Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 3:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅದೋ, ನೋಡು ಸೊಲೊಮೋನನ ಪಲ್ಲಕ್ಕಿ, ಇಸ್ರಾಯೇಲಿನ ಶೂರರಲ್ಲಿ ಅರುವತ್ತು ಜನರು ಅದರ ಸುತ್ತಲಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7-8 ಇದೋ, ನೋಡು ಸೊಲೊಮೋನನ ಪಲ್ಲಕ್ಕಿ ಅದರ ಸುತ್ತ ಇಸ್ರಯೇಲಿನ ಶೂರರು ಅರವತ್ತು ಮಂದಿ ಯುದ್ಧಪ್ರವೀಣರಾದ ಅವರಾಗಿಹರು ಶಸ್ತ್ರಧಾರಿ ಕತ್ತಿಯ ಕಟ್ಟಿಹರು ಪ್ರತಿಯೊಬ್ಬರು ಸೊಂಟಕ್ಕೆ ಕತ್ತಲ ದುರಂತಗಳನ್ನು ಎದುರಿಸಲಿಕ್ಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನೋಡು, ಅದು ಸೊಲೊಮೋನನ ಪಾಲಕಿ; ಇಸ್ರಾಯೇಲಿನ ಶೂರರಲ್ಲಿ ಅರುವತ್ತು ಮಂದಿ ಅದರ ಸುತ್ತಲಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನೋಡಿ, ಅದು ಸೊಲೊಮೋನನ ಪಲ್ಲಕ್ಕಿ. ಅದರ ಸುತ್ತಲೂ ಅರವತ್ತು ಮಂದಿ ಸೈನಿಕರಿದ್ದಾರೆ. ಅವರು ಇಸ್ರೇಲಿನ ಸೈನಿಕರು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನೋಡಿರಿ! ಇದು ಸೊಲೊಮೋನನ ರಥ. ಇಸ್ರಾಯೇಲಿನ ಪರಾಕ್ರಮಶಾಲಿಗಳಲ್ಲಿ ಅರವತ್ತು ಮಂದಿ ಅದರ ಸುತ್ತಲಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 3:7
12 ತಿಳಿವುಗಳ ಹೋಲಿಕೆ  

ಈ ಎಲ್ಲಾ ದೇವದೂತರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿಸಲ್ಪಟ್ಟ ಸೇವಕಾತ್ಮಗಳಲ್ಲವೋ?


ಆ ಪಲ್ಲಕ್ಕಿಯನ್ನು ರಾಜನಾದ ಸೊಲೊಮೋನನು ಲೆಬನೋನಿನ ಮರದಿಂದ ಮಾಡಿಸಿದ್ದಾನೆ.


ಆಹಾ, ಎನ್ನಿನಿಯನೇ, ನೀನೆಷ್ಟು ಸುಂದರ, ನೀನೆಷ್ಟು ಮನೋಹರ! ಹಚ್ಚ ಹಸಿರು ಚಿಗುರುಗಳು ನಮ್ಮ ಮಂಚ,


“ಯೆಹೋವನೇ, ಇವನು ನೋಡುವಂತೆ ಇವನ ಕಣ್ಣುಗಳನ್ನು ತೆರೆ” ಎಂದು ಪ್ರಾರ್ಥಿಸಲು ಯೆಹೋವನು ಅವನ ಕಣ್ಣುಗಳನ್ನು ತೆರೆದನು. ಆಗ ಎಲೀಷನ ರಕ್ಷಣೆಗಾಗಿ ಸುತ್ತಣ ಗುಡ್ಡಗಳಲ್ಲಿ ಬಂದು ನಿಂತಿದ್ದ ಅಗ್ನಿಮಯವಾದ ರಥಾರಥಾಶ್ವಗಳು ಆ ಸೇವಕನಿಗೆ ಕಂಡವು.


ಅರಸನಾದ ರೆಹಬ್ಬಾಮನು ಅವುಗಳಿಗೆ ಬದಲಾಗಿ ತಾಮ್ರದ ಗುರಾಣಿಗಳನ್ನು ಮಾಡಿಸಿ, ಅವುಗಳನ್ನು ಅರಮನೆಯ ದ್ವಾರಪಾಲಕರಾಗಿದ್ದ ಮೈಗಾವಲಿನವರ ದಳವಾಯಿಗಳಿಗೆ ಒಪ್ಪಿಸಿದನು.


ಆದರೆ ಅವನು ಇಸ್ರಾಯೇಲರನ್ನು ಬಿಟ್ಟೀಹಿಡಿಯಲಿಲ್ಲ. ಅವರನ್ನು ಸೈನಿಕರನ್ನಾಗಿಯೂ, ಪರಿವಾರದವರನ್ನಾಗಿಯೂ ಅಧಿಪತಿಗಳನ್ನಾಗಿಯೂ, ಸರದಾರರನ್ನಾಗಿಯೂ, ರಥಾಶ್ವಬಲಗಳ ನಾಯಕರನ್ನಾಗಿಯೂ ನೇಮಿಸಿಕೊಂಡನು.


“ಹೌದು ನಿನ್ನ ದಾಸನ ಸಾಹಸವು ಗೊತ್ತಾಗುವುದು” ಅಂದನು. ಆಕೀಷನು ಅವನಿಗೆ, “ಹಾಗಾದರೆ ಯುದ್ಧಕಾಲದಲ್ಲೆಲ್ಲಾ ನಿನ್ನನ್ನೇ ನನ್ನ ಮೈಗಾವಲಿಗೆ ನೇಮಿಸಿಕೊಳ್ಳುವೆನು” ಅಂದನು.


ಸೌಲನ ಜೀವಮಾನದಲ್ಲೆಲ್ಲಾ ಫಿಲಿಷ್ಟಿಯರಿಗೂ ಇಸ್ರಾಯೇಲರಿಗೂ ಘೋರ ಯುದ್ಧವಾಗುತ್ತಿದ್ದುದ್ದರಿಂದ ಅವನು ಎಲ್ಲಿಯಾದರೂ ಒಬ್ಬ ಬಲಿಷ್ಠನೂ ಪರಾಕ್ರಮಶಾಲಿಯೂ ಆದ ಮನುಷ್ಯನನ್ನು ಕಂಡರೆ, ಕೂಡಲೆ ಅವನನ್ನು ತನ್ನ ಹತ್ತಿರ ಇಟ್ಟುಕೊಳ್ಳುತ್ತಿದ್ದನು.


ನಿಮ್ಮ ದಾಸದಾಸಿಯರನ್ನೂ, ಉತ್ತಮವಾದ ಎತ್ತು ಕತ್ತೆಗಳನ್ನೂ ತನ್ನ ಕೆಲಸ ಮಾಡುವುದಕ್ಕಾಗಿ ತೆಗೆದುಕೊಳ್ಳುವನು.


ವರ್ತಕರು ಮಾರುವ ಸಕಲ ಸುಗಂಧತೈಲಗಳಿಂದ, ರಸಗಂಧ, ಸಾಂಬ್ರಾಣಿಧೂಪ ಮುಂತಾದ ದ್ರವ್ಯಗಳಿಂದ ಧೂಮಸ್ತಂಭಗಳೋಪಾದಿಯಲ್ಲಿ ಹೊರಹೊಮ್ಮುತ್ತಿರುವ, ಅರಣ್ಯಮಾರ್ಗವಾಗಿ ಬರುತ್ತಿರುವ ಈ ಮೆರವಣಿಗೆ ಯಾರದು?


ಯುದ್ಧಪ್ರವೀಣರಾದ ಇವರೆಲ್ಲರೂ ಕೈಯಲ್ಲಿ ಕತ್ತಿಯನ್ನು ಹಿಡಿದಿದ್ದಾರೆ. ರಾತ್ರಿಯ ಅಪಾಯದ ನಿಮಿತ್ತ ಪ್ರತಿಯೊಬ್ಬನೂ ಸೊಂಟಕ್ಕೆ ಕತ್ತಿ ಕಟ್ಟಿಕೊಂಡಿದ್ದಾನೆ.


ಆಗ ನಾನು ಜನರಿಗೆ ಕತ್ತಿ, ಬಿಲ್ಲು, ಬರ್ಜಿಗಳನ್ನು ಹಿಡಿದುಕೊಂಡು ಗೋಡೆಯ ಹಿಂದಣ ತಗ್ಗಾದ ಬಯಲುಗಳಲ್ಲಿ ಗೋತ್ರಗೋತ್ರಗಳಾಗಿ ನಿಲ್ಲಬೇಕೆಂದು ಆಜ್ಞಾಪಿಸಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು