Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 4:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಬಾ ವಧುವೇ, ಎನ್ನೊಂದಿಗೆ ಲೆಬನೋನಿನಿಂದ. ಬಾ ನನ್ನೊಂದಿಗೆ, ಲೆಬನೋನಿನಿಂದ, ಇಳಿದು ಬಾ ಅಮಾನದ ತುದಿಯಿಂದ, ಶೆನೀರ್ ಮತ್ತು ಹೆರ್ಮೋನ್ ಶಿಖರಗಳಿಂದ. ಹೊರಟು ಬಾ, ಸಿಂಹಗಳ ಗುಹೆಗಳಿಂದ ಚಿರತೆಗಳ ಗುಡ್ಡಗಳಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಬಾ, ವಧುವೆ, ಲೆಬನೋನಿನಿಂದ ಬಾ, ನನ್ನೊಡನೆ ಲೆಬನೋನಿನಿಂದ ಇಳಿದು ಬಾ ಅಮಾನದ ತುದಿಯಿಂದ ಶೆನೀರ್ ಮತ್ತು ಹೆರ್ಮೋನ್ ಶಿಖರಗಳಿಂದ. ಹೊರಟು ಬಾ ಸಿಂಹಗಳ ಗುಹೆಗಳಿಂದ ಚಿರತೆಗಳ ಗುಡ್ಡಗಳಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಎನ್ನೊಂದಿಗೆ ಲೆಬನೋನಿನಿಂದ ಬಾ! ವಧುವೇ, ಲೆಬನೋನಿನಿಂದ ನನ್ನೊಂದಿಗೆ ಬಾ! ಅಮಾನದ ತುದಿ, ಶೆನೀರ್ ಮತ್ತು ಹೆರ್ಮೋನ್ ಶಿಖರಗಳು, ಸಿಂಹಗಳ ಗವಿಗಳು, ಚಿರತೆಗಳ ಗುಡ್ಡಗಳು, ಇವುಗಳಿಂದ ಹೊರಟು ಬಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನನ್ನ ವಧುವೇ, ಲೆಬನೋನಿನಿಂದ ನನ್ನೊಂದಿಗೆ ಬಾ! ಲೆಬನೋನಿನಿಂದ ನನ್ನೊಂದಿಗೆ ಬಾ! ಅಮಾನದ ತುದಿಯಿಂದಲೂ ಶೆನೀರಿನ ತುದಿಯಿಂದಲೂ ಹೆರ್ಮೋನಿನ ತುದಿಯಿಂದಲೂ ಸಿಂಹದ ಗವಿಗಳಿಂದಲೂ ಚಿರತೆಗಳ ಬೆಟ್ಟಗಳಿಂದಲೂ ಬಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಬಾ, ವಧುವೇ, ಲೆಬನೋನಿನಿಂದ ಬಾ, ಲೆಬನೋನಿನಿಂದ ನನ್ನೊಡನೆ ಬಾ. ಅಮಾನದ ಶಿಖರಗಳಿಂದ, ಸೆನೀರ್, ಹೆರ್ಮೋನ್ ಶಿಖರಗಳಿಂದ, ಸಿಂಹದ ಗವಿಗಳಿಂದ, ಚಿರತೆಗಳ ಪರ್ವತಗಳಿಂದ ಇಳಿದು ಬಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 4:8
19 ತಿಳಿವುಗಳ ಹೋಲಿಕೆ  

(ಹೆರ್ಮೋನ್ ಪರ್ವತಕ್ಕೆ ಚೀದೋನ್ಯರು ಸಿರ್ಯೋನ್ ಎಂದೂ ಮತ್ತು ಅಮೋರಿಯರು ಸೆನೀರ್ ಎಂದೂ ಕರೆಯುತ್ತಿದ್ದರು.)


ಅಂಜೂರದ ಕಾಯಿಗಳು ಹಣ್ಣಾಗಿವೆ, ದ್ರಾಕ್ಷಿಯ ಬಳ್ಳಿಗಳು ಹೂಬಿಟ್ಟಿವೆ, ಅದರ ಪರಿಮಳವನ್ನು ಬೀರುತ್ತಿದೆ. ನನ್ನ ಪ್ರಿಯಳೇ, ಎನ್ನ ಸುಂದರಿಯೇ, ಎದ್ದು ನನ್ನೊಂದಿಗೆ ಬಾ!


ಎಲೌ ರಾಜಕುಮಾರಿಯೇ, ನನ್ನ ಮಾತನ್ನು ಕೇಳಿ ಆಲೋಚಿಸು; ಸ್ವಜನರನ್ನೂ ತೌರಮನೆಯನ್ನೂ ಮರೆತುಬಿಡು.


ಮನಸ್ಸೆ ಕುಲದ ಅರ್ಧಜನರು ಬಾಷಾನಿನಿಂದ ಬಾಳ್ ಹೆರ್ಮೋನ್, ಸೆನೀರ್, ಹೆರ್ಮೋನ್ ಗಿರಿ ಇವುಗಳ ವರೆಗೂ ವಿಸ್ತರಿಸಿಕೊಂಡಿರುವ ಪ್ರಾಂತ್ಯಗಳಲ್ಲಿ ವಾಸಿಸಿದರು.


ಯಾರಾದರೂ ನನ್ನ ಸೇವೆಯನ್ನು ಮಾಡುವವನಾದರೆ ನನ್ನನ್ನು ಹಿಂಬಾಲಿಸಲಿ, ಮತ್ತು ಎಲ್ಲಿ ನಾನು ಇರುತ್ತೇನೋ ಅಲ್ಲಿ ನನ್ನ ಸೇವಕನೂ ಸಹ ಇರುವನು. ಯಾರಾದರೂ ನನ್ನ ಸೇವೆಯನ್ನು ಮಾಡುವವನಾದರೆ ನನ್ನ ತಂದೆಯು ಅವನನ್ನು ಸನ್ಮಾನಿಸುವನು.


ಯುವಕನು ಯುವತಿಯನ್ನು ವರಿಸುವಂತೆ, ನಿನ್ನ ಮಕ್ಕಳು ನಿನ್ನನ್ನು ವರಿಸುವರು; ವರನು ವಧುವಿನಲ್ಲಿ ಆನಂದಿಸುವ ಹಾಗೆ ನಿನ್ನ ದೇವರು ನಿನ್ನಲ್ಲಿ ಆನಂದಿಸುವನು.


ಎನ್ನಿನಿಯನೇ, ವನಕ್ಕೆ ಹೋಗೋಣ ಬಾ, ಹಳ್ಳಿಗಳ ಮಧ್ಯದಲ್ಲಿ ವಾಸಮಾಡುವ!


ಪ್ರಿಯಳೇ, ವಧುವೇ, ಇಗೋ ನಾ ಬಂದಿರುವೆ ನನ್ನ ತೋಟದೊಳಗೆ, ನನ್ನ ರಕ್ತಬೋಳ ಸುಗಂಧದ್ರವ್ಯಗಳನ್ನು ಕೂಡಿಸಿರುವೆ, ನನ್ನ ಜೇನುಗೂಡನ್ನೂ ಜೇನುತುಪ್ಪವನ್ನೂ ತಿಂದಿರುವೆ, ನನ್ನ ದ್ರಾಕ್ಷಾರಸವನ್ನೂ ಹಾಲನ್ನೂ ಕುಡಿದಿರುವೆ. ಮಿತ್ರರೇ, ತಿನ್ನಿರಿ. ಪ್ರಿಯರೇ ಕುಡಿಯಿರಿ, ಬೇಕಾದಷ್ಟು ಪಾನಮಾಡಿರಿ.


ಮೂಢರೇ ಮೂಢತ್ವವನ್ನು ಬಿಟ್ಟು ಬಾಳಿರಿ, ವಿವೇಕಮಾರ್ಗದಲ್ಲಿ ನೆಟ್ಟಗೆ ನಡೆಯಿರಿ” ಎಂದು ಪ್ರಬೋಧಿಸುತ್ತಾಳೆ.


ನೀನು ತೇಜೋಮಯನು; ಕೊಳ್ಳೆಹೊಡೆದ ಬೆಟ್ಟಗಳಿಗಿಂತ ಘನ ಗಾಂಭೀರ್ಯಯುಳ್ಳವನು.


ದೇವರು ಯೆಹೂದ ದೇಶದಲ್ಲಿ ಪ್ರಸಿದ್ಧಗೊಂಡವನು; ಇಸ್ರಾಯೇಲರಲ್ಲಿ ಆತನ ನಾಮವು ದೊಡ್ಡದು.


ಅವನು ಲೆಬನೋನಿನ ದೇವದಾರು ವೃಕ್ಷ ಮೊದಲುಗೊಂಡು ಗೋಡೆಯಲ್ಲಿ ಬೆಳೆಯುವ ಹಿಸ್ಸೋಪ್ ಗಿಡದವರೆಗಿರುವ ಎಲ್ಲಾ ವನಸ್ಪತಿಗಳನ್ನೂ, ಎಲ್ಲಾ ಪಶುಪಕ್ಷಿ, ಜಲಚರಗಳು, ಕ್ರಿಮಿಕೀಟಗಳನ್ನೂ ಕುರಿತು ಪ್ರಸ್ತಾಪಿಸ ಬಲ್ಲವನಾಗಿದ್ದನು.


ಇಸ್ರಾಯೇಲ್ಯರು ಯೊರ್ದನ್ ನದಿಯ ಪೂರ್ವ ದಿಕ್ಕಿನಲ್ಲಿ ಅರ್ನೋನ್ ಕಣಿವೆ ಮೊದಲುಗೊಂಡು ಹೆರ್ಮೋನ್ ಪರ್ವತದವರೆಗಿದ್ದ ಪ್ರದೇಶವನ್ನೂ ಕಣಿವೆ ಪ್ರದೇಶದ ಪೂರ್ವಭಾಗವನ್ನೂ ಸ್ವಾಧೀನ ಮಾಡಿಕೊಂಡು ಅವುಗಳಲ್ಲಿದ್ದ ಅರಸರನ್ನು ಸಂಹರಿಸಿದರು.


ಕರ್ತನೇ, ನಾನೂ ಈ ನದಿಯನ್ನು ದಾಟಿ ಆಚೆಯಿರುವ ಒಳ್ಳೆಯ ದೇಶವನ್ನು ಅಂದರೆ ಆ ಅಂದವಾದ ಬೆಟ್ಟದ ಸೀಮೆಯನ್ನೂ, ಲೆಬನೋನ್ ಪರ್ವತವನ್ನೂ ನೋಡುವುದಕ್ಕೆ ಅಪ್ಪಣೆಯಾಗಲಿ” ಎಂದು ಬಿನ್ನವಿಸಿದೆನು.


ದಮಸ್ಕದ ಅಬಾನಾ ಮತ್ತು ಪರ್ಪರ್ ಎಂಬ ನದಿಗಳು ಇಸ್ರಾಯೇಲರ ಎಲ್ಲಾ ನದಿ ಹೊಳೆಹಳ್ಳಗಳಿಗಿಂತ ಉತ್ತಮವಾಗಿವೆಯಲ್ಲವೋ? ಸ್ನಾನದಿಂದ ಶುದ್ಧನಾಗುವ ಹಾಗಿದ್ದರೆ ನಾನು ಅವುಗಳಲ್ಲಿಯೇ ಸ್ನಾನಮಾಡಬಹುದಲ್ಲವೇ?” ಎಂದು ಹೇಳಿ, ಬಲು ಸಿಟ್ಟಿನಿಂದ ಹೊರಟುಹೋದನು.


ದೇಶದಲ್ಲಿ ಬೆಟ್ಟಗಳ ಮೇಲೆಲ್ಲಾ ಬೆಳೆಯು ಸಮೃದ್ಧಿಯಾಗಲಿ; ಪೈರುಗಳ ಶಬ್ದವು ಲೆಬನೋನಿನ ಮರಗಳ ಸಪ್ಪಳದಂತಿರಲಿ. ಹೊಲದಲ್ಲಿ ಕಾಯಿಪಲ್ಯದಂತೆ ಪಟ್ಟಣಗಳಲ್ಲಿ ಜನರು ಹೆಚ್ಚಲಿ.


ದಕ್ಷಿಣೋತ್ತರ ದಿಕ್ಕುಗಳನ್ನು ಉಂಟುಮಾಡಿದವನು ನೀನು. ತಾಬೋರ್, ಹೆರ್ಮೋನ್ ಪರ್ವತಗಳು ನಿನ್ನ ನಾಮದಲ್ಲಿ ಆನಂದಧ್ವನಿ ಮಾಡುತ್ತವೆ.


ಸೆನೀರಿನ ತುರಾಯಿ ಮರದಿಂದ ನಿನ್ನ ಹಲಗೆಗಳನ್ನು ಮಾಡುವುದಕ್ಕೆ ಮತ್ತು ನಿನ್ನ ಸ್ತಂಭವನ್ನು ರಚಿಸುವುದಕ್ಕೆ ಲೆಬನೋನಿನಿಂದ ದೇವದಾರು ಮರವನ್ನು ತಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು