ ಬಳಿಯಲ್ಲಿ ನಿನ್ನ ಮೇಕೆಮರಿಗಳನ್ನು ಮೇಯಿಸು.


ದುಷ್ಟರ ಯಜ್ಞ ಯೆಹೋವನಿಗೆ ಅಸಹ್ಯ, ಶಿಷ್ಟರ ಬಿನ್ನಹ ಆತನಿಗೆ ಇಷ್ಟ.


ನೀನು ಸೈನ್ಯವನ್ನು ಕೂಡಿಸುವ ದಿನದಲ್ಲಿ, ನಿನ್ನ ಪ್ರಜೆಗಳು ಸಂತೋಷದಿಂದ ತಾವಾಗಿಯೇ ಸೇರಿಕೊಳ್ಳುವರು. ಪರಿಶುದ್ಧ ವಸ್ತ್ರಭೂಷಿತರಾದ ನಿನ್ನ ಯುವ ಸೈನಿಕರು, ಉದಯಕಾಲದ ಇಬ್ಬನಿಯಂತಿರುವರು.


ನಿನ್ನ ಬೆಳವಕ್ಕಿಯ ಜೀವವನ್ನು ಕಾಡುಮೃಗಕ್ಕೆ ಕೊಡಬೇಡ; ನಿನ್ನ ದೀನಮಂಡಲಿಯನ್ನು ಸದಾ ಮರೆಯಬೇಡ.


ನೀವು ಕುರಿಹಟ್ಟಿಗಳಲ್ಲಿ ಮಲಗಿಕೊಂಡಿರುವುದೇನು? ಪಾರಿವಾಳದ ರೆಕ್ಕೆಗಳು ಬೆಳ್ಳಿಯಿಂದಲೂ, ಅದರ ಗರಿಗಳು ಬಂಗಾರದಿಂದಲೂ ಥಳಥಳಿಸುತ್ತವೆ.


ಯಾರು ಸ್ತುತಿಯಜ್ಞವನ್ನು ಸಮರ್ಪಿಸುತ್ತಾರೋ ಅವರೇ ನನ್ನನ್ನು ಗೌರವಿಸುವವರು; ತಮ್ಮ ನಡತೆಯನ್ನು ಸರಿಪಡಿಸಿಕೊಳ್ಳುವವರಿಗೆ ನನ್ನ ವಿಶೇಷವಾದ ರಕ್ಷಣೆಯನ್ನು ತೋರಿಸುವೆನು.”


ಆಗ ರಾಜನು ನಿನ್ನ ಲಾವಣ್ಯವನ್ನು ನೋಡಲು ಅಪೇಕ್ಷಿಸುವನು. ಆತನೇ ನಿನಗೆ ಒಡೆಯನು; ಆತನನ್ನು ಗೌರವಿಸು.


ಇಸ್ರಾಯೇಲರ ಸ್ತೋತ್ರಸಿಂಹಾಸನದಲ್ಲಿ ಇರುವಾತನೇ, ನೀನು ಪವಿತ್ರಸ್ವರೂಪನು.


ನಾನು ಕರೆದಾಗ ಆತನು ನನಗೆ ಕಾಣಿಸಿಕೊಂಡಿದ್ದರೂ, ನನ್ನ ವಿಜ್ಞಾಪನೆಯನ್ನು ಲಾಲಿಸುವನೆಂದು ನಂಬುತ್ತಿರಲಿಲ್ಲ.


ತೂರ್ ಸಂಸ್ಥಾನದವರು ಕಾಣಿಕೆಗಳೊಂದಿಗೆ ಬರುವರು; ಪ್ರಜೆಗಳಲ್ಲಿ ಐಶ್ವರ್ಯವಂತರು ನಿನ್ನ ದಯೆಯನ್ನು ಕೋರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು