Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 3:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಾನು, “ಎದ್ದು ಊರಿನಲ್ಲಿ ತಿರುಗುವೆನು, ಬೀದಿಗಳಲ್ಲಿಯೂ, ಚೌಕಗಳಲ್ಲಿಯೂ ನನ್ನ ಪ್ರಾಣಪ್ರಿಯನನ್ನು ಹುಡುಕುವೆನು” ಅಂದುಕೊಂಡೆನು, ಎಷ್ಟು ಹುಡುಕಿದರೂ ಸಿಕ್ಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಎದ್ದು ಊರೆಲ್ಲಾ ಅಲೆದಾಡಿದೆ ಬೀದಿಗಳಲ್ಲಿ, ಚೌಕಗಳಲ್ಲಿ ಹುಡುಕಾಡಿದೆ. ಹುಡುಕಿ ಹುಡುಕಿ ಸಿಗಲಾರದೆ ಬೇಸತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನಾನು ಎದ್ದು ಊರಲ್ಲಿ ತಿರುಗುವೆನು, ಬೀದಿಗಳಲ್ಲಿಯೂ ಚೌಕಗಳಲ್ಲಿಯೂ ನನ್ನ ಪ್ರಾಣಪ್ರಿಯನನ್ನು ಹುಡುಕುವೆನು ಎಂದುಕೊಂಡೆನು; ಎಷ್ಟು ಹುಡುಕಿದರೂ ಸಿಕ್ಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಈಗ ನಾನು ಎದ್ದು ನಗರದಲ್ಲೆಲ್ಲಾ ಸುತ್ತಾಡುವೆನು. ನನ್ನ ಪ್ರಿಯನಿಗಾಗಿ ಬೀದಿಗಳಲ್ಲಿಯೂ ಚೌಕಗಳಲ್ಲಿಯೂ ಹುಡುಕುವೆನು. ನಾನು ಅವನಿಗಾಗಿ ಹುಡುಕಿದೆ, ಆದರೆ ಅವನು ಸಿಕ್ಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನಾನು ಎದ್ದು, ಪಟ್ಟಣವನ್ನು ಸಂಚರಿಸಿ, ಬೀದಿಗಳಲ್ಲಿಯೂ, ಮಾರ್ಗಗಳಲ್ಲಿಯೂ ನನ್ನ ಪ್ರಾಣ ಪ್ರಿಯನನ್ನು ಹುಡುಕಾಡಿದೆನು. ಅವನನ್ನು ಎಷ್ಟು ಹುಡುಕಿದರೂ ಅವನು ಸಿಗಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 3:2
18 ತಿಳಿವುಗಳ ಹೋಲಿಕೆ  

ಆದ್ದರಿಂದ, “ನಿದ್ರೆ ಮಾಡುವವನೇ, ಎಚ್ಚರವಾಗು! ಸತ್ತವರನ್ನು ಬಿಟ್ಟು ಏಳು! ಆಗ ಕ್ರಿಸ್ತನು ನಿನ್ನಲ್ಲಿ ಪ್ರಕಾಶಿಸುವನು” ಎಂದು ಹೇಳಿಯದೆಯಲ್ಲಾ.


ಗಂಭೀರವಾಗಿ ಯೋಚಿಸಿರಿ! ನೀತಿವಂತರಾಗಿ ಎಚ್ಚರದಿಂದಿರಿ. ಪಾಪಮಾಡಬೇಡಿರಿ. ಕೆಲವರಿಗೆ ದೇವರ ಕುರಿತಾಗಿ ಜ್ಞಾನವೇ ಇಲ್ಲ; ನಿಮಗೆ ನಾಚಿಕೆ ಆಗಲೆಂದೇ ಇದನ್ನು ಹೇಳುತ್ತಿದ್ದೇನೆ.


ಈಗಿನ ಕಾಲವು ನಿದ್ದೆಯಿಂದ ಎಚ್ಚರವಾಗಿರತಕ್ಕ ಕಾಲವೆಂದು ಅರಿತು ಇದನ್ನೆಲ್ಲಾ ಮಾಡಿರಿ. ನಾವು ಕ್ರಿಸ್ತನನ್ನು ಮೊದಲು ನಂಬಿದ ಕಾಲದಲ್ಲಿ ಇದ್ದುದಕ್ಕಿಂತ ಈಗ ನಮ್ಮ ವಿಮೋಚನೆಯ ಕಾಲವು ಹತ್ತಿರವಾಗಿದೆ.


ದೇವರು ಕಳುಹಿಸಿದ ಒಬ್ಬ ಮನುಷ್ಯನು ಬಂದನು. ಅವನ ಹೆಸರು ಯೋಹಾನನು.


ಯೆರೂಸಲೇಮಿನ ಬೀದಿಗಳಲ್ಲಿ ಅತ್ತಿತ್ತ ಓಡಾಡುತ್ತಾ ಅಲ್ಲಿನ ಚೌಕಗಳಲ್ಲಿ ಹುಡುಕಿರಿ; ನ್ಯಾಯವನ್ನು ಕೈಕೊಂಡು ಸತ್ಯವನ್ನು ಅನುಸರಿಸುವ ಒಬ್ಬನಾದರೂ ಇದ್ದಾನೋ? ಇಂತಹ ಸತ್ಪುರುಷನನ್ನು ಕಂಡುಕೊಳ್ಳಬಹುದೇ ಎಂಬುದನ್ನು ನೋಡಿ ನಿಶ್ಚಯಿಸಿರಿ; ಸಿಕ್ಕಿದರೆ ನಾನು ಪಟ್ಟಣವನ್ನು ಕ್ಷಮಿಸುವೆನು.


ಈಗ ನಿನ್ನ ಹೆಸರೆತ್ತಿ ಪ್ರಾರ್ಥಿಸಿ, ನಿನ್ನನ್ನು ಆಶ್ರಯಿಸಲು ತ್ರಾಣ ತಂದುಕೊಳ್ಳುವವನು ಎಲ್ಲಿಯೂ ಇಲ್ಲ; ನೀನು ನಮಗೆ ವಿಮುಖನಾಗಿ ನಮ್ಮನ್ನು ನಮ್ಮ ಅಪರಾಧಗಳಿಗೆ ವಶಮಾಡಿದ್ದಿಯಲ್ಲಾ.


ನಾನೆದ್ದು ನನ್ನ ನಲ್ಲನಿಗೆ ಬಾಗಿಲು ತೆರೆಯಲು ಅಗುಳಿಯ ಮೇಲೆ ಕೈಯಿಟ್ಟೆನು, ನನ್ನ ಕೈಗಳಿಂದ ರಕ್ತಬೋಳವು, ನನ್ನ ಬೆರಳುಗಳಿಂದ ಅಚ್ಚರಕ್ತಬೋಳವು ತೊಟ್ಟಿಕ್ಕಿತು.


ನನ್ನ ದ್ವಾರಗಳ ಬಳಿಯಲ್ಲಿ ಪ್ರತಿದಿನವೂ ಕಾಯುತ್ತಾ ಬಾಗಿಲಿನ ನಿಲವುಗಳ ಹತ್ತಿರವಿದ್ದು, ಜಾಗರೂಕನಾಗಿ ನನ್ನ ಮಾತುಗಳನ್ನು ಕೇಳುವವನು ಭಾಗ್ಯವಂತನು.


ಊರಿನಲ್ಲಿ ತಿರುಗುವ ಕಾವಲುಗಾರರ ಕೈಗೆ ಸಿಕ್ಕಿದೆನು, “ನನ್ನ ಪ್ರಾಣಪ್ರಿಯನನ್ನು ಕಂಡಿರಾ?” ಎಂದು ಅವರನ್ನು ವಿಚಾರಿಸಿದೆನು.


ನನ್ನ ಪ್ರಾಣಪ್ರಿಯನೇ, ನಿನ್ನ ಮಂದೆಯನ್ನು ಎಲ್ಲಿ ಮೇಯಿಸುವೆ? ನಡುಹಗಲಲ್ಲಿ ನಿನ್ನ ಮಂದೆಯು ಎಲ್ಲಿ ವಿಶ್ರಮಿಸುತ್ತಾರೆ? ಹೇಳು. ನಾನೇಕೆ ಅಲೆಮಾರಿಗಳಂತೆ ನಿನ್ನ ಗೆಳೆಯರ ಮಂದೆಗಳ ಹತ್ತಿರ ಅಲೆಯಬೇಕು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು