Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 4:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಪ್ರಿಯಳೇ, ವಧುವೇ, ನಿನ್ನ ಪ್ರೀತಿ ಅದೆಷ್ಟೋ ರಮ್ಯ! ನಿನ್ನ ಪ್ರೇಮ ದ್ರಾಕ್ಷಾರಸಕ್ಕಿಂತ ಎಷ್ಟೋ ಉತ್ತಮ! ನಿನ್ನ ತೈಲದ ಪರಿಮಳ ಸಕಲಸುಗಂಧ ದ್ರವ್ಯಗಳಿಗಿಂತ ಎಷ್ಟೋ ಮನೋಹರ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ನನ್ನ ಪ್ರಿಯಳೇ, ನನ್ನ ವಧುವೇ, ನಿನ್ನ ಪ್ರೀತಿ ಎಷ್ಟೋ ರಮ್ಯ ! ನಿನ್ನ ಪ್ರೇಮ ಮಧುಪಾನಕ್ಕಿಂತ ಎಷ್ಟೋ ಮಧುರ ! ನಿನ್ನ ತೈಲದ ಪರಿಮಳ ಸುಗಂಧ ದ್ರವ್ಯಗಳಿಗಿಂತ ಎಷ್ಟೋ ಮನೋಹರ !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಪ್ರಿಯಳೇ, ವಧುವೇ, ನಿನ್ನ ಪ್ರೀತಿಯು ಎಷ್ಟೋ ರಮ್ಯ! ನಿನ್ನ ಪ್ರೇಮವು ದ್ರಾಕ್ಷಾರಸಕ್ಕಿಂತ ಎಷ್ಟೋ ಮೇಲು! ನಿನ್ನ ತೈಲದ ಪರಿಮಳವು ಸಕಲಸುಗಂಧ ದ್ರವ್ಯಗಳಿಗಿಂತ ಎಷ್ಟೋ ಮನೋಹರ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನನ್ನ ಪ್ರಿಯಳೇ, ನನ್ನ ವಧುವೇ, ನಿನ್ನ ಪ್ರೀತಿಯು ಎಷ್ಟೋ ರಮ್ಯ! ನಿನ್ನ ಪ್ರೀತಿಯು ದ್ರಾಕ್ಷಾರಸಕ್ಕಿಂತಲೂ ಎಷ್ಟೋ ಉತ್ತಮ! ನಿನ್ನ ತೈಲದ ಪರಿಮಳವು ಸಕಲ ಬಗೆಯ ಸುಗಂಧ ದ್ರವ್ಯಗಳಿಗಿಂತಲೂ ಉತ್ತಮ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನನ್ನ ಪ್ರಿಯಳೇ, ವಧುವೇ! ನಿನ್ನ ಪ್ರೀತಿಯು ಎಷ್ಟೋ ಚೆಂದ. ನಿನ್ನ ಪ್ರೀತಿಯು ದ್ರಾಕ್ಷಾರಸಕ್ಕಿಂತ ಎಷ್ಟೋ ಉತ್ತಮ! ಎಲ್ಲಾ ಸುಗಂಧಗಳಿಗಿಂತ ನಿನ್ನ ತೈಲದ ಸುವಾಸನೆಯು ಎಷ್ಟೋ ಉತ್ತಮ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 4:10
10 ತಿಳಿವುಗಳ ಹೋಲಿಕೆ  

ಆದರೆ ದೇವರಾತ್ಮನಿಂದ ಉಂಟಾಗುವ ಫಲವೇನಂದರೆ, ಪ್ರೀತಿ, ಸಂತೋಷ, ಸಮಾಧಾನ, ದೀರ್ಘಶಾಂತಿ, ದಯೆ, ಪರೋಪಕಾರ, ನಂಬಿಕೆ,


ಪ್ರೇಯಸಿಯೇ, ಸಕಲ ಸೌಂದರ್ಯ ಸೊಬಗಿನಿಂದ ನೀನೆಷ್ಟು ಸುಂದರ, ನೀನೆಷ್ಟು ಮನೋಹರ!


ಬೇಕಾದದ್ದೆಲ್ಲಾ ನನಗುಂಟು, ಸಮೃದ್ಧಿಹೊಂದಿದ್ದೇನೆ. ಎಪಫ್ರೊದೀತನ ಕೈಯಿಂದ ನೀವು ಕೊಟ್ಟು ಕಳುಹಿಸಿದ್ದು ನನಗೆ ತಲುಪಲಾಗಿ ನಾನು ತುಂಬಿತುಳುಕಿದವನಾಗಿದ್ದೇನೆ. ಅದು ದೇವರಿಗೆ ಮೆಚ್ಚಿಕೆಯಾದದ್ದು, ಸುಗಂಧವಾಸನೆಯೇ, ಇಷ್ಟ ಯಜ್ಞವೇ.


ನಾನೆದ್ದು ನನ್ನ ನಲ್ಲನಿಗೆ ಬಾಗಿಲು ತೆರೆಯಲು ಅಗುಳಿಯ ಮೇಲೆ ಕೈಯಿಟ್ಟೆನು, ನನ್ನ ಕೈಗಳಿಂದ ರಕ್ತಬೋಳವು, ನನ್ನ ಬೆರಳುಗಳಿಂದ ಅಚ್ಚರಕ್ತಬೋಳವು ತೊಟ್ಟಿಕ್ಕಿತು.


ವರ್ತಕರು ಮಾರುವ ಸಕಲ ಸುಗಂಧತೈಲಗಳಿಂದ, ರಸಗಂಧ, ಸಾಂಬ್ರಾಣಿಧೂಪ ಮುಂತಾದ ದ್ರವ್ಯಗಳಿಂದ ಧೂಮಸ್ತಂಭಗಳೋಪಾದಿಯಲ್ಲಿ ಹೊರಹೊಮ್ಮುತ್ತಿರುವ, ಅರಣ್ಯಮಾರ್ಗವಾಗಿ ಬರುತ್ತಿರುವ ಈ ಮೆರವಣಿಗೆ ಯಾರದು?


ರಾಜನು ಔತಣದಲ್ಲಿದ್ದಾಗ ಇತ್ತ ನನ್ನ ಸುಗಂಧತೈಲವು ಪರಿಮಳವನ್ನು ಬೀರುತ್ತಿತ್ತು.


ಅದನ್ನು ತೆಗೆದುಕೊಂಡಾಗ ಆ ನಾಲ್ಕು ಜೀವಿಗಳೂ ಇಪ್ಪತ್ನಾಲ್ಕು ಮಂದಿ ಹಿರಿಯರೂ ಕುರಿಮರಿಯಾದಾತನ ಪಾದಕ್ಕೆ ಅಡ್ಡ ಬಿದ್ದರು. ಹಿರಿಯರ ಕೈಗಳಲ್ಲಿ ವೀಣೆಗಳೂ ದೇವಜನರ ಪ್ರಾರ್ಥನೆಗಳೆಂಬ ಧೂಪದಿಂದ ತುಂಬಿದ್ದ ಚಿನ್ನದ ಧೂಪಾರತಿಗಳೂ ಇದ್ದವು.


ಪ್ರಿಯಳೇ, ವಧುವೇ, ನನ್ನ ಹೃದಯವನ್ನು ಅಪಹರಿಸಿರುವೆ ನಿನ್ನ ಒಂದು ಕುಡಿನೋಟದಿಂದ; ನನ್ನ ಹೃದಯವನ್ನು ವಶಮಾಡಿಕೊಂಡಿರುವೆ ನಿನ್ನ ಕಂಠಹಾರದ ಒಂದು ರತ್ನದಿಂದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು