Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 2:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆತನ ಎಡಗೈ ನನಗೆ ತಲೆದಿಂಬಾಗಿದ್ದರೆ, ಆತನ ಬಲಗೈ ನನ್ನನ್ನು ಆಲಂಗಿಸಿದರೆ ನನಗೆ ಪರಮಾನಂದ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆತನ ಎಡಗೈ ನನಗೆ ತಲೆದಿಂಬಾಗಿದ್ದರೆ ಆತನ ಬಲಗೈ ನನ್ನನ್ನು ಆಲಂಗಿಸಿದರೆ ಎಷ್ಟು ಚೆನ್ನಾಗಿರುತ್ತಿತ್ತು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅವನ ಎಡಗೈ ನನಗೆ ತಲೆಗಿಂಬಾಗಿ ಬಲಗೈ ತಬ್ಬುವದಾದರೆ ಎಷ್ಟೋ ಸಂತೋಷ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನನ್ನ ಪ್ರಿಯನ ಎಡಗೈ ತಲೆದಿಂಬಾಗಿ ಅವನ ಬಲಗೈ ನನ್ನನ್ನು ತಬ್ಬಿಕೊಳ್ಳುವುದು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅವನ ಎಡಗೈ ನನ್ನ ತಲೆದಿಂಬಾಗಿರಲಿ. ಅವನ ಬಲಗೈ ನನ್ನನ್ನು ಅಪ್ಪಿಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 2:6
9 ತಿಳಿವುಗಳ ಹೋಲಿಕೆ  

ನಿನ್ನ ದೇವರಾದ ಯೆಹೋವನು ನಿನ್ನ ಮಧ್ಯದಲ್ಲಿ ಶೂರನಾಗಿದ್ದಾನೆ, ನಿನ್ನನ್ನು ರಕ್ಷಿಸುವನು; ನಿನ್ನಲ್ಲಿ ಉಲ್ಲಾಸಿಸೇ ಉಲ್ಲಾಸಿಸುವನು; ತನ್ನ ಪ್ರೀತಿಯಲ್ಲಿ ನಿನ್ನ ಜೀವನವನ್ನು ನೂತನಗೊಳಿಸುವನು; ನಿನ್ನಲ್ಲಿ ಆನಂದಿಸಿ ಹರ್ಷಧ್ವನಿಗೈಯುವನು.


ನಾನು ಅವರ ಹಿತವನ್ನು ಬಯಸುತ್ತಾ ಅವರಲ್ಲಿ ಆನಂದಿಸುವೆನು, ನಿಶ್ಚಯವಾಗಿ ಅವರನ್ನು ಈ ದೇಶದಲ್ಲಿ ನನ್ನ ಪೂರ್ಣವಾದ ಹೃದಯದಿಂದಲೂ, ಮನಸ್ಸಿನಿಂದಲೂ ಸ್ಥಾಪಿಸುವೆನು.”


ಮದಲಗಿತ್ತಿಯುಳ್ಳವನೇ ಮದಲಿಂಗನು. ಆದರೂ ಮದಲಿಂಗನ ಗೆಳೆಯನು ಅವನ ಹತ್ತಿರ ನಿಂತುಕೊಂಡು ಅವನ ಮಾತುಗಳನ್ನು ಕೇಳಿ ಮದಲಿಂಗನ ಧ್ವನಿಗೆ ಬಹು ಸಂತೋಷಪಡುತ್ತಾನಲ್ಲವೇ. ಆದಕಾರಣ ಈ ನನ್ನ ಸಂತೋಷವು ಪರಿಪೂರ್ಣವಾಯಿತು.


ಜ್ಞಾನವೆಂಬಾಕೆಯು ಶ್ರೇಷ್ಠಳು ಎಂದು ನೀನು ಭಾವಿಸಿದರೆ ಆಕೆಯು ನಿನ್ನನ್ನು ಉನ್ನತಿಗೆ ತರುವಳು, ಆಕೆಯನ್ನು ಅಪ್ಪಿಕೊಂಡರೆ ನಿನ್ನನ್ನು ಘನಪಡಿಸುವಳು.


ಯೆರೂಸಲೇಮಿನ ಮಹಿಳೆಯರೇ, ಆತನು ತಾನಾಗಿ ಎಚ್ಚರಗೊಳ್ಳುವವರೆಗೆ ಯಾರೂ ನನ್ನ ಪ್ರಿಯನನ್ನು ಎಚ್ಚರಿಸದಿರಿ, ಆತನ ವಿಶ್ರಾಂತಿಗೆ ಯಾರೂ ಭಂಗ ಮಾಡದಿರಿ ಎಂದು ವನದ ಜಿಂಕೆ ಹರಿಣಗಳ ಮೇಲೆ ನಿಮ್ಮಿಂದ ಪ್ರಮಾಣಮಾಡಿಸುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು