ಪರಮಗೀತೆ 4:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಪ್ರಿಯಳೇ, ವಧುವೇ, ನನ್ನ ಹೃದಯವನ್ನು ಅಪಹರಿಸಿರುವೆ ನಿನ್ನ ಒಂದು ಕುಡಿನೋಟದಿಂದ; ನನ್ನ ಹೃದಯವನ್ನು ವಶಮಾಡಿಕೊಂಡಿರುವೆ ನಿನ್ನ ಕಂಠಹಾರದ ಒಂದು ರತ್ನದಿಂದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ನನ್ನ ಪ್ರಿಯಳೇ, ನನ್ನ ವಧುವೇ, ನನ್ನ ಹೃದಯವನ್ನು ನೀನು ಅಪಹರಿಸಿರುವೆ ಒಂದೇ ಕಿರುನೋಟದಿಂದ, ನನ್ನ ಹೃದಯವನ್ನು ವಶಪಡಿಸಿಕೊಂಡಿರುವೆ ನಿನ್ನ ಕಂಠಹಾರದ ಒಂದೇ ರತ್ನದಿಂದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಪ್ರಿಯಳೇ, ವಧುವೇ, ನನ್ನ ಹೃದಯವನ್ನು ಅಪಹರಿಸಿದ್ದೀ, ನಿನ್ನ ಒಂದು ಕಡೆಗಣ್ಣಿನಿಂದ, ನಿನ್ನ ಕಂಠಹಾರದ ಒಂದು ಸರದಿಂದ, ನನ್ನ ಹೃದಯವನ್ನು ವಶಮಾಡಿಕೊಂಡಿದ್ದೀ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ನನ್ನ ಪ್ರಿಯಳೇ, ನನ್ನ ವಧುವೇ, ನೀನು ನನ್ನ ಹೃದಯವನ್ನು ಅಪಹರಿಸಿರುವೆ. ನಿನ್ನ ನೋಟದಿಂದಲೂ ನಿನ್ನ ಮುತ್ತಿನಹಾರದಿಂದಲೂ ನನ್ನ ಹೃದಯವನ್ನು ವಶಪಡಿಸಿಕೊಂಡಿದ್ದಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ನನ್ನ ಹೃದಯವನ್ನು ನೀನು ಸೆಳಕೊಂಡಿರುವೆ. ನನ್ನ ಪ್ರಿಯಳೇ, ನನ್ನ ವಧುವೇ, ನೀನು ನಿನ್ನ ಒಂದೇ ಕಿರುನೋಟದಿಂದಲೂ, ನಿನ್ನ ಕೊರಳಿನ ಒಂದೇ ಕಂಠ ಹಾರದಿಂದಲೂ, ನನ್ನ ಹೃದಯವನ್ನು ಸೆಳಕೊಂಡಿರುವೆ. ಅಧ್ಯಾಯವನ್ನು ನೋಡಿ |
ಹೀಗಿರಲು ರಾಜನು ಗಟ್ಟಿಯಾಗಿ ಕೂಗಿಕೊಂಡು ಮಂತ್ರವಾದಿ, ಪಂಡಿತ, ಶಾಕುನಿಕರನ್ನು ಕರೆಯಿಸಿ ಬಾಬೆಲಿನ ಆ ವಿದ್ವಾಂಸರಿಗೆ, “ಯಾರು ಈ ಬರಹವನ್ನು ಓದಿ, ಇದರ ಅರ್ಥವನ್ನು ನನಗೆ ತಿಳಿಸುತ್ತಾನೋ ಅವನಿಗೆ ನಾನು ಧೂಮ್ರವಸ್ತ್ರವನ್ನು ಹೊದಿಸಿ, ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ, ಅವನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುವೆನು” ಎಂದು ಹೇಳಿದನು.