Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 4:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಉತ್ತರದ ಗಾಳಿಯೇ ಏಳು, ದಕ್ಷಿಣದ ಗಾಳಿಯೇ ಬೀಸು! ನನ್ನ ತೋಟದ ಸುಗಂಧಗಳು ಹರಡುವ ಹಾಗೆ ಅದರ ಮೇಲೆ ಸುಳಿದಾಡು. ಎನ್ನಿನಿಯನು ತನ್ನ ತೋಟದೊಳಗೆ ಸೇರಿ ತನ್ನ ಉತ್ತಮ ಫಲಗಳನ್ನು ತಾನೇ ಭುಜಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಉತ್ತರದ ಗಾಳಿಯೇ ಏಳು ದಕ್ಷಿಣದ ಗಾಳಿಯೇ ಬೀಸು ನನ್ನ ತೋಟದ ಮೇಲೆ ಬಿರುಸಾಗಿ ಬೀಸು ಸುವಾಸನೆಯನ್ನು ದೂರದೂರ ಪಸರಿಸು. ಬರಲಿ ಎನ್ನಿನಿಯನು ನನ್ನ ತೋಟಕೆ ಅತ್ಯುತ್ತಮ ಫಲಗಳನು ತಾನೇ ಭುಜಿಸಲಿಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಬಡಗಣ ಗಾಳಿಯೇ ಬೀಸು, ತೆಂಕಣ ಗಾಳಿಯೇ ಬಾ! ನನ್ನ ತೋಟದ ಸುಗಂಧಗಳು ಹರಡುವ ಹಾಗೆ ಅದರ ಮೇಲೆ ಸುಳಿದಾಡು. ಎನ್ನಿನಿಯನು ತನ್ನ ತೋಟದೊಳಗೆ ಸೇರಿ ತನ್ನ ಉತ್ತಮ ಫಲಗಳನ್ನು ತಾನೇ ಭುಜಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಉತ್ತರದ ಗಾಳಿಯೇ, ಎಚ್ಚರವಾಗು! ದಕ್ಷಿಣದ ಗಾಳಿಯೇ, ಬಾ! ನನ್ನ ತೋಟದ ಮೇಲೆ ಬೀಸು. ಅದರ ಸುವಾಸನೆಯು ಹರಡಿಕೊಳ್ಳಲಿ. ನನ್ನ ಪ್ರಿಯನು ನನ್ನ ತೋಟವನ್ನು ಪ್ರವೇಶಿಸಲಿ. ಅವನು ಅದರ ರುಚಿಕರವಾದ ಹಣ್ಣನ್ನು ತಿನ್ನಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಉತ್ತರಗಾಳಿಯೇ, ಬೀಸು, ದಕ್ಷಿಣ ಗಾಳಿಯೇ ಬಾ ನನ್ನ ತೋಟದ ಮೇಲೆ ಬೀಸು. ಸುಗಂಧ ಸುವಾಸನೆ ಹರಡಲಿ. ನನ್ನ ಪ್ರಿಯನು ತನ್ನ ತೋಟಕ್ಕೆ ಬಂದು ಉತ್ತಮ ಫಲಗಳನ್ನು ರುಚಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 4:16
30 ತಿಳಿವುಗಳ ಹೋಲಿಕೆ  

ನನ್ನ ಕಾಂತನು ಉದ್ಯಾನವನಗಳಲ್ಲಿ ಮಂದೆಯನ್ನು ಮೇಯಿಸುತ್ತಾ, ನೆಲದಾವರೆಗಳನ್ನು ಕೊಯ್ಯಬೇಕೆಂದು ಸುಗಂಧಸಸ್ಯದ ಪಾತಿಗಳಿರುವ ತನ್ನ ತೋಟಕ್ಕೆ ಹೋಗಿದ್ದಾನೆ.


ಪ್ರಿಯಳೇ, ವಧುವೇ, ಇಗೋ ನಾ ಬಂದಿರುವೆ ನನ್ನ ತೋಟದೊಳಗೆ, ನನ್ನ ರಕ್ತಬೋಳ ಸುಗಂಧದ್ರವ್ಯಗಳನ್ನು ಕೂಡಿಸಿರುವೆ, ನನ್ನ ಜೇನುಗೂಡನ್ನೂ ಜೇನುತುಪ್ಪವನ್ನೂ ತಿಂದಿರುವೆ, ನನ್ನ ದ್ರಾಕ್ಷಾರಸವನ್ನೂ ಹಾಲನ್ನೂ ಕುಡಿದಿರುವೆ. ಮಿತ್ರರೇ, ತಿನ್ನಿರಿ. ಪ್ರಿಯರೇ ಕುಡಿಯಿರಿ, ಬೇಕಾದಷ್ಟು ಪಾನಮಾಡಿರಿ.


ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮೀಕವಾದ ಮಂದಿರವಾಗುವುದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ. ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕವಾದ ಆತ್ಮೀಕ ಯಜ್ಞಗಳನ್ನು ಸಮರ್ಪಿಸುವುದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ.


ಆಗ ಆತನು ನನಗೆ, “ನರಪುತ್ರನೇ, ನೀನು ಶ್ವಾಸಕ್ಕೆ ನುಡಿ, ‘ಓ ಶ್ವಾಸವೇ,’ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನೀನು ಚತುರ್ದಿಕ್ಕುಗಳಿಂದ ಬೀಸಿ, ಈ ಹತಶರೀರಗಳು ಬದುಕುವಂತೆ ಅವುಗಳ ಮೇಲೆ ಊದು.’”


ನಾನು ಈ ಕೆಲಸವನ್ನು ಮುಗಿಸಿಕೊಂಡು ಈ ಪ್ರೀತಿಯ ಫಲವನ್ನು ಅಲ್ಲಿಯವರ ವಶಕ್ಕೆ ಸಂಪೂರ್ಣವಾಗಿ ಕೊಟ್ಟ ಮೇಲೆ ನಿಮ್ಮ ಮಾರ್ಗವಾಗಿ ಸ್ಪೇನ್ ದೇಶಕ್ಕೆ ಹೋಗುವೆನು.


ಹೀಗೆ ಪ್ರಾರ್ಥನೆ ಮಾಡಿದ ಕೂಡಲೇ ಅವರು ನೆರೆದಿದ್ದ ಸ್ಥಳವು ನಡುಗಿತು. ಅವರೆಲ್ಲರು ಪವಿತ್ರಾತ್ಮ ಭರಿತರಾಗಿ ದೇವರ ವಾಕ್ಯವನ್ನು ಧೈರ್ಯದಿಂದ ಹೇಳತೊಡಗಿದರು.


ಯೇಸು ಅವನಿಗೆ, “ಎದ್ದು ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ” ಎಂದು ಹೇಳಿದನು.


ಗಾಳಿಯು ಇಷ್ಟ ಬಂದ ಕಡೆ ಬೀಸುತ್ತದೆ. ನೀನು ಅದರ ಶಬ್ದವನ್ನು ಕೇಳುತ್ತೀ, ಆದರೆ ಅದು ಎಲ್ಲಿಂದ ಬರುತ್ತದೋ ಎಲ್ಲಿಗೆ ಹೋಗುತ್ತದೋ ನಿನಗೆ ತಿಳಿಯದು. ಆತ್ಮನಿಂದ ಹುಟ್ಟಿದವರೆಲ್ಲರೂ ಅದರಂತೆಯೇ” ಎಂದನು.


ಈಕೆಯು ಈ ತೈಲವನ್ನು ನನ್ನ ದೇಹದ ಮೇಲೆ ಸುರಿದದ್ದು ನನ್ನ ಉತ್ತರಕ್ರಿಯೆಗಾಗಿಯೇ.


ಯೇಸು ಅದನ್ನು ತಿಳಿದು ಅವರಿಗೆ, “ಈ ಸ್ತ್ರೀಗೆ ಏಕೆ ತೊಂದರೆ ಕೊಡುತ್ತಿದ್ದೀರಿ? ಈಕೆ ನನಗೆ ಒಳ್ಳೆಯ ಕಾರ್ಯವನ್ನು ಮಾಡಿದ್ದಾಳೆ.


ಆಹಾ, ನೀನು ಆಕಾಶವನ್ನು ಸೀಳಿ ಇಳಿದು ಬರಬಾರದೇ! ನಿನ್ನ ದರ್ಶನವು ಉಂಟಾಗಿ ಪರ್ವತಗಳು ಅಗಲಿದರೆ ಎಷ್ಟೋ ಒಳ್ಳೆಯದು!


ಸೊಲೊಮೋನನೇ, ಆ ಸಾವಿರ ಬೆಳ್ಳಿ ನಾಣ್ಯ ನಿನಗಿರಲಿ, ಅದರ ಮೇಲ್ವಿಚಾರಕರಿಗೆ ಇನ್ನೂರು ನಾಣ್ಯ ಸೇರಲಿ; ನನ್ನದೇ ಆಗಿರುವ ನನ್ನ ತೋಟವು ನನ್ನ ವಶದಲ್ಲಿಯೇ ಇದೆ.


ನನ್ನ ಪ್ರಿಯನು ಪುರುಷೋತ್ತಮನು ವನವೃಕ್ಷಗಳ ಮಧ್ಯೆ ಸೇಬಿನ ವೃಕ್ಷದಂತಿಹನು. ಅದರ ಫಲವು ನನ್ನ ನಾಲಿಗೆಗೆ ಸುಮಧುರ ನಾನು ಆತನ ನೆರಳಿನಲ್ಲಿ ಕುಳಿತು ಪರಮಾನಂದಗೊಂಡೆನು.


ನನ್ನನ್ನು ನಿನ್ನಡೆಗೆ ಸೆಳೆದುಕೋ; ನಿನ್ನ ಹಿಂದೆ ಓಡಿ ಬರುವೆನು; ರಾಜನು ನನ್ನನ್ನು ಅಂತಃಪುರಕ್ಕೆ ಬರಮಾಡಿದ್ದಾನೆ; ನಿನ್ನಲ್ಲಿ ಹರ್ಷಿಸಿ ಉಲ್ಲಾಸಿಸುವೆವು, ನಿನ್ನ ಪ್ರೀತಿಯು ದ್ರಾಕ್ಷಾರಸಕ್ಕಿಂತಲೂ ಉತ್ತಮವಾದುದು; ಸ್ತ್ರೀಯರು ನಿನ್ನನ್ನು ಯಥಾರ್ಥವಾಗಿ ಪ್ರೀತಿಸುವರು.


ಗಾಳಿಯು ದಕ್ಷಿಣದ ಕಡೆಗೆ ಬೀಸುತ್ತದೆ. ಉತ್ತರದ ಕಡೆಗೆ ತಿರುಗುವುದು. ಅದು ಸುತ್ತುತ್ತಾ ಸುತ್ತುತ್ತಾ ಹೋಗಿ, ಗಾಳಿ ಸುತ್ತಳತೆಯ ಪ್ರಕಾರ ಹಿಂದಿರುಗುತ್ತವೆ.


ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ಕುರಿತಾದ ಕೃಪೆಯಲ್ಲಿಯೂ ಜ್ಞಾನದಲ್ಲಿಯೂ ನೀವು ಅಭಿವೃದ್ಧಿ ಹೊಂದಿರಿ. ಆತನಿಗೆ ಈಗಲೂ ಸದಾಕಾಲವೂ ಮಹಿಮೆಯುಂಟಾಗಲಿ. ಆಮೆನ್.


ತೋಟಗಳನ್ನೂ ಮತ್ತು ಉದ್ಯಾನವನಗಳನ್ನೂ ಮಾಡಿಸಿ; ಅವುಗಳಲ್ಲಿ ಸಕಲ ವಿಧವಾದ ಫಲವೃಕ್ಷಗಳನ್ನು ನೆಟ್ಟೆನು.


ಎನ್ನಿನಿಯನು ನನ್ನ ಸ್ತನಗಳ ಮಧ್ಯದಲ್ಲಿನ ರಕ್ತಬೋಳದ ಚೀಲ;


ಅಗೋ ನನ್ನ ಕಾಂತನ ಸಪ್ಪಳ! ಅವನು ಬೆಟ್ಟಗಳ ಮೇಲೆ ಹಾರುತ್ತಾ, ಗುಡ್ಡಗಳಲ್ಲಿ ಜಿಗಿಯುತ್ತಾ ಬರುತ್ತಿದ್ದಾನೆ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು